ಒಡಿಶಾದಲ್ಲಿ ‘ಹರಿಜನ’ ಪದ ಬಳಕೆ ನಿಷೇಧ: ಸರ್ಕಾರ ಆದೇಶ

Date:

ಒಡಿಶಾ ಸರ್ಕಾರವು ತನ್ನ ಎಲ್ಲ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂವಹನಗಳಲ್ಲಿ ‘ಹರಿಜನ’ ಎಂಬ ಪದ ಬಳಕೆಯನ್ನು ನಿಷೇಧಿಸಿದೆ. ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ‘ಹರಿಜನ’ ಎಂಬ ಪದವನ್ನು ಬಳಸದಂತೆ ಸರ್ಕಾರ ಸೂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

‘ಹರಿಜನ’ ಪದದ ಬಳಕೆಯನ್ನು ನಿಷೇಧಿಸಿ ಒಡಿಶಾ ಮಾನವ ಹಕ್ಕುಗಳ ಆಯೋಗ (OHRC) ಹೊರಡಿಸಿದ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಎಸ್‌ಟಿ ಮತ್ತು ಎಸ್‌ಸಿ ಅಭಿವೃದ್ಧಿ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ-ಕಾರ್ಯದರ್ಶಿ ಹೊರಡಿಸಿರುವ ಸುತ್ತೋಲೆಯಲ್ಲಿ, “ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಸೂಚಿಸಲಾದ ‘ಪರಿಶಿಷ್ಟ ಜಾತಿ’ಗಳಿಗೆ ಸೇರಿದವರನ್ನು ಸೂಚಿಸಲು ಇಂಗ್ಲಿಷ್‌ನಲ್ಲಿ ‘ಶೆಡ್ಯೂಲ್ ಕ್ಯಾಸ್ಟ್‌’ ಮತ್ತು ಒಡಿಯಾ ಅಥವಾ ಇತರ ರಾಷ್ಟ್ರೀಯ ಭಾಷೆಗಳಲ್ಲಿ ‘ಅನುಸುಚಿತ ಜಾತಿ’ ಎಂಬ ಪದಗಳನ್ನು ಬಳಸಬೇಕೆಂದು ಸರ್ಕಾರ ಸೂಚಿಸಿದೆ” ಎಂದು ತಿಳಿಸಿದ್ದಾರೆ.

ಈ ಸುತ್ತೋಲೆಯನ್ನು ಎಲ್ಲ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಆಯುಕ್ತ-ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ಜಾತಿ ಪ್ರಮಾಣಪತ್ರಗಳಲ್ಲಿ ಮಾತ್ರವಲ್ಲದೆ ಅಧಿಕೃತ ಸಂವಹನಗಳಲ್ಲಿಯೂ ‘ಹರಿಜನ’ ಪದವನ್ನು ಬಳಸದಂತೆ ನೋಡಿಕೊಳ್ಳಲು ನಿರ್ದೇಶಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಯಾವುದೇ ಅಧಿಕೃತ ಸಂವಹನ, ದಾಖಲೆಗಳು, ವಹಿವಾಟುಗಳು, ಜಾತಿ ಪ್ರಮಾಣಪತ್ರಗಳು, ಪ್ರಕಟಣೆಗಳು, ಇಲಾಖಾ ಹೆಸರುಗಳು ಅಥವಾ ಯಾವುದೇ ಇತರ ರೀತಿಯ ಬಳಕೆಯಲ್ಲಿ ‘ಹರಿಜನ’ ಪದವು ಕಾಣಿಸಿಕೊಳ್ಳದಂತೆ ನೋಡಿಕೊಳ್ಳಲು ಜವಾಬ್ದಾರಿ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸರ್ಕಾರ ಹೇಳಿದೆ.

ಈ ಕುರಿತು ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಮಾಹಿತಿ ನೀಡಬೇಕು. ಅವರಲ್ಲಿ ಅರಿವು ಮೂಡಿಸಬೇಕು. ಅಸ್ತಿತ್ವದಲ್ಲಿರುವ ಎಲ್ಲ ಕಡತಗಳು ಮತ್ತು ದಾಖಲೆಗಳನ್ನು ಹೊಸ ನಿರ್ದೇಶನಕ್ಕೆ ಅನುಗುಣವಾಗಿ ಬದಲಾವಣೆ ಮಾಢಬೇಕು ಎಂದು ಸೂಚಿಸಿದೆ

1982ರಲ್ಲಿಯೇ, ಕೇಂದ್ರ ಸರ್ಕಾರವು ಎಲ್ಲ ರಾಜ್ಯ ಸರ್ಕಾರಗಳು ದಲಿತರನ್ನು ಉಲ್ಲೇಖಿಸಲು ‘ಹರಿಜನ’ ಪದವನ್ನು ಬಳಸದಂತೆ ಕೇಳಿಕೊಂಡಿತ್ತು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸಿದ್ಧಪಡಿಸಿದ ಹೊಸ ಮಾರ್ಗಸೂಚಿಗಳನ್ನು ಅನುಸರಿಸಿ, 2013ರಲ್ಲಿ ಎಲ್ಲ ರಾಜ್ಯಗಳಿಗೆ ಇದೇ ರೀತಿಯ ಆದೇಶವನ್ನು ಹೊರಡಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...