ಒಡಿಶಾ ರೈಲು ದುರಂತ | ಕೋಮುವಾದದ ಬಣ್ಣ ಬಳಿಯಲು ಯತ್ನಿಸಿದವರ ವಿರುದ್ಧ ಪೊಲೀಸ್‌ ಕ್ರಮ

Date:

ಸುಳ್ಳು ಸುದ್ದಿ ಹಬ್ಬಿಸಿದ್ದ ಬಲಪಂಥೀಯರು

ಅಸಲಿಯತ್ತು ಬಹಿರಂಗಪಡಿಸಿದ್ದ ʼಆಲ್ಟ್‌ ನ್ಯೂಸ್‌ʼ

ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತಕ್ಕೆ ಕೋಮುವಾದದ ಬಣ್ಣ ಬಳಿಯಲು ಯತ್ನಿಸಿದ ಬಲಪಂಥೀಯರಿಗೆ ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸುಳ್ಳು ಸುದ್ದಿ ಹರಡಲು ಯತ್ನಸಿದವರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಒಡಿಶಾ ಪೊಲೀಸರು, “ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತಕ್ಕೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದದ ಬಣ್ಣ ಬಳಿಯುತ್ತಿದ್ದಾರೆ. ಈ ಬೆಳವಣಿಗೆ ದುರದೃಷ್ಟಕರ. ಅಪಘಾತ ಸಂಭವಿಸಿದ್ದು ಹೇಗೆ ಎಂಬುದನ್ನು ಪತ್ತೆ ಹಚ್ಚಲು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರು ಈ ರೀತಿಯ ಸುಳ್ಳು ಮತ್ತು ದುರುದ್ದೇಶಪೂರಿತ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು. ಕೋಮು ಸೌಹಾರ್ದತೆಯನ್ನು ಹದಗೆಡಿಸಲು ಯತ್ನಿಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ರೈಲು ಅಪಘಾತ ಸಂಭವಿಸಿದ ಸ್ಥಳದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ, ಆ ಫೋಟೋದಲ್ಲಿ ಕಾಣಸಿಗುವ ಕಟ್ಟಡವೊಂದನ್ನು ಮಸೀದಿ ಎಂದು ಬಿಂಬಿಸಿದ್ದ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು, “ಅಪಘಾತ ಸಂಭವಿಸಿರುವುದು ಶುಕ್ರವಾರ, ರೈಲ್ವೆ ಹಳಿಯ ಪಕ್ಕದಲ್ಲಿ ಮಸೀದಿ ಇದೆ. ಇದೇ ಮಸಿದಿಯಲ್ಲಿ ಅಪಘಾತಕ್ಕೆ ಅಗತ್ಯ ಪ್ರಯೋಗಗಳು ನಡೆದಿವೆ. ಘಟನೆಗೆ ಮುಸ್ಲಿಮರೇ ಕಾರಣ” ಎಂದು ಆರೋಪಿಸಿದ್ದರು.

ಆದರೆ, ಈ ಸುಳ್ಳು ಸುದ್ದಿಯ ಹಿಂದೆ ಬಿದ್ದಿದ್ದ ಸತ್ಯ ಶೋಧನಾ ಸಂಸ್ಥೆ ʼಆಲ್ಟ್‌ ನ್ಯೂಸ್‌ʼ ವೈರಲ್‌ ಫೋಟೋದಲ್ಲಿರುವ ಕಟ್ಟಡದ ಅಸಲಿಯತ್ತನ್ನು ಬಹಿರಂಗ ಪಡಿಸಿತ್ತು. ಘಟನಾ ಸ್ಥಳದಿಂದ ಕೂಗಳತೆ ದೂರದಲ್ಲಿರುವ ಈ ಬಹುಚರ್ಚಿತ ಕಟ್ಟಡ ಮಸೀದಿ ಅಲ್ಲ, ಬದಲಿಗೆ ನಿರ್ಮಾಣ ಹಂತದಲ್ಲಿರುವ ಇಸ್ಕಾನ್‌ ಮಂದಿರ ಎಂಬುದನ್ನು ಫೋಟೋ ಮತ್ತು ವಿಡಿಯೋಗಳ ಮೂಲಕ ಸ್ಪಷ್ಟಪಡಿಸಿತ್ತು.

ಇದರ ಬೆನ್ನಲ್ಲೇ ತನಿಖೆಯ ಪ್ರಾಥಮಿಕ ವರದಿಯನ್ನು ಉಲ್ಲೇಖಿಸಿ ಮಾತನಾಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ” ʼಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ʼ ಮತ್ತು ʼಪಾಯಿಂಟ್‌ ಮಷಿನ್‌ʼಗಳಲ್ಲಿನ ಬದಲಾವಣೆಯಿಂದ ಅಪಘಾತ ಸಂಭವಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ...

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ...