3 ತಿಂಗಳಿನಿಂದ ಕೈಸೇರದ ಪಿಂಚಣಿ; ವೃದ್ಧೆ ಆತ್ಮಹತ್ಯೆ: ಒಡಿಶಾ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

Date:

ಕಳೆದ ಮೂರು ತಿಂಗಳಿನಿಂದ ಪಿಂಚಣಿ ಸಿಗದ ಕಾರಣ ಖಿನ್ನತೆಗೊಳಗಾಗಿ 66 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆನ್ನಲ್ಲೇ ಒಡಿಶಾದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಮೃತರನ್ನು ಗಂಜಾಂ ಜಿಲ್ಲೆಯ ಬೇಗುನಿಯಾಪದ ಬ್ಲಾಕ್‌ನ ಚಾಧೇಯಪದ ಗ್ರಾಮದ 66 ವರ್ಷದ ಬಿ ಸಾಬಿತ್ರಿ ಡೋರಾ ಎಂದು ಗುರುತಿಸಲಾಗಿದೆ. ಈ ಘಟನೆ ಭಾನುವಾರ ನಡೆದಿದ್ದರೂ ಮಂಗಳವಾರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನು ಓದಿದ್ದೀರಾ? ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ: 1.11 ಲಕ್ಷದಿಂದ 3.45 ಲಕ್ಷ ರೂಪಾಯಿಗೆ ಏರಿಕೆ!

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪುತ್ರಿ ಬಿ ಚಂಡಿ ಡೋರಾ, “ನನ್ನ ತಾಯಿ ತನ್ನ ಮೂವರು ಹೆಣ್ಣುಮಕ್ಕಳ ಮದುವೆಯ ನಂತರ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಆಹಾರ ಭದ್ರತಾ ಯೋಜನೆಯಡಿಯಲ್ಲಿ ಮಾಸಿಕ 1,000 ರೂ. ಮತ್ತು 5 ಕೆಜಿ ಅಕ್ಕಿಯ ಮೇಲೆ ಅವರು ಸಂಪೂರ್ಣವಾಗಿ ಅವಲಂಬಿತರಾಗಿದ್ದರು. ಪಿಂಚಣಿ ಮೊತ್ತ ಜಮಾ ಆಗಿದೆಯೇ ಎಂದು ಪರಿಶೀಲಿಸಲು ತನ್ನ ತಾಯಿ ಪದೇ ಪದೇ ಬ್ಯಾಂಕ್‌ಗೆ ಭೇಟಿ ನೀಡುತ್ತಿದ್ದರು” ಎಂದು ತಿಳಿಸಿದ್ದಾರೆ.

ಬೆಗುನಿಯಪದಾ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಮಂತ್ ಮಾತನಾಡಿ, “ಈ ಘಟನೆ ದುರದೃಷ್ಟಕರ. ಆ ಮಹಿಳೆ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆಯಡಿ ಫಲಾನುಭವಿಯಾಗಿದ್ದು, ಮಾರ್ಚ್‌ನಲ್ಲಿ ಕೊನೆಯದಾಗಿ ಪಿಂಚಣಿ ಪಡೆದಿದ್ದರು. ಅವರ ಸಾವಿನ ಮಾಹಿತಿ ಪಡೆದ ನಂತರ, ನಾನು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಪ್ರಾಥಮಿಕ ತನಿಖೆ ನಡೆಸುವಂತೆ ಆದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಗಂಜಾಂ ಜಿಲ್ಲೆಯ ರಾಷ್ಟ್ರೀಯ ಸಾಮಾಜಿಕ ಸಹಾಯ ಕಾರ್ಯಕ್ರಮ (ಎನ್‌ಎಸ್‌ಎಪಿ) ಅಡಿಯಲ್ಲಿ 1.49 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕಳೆದ ಮೂರು ತಿಂಗಳಿನಿಂದ ಮಾಸಿಕ ಪಿಂಚಣಿ ಸಿಕ್ಕಿಲ್ಲ. ಇದು ತಾಂತ್ರಿಕ ಸಮಸ್ಯೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಗಪಹಂಡಿ ಬ್ಲಾಕ್‌ನಲ್ಲಿ ಧರಣಿ ನಡೆಸುತ್ತಿರುವ ಕೈತಖಂಡಿಯ ಸರಪಂಚ ಮನೋರಂಜನ್ ಗೌಡ, “ಹಲವು ಫಲಾನುಭವಿಗಳು ತೀರಾ ನಿರ್ಗತಿಕರು. ಪಿಂಚಣಿ ಮೊತ್ತವನ್ನೇ ಅವಲಂಬಿಸಿದ್ದಾರೆ. ಪಿಂಚಣಿ ನಿಯಮಿತವಾಗಿ ಸಿಗದ ಕಾರಣ ಈಗ ಸಂಕಷ್ಟ ಎದುರಿಸುತ್ತಿದ್ದಾರೆ. ತಕ್ಷಣ ಪಿಂಚಣಿ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಬಡವರಿಗೆ ಮತ್ತು ವೃದ್ಧರಿಗೆ ತಿಂಗಳ ಆಸರೆಯಾಗಿರುವ ಪಿಂಚಣಿಯನ್ನು ಸತತ ಮೂರು ತಿಂಗಳಿನಿಂದ ಸ್ಥಗಿತಗೊಂಡಿರುವುದು ಬಿಜೆಪಿಯ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಸರ್ಕಾರದ ನಿರ್ಲಕ್ಷ್ಯವೇ ಈ ಜೀವಹಾನಿಗೆ ಕಾರಣ ಎಂದು ಆರೋಪಿಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...