ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

Date:

ಇಂದು (ಫೆ.7) ದೇಶಾದ್ಯಂತ ಓಲಾ, ಉಬರ್‌ ರ‍್ಯಾಪಿಡೋ ಸೇರಿಂದತೆ ಎಲ್ಲ ಬೈಕ್‌ , ಆಟೋ, ಟ್ಯಾಕ್ಸಿಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮುಂದಾಗಿವೆ. ತೆಲಂಗಾಣದ ಗಿಗ್ ಮತ್ತು ಪ್ಲಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ ( TGPWU ) ಮತ್ತು ಇತರ ಕಾರ್ಮಿಕ ಸಂಘಗಳ ಸಮನ್ವಯದಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

- Advertisement -

ಇದರಿಂದಾಗಿ ದೇಶದ ಪ್ರಮುಖ ನಗರಗಳಲ್ಲಿ ಶನಿವಾರ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದ್ದು, ದೈನಂದಿನ ಪ್ರಯಾಣದಲ್ಲಿ ಕೆಲ ವ್ಯತ್ಯಾಸಗಳಾಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ತಮ್ಮ ಅಧಿಕೃತ X ಖಾತೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, TGPWU ಫೆಬ್ರವರಿ 7, 2026 ರಂದು ದೇಶಾದ್ಯಂತದ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ʼಅಖಿಲ ಭಾರತ ಮುಷ್ಕರʼದಲ್ಲಿ ಭಾಗವಹಿಸಲಿದ್ದಾರೆ ಎಂದಿದ್ದು, ಕನಿಷ್ಠ ದರಗಳ ಅನುಪಸ್ಥಿತಿ, ನಿಯಂತ್ರಣದ ಕೊರತೆ ಮತ್ತು ಕಾರ್ಮಿಕರ ಮೇಲಿನ ನಿರಂತರ ಶೋಷಣೆಯನ್ನು ಉಲ್ಲೇಖಿಸಿ ಈ ಹೇಳಿಕೆ ನೀಡಲಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬರೆದ ಪತ್ರದಲ್ಲಿ, ದೇಶಾದ್ಯಂತ ಆ್ಯಪ್ ಆಧಾರಿತ ಸಾರಿಗೆ ಕಾರ್ಮಿಕರು ಎದುರಿಸುತ್ತಿರುವ ಅನೇಕ ಸಮಸ್ಯೆಗಳು ವರ್ಷಗಳಿಂದ ಬಗೆಹರಿಯದೆ ಉಳಿದಿವೆ ಎಂದು ತಿಳಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ ಆ್ಯಪ್ ಆಧಾರಿತ ಸಾರಿಗೆ ಸೇವೆಗಳಿಗೆ ಸರ್ಕಾರದಿಂದ ನಿಯಂತ್ರಿತ ದರಗಳು ಇಲ್ಲದಿರುವುದು ಮುಖ್ಯ ಕಳವಳವಾಗಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ಸರ್ಕಾರದ ಯಾವುದೇ ಖಚಿತ ನಿಯಂತ್ರಣ ಮಾರ್ಗಸೂಚಿಗಳಿಲ್ಲದ ಕಾರಣ ಓಲಾ, ಉಬರ್, ರ‍್ಯಾಪಿಡೊ ಮತ್ತು ಪೋರ್ಟರ್‌ನಂತಹ ಕಂಪನಿಗಳು ಆಟೋಗಳು, ಕ್ಯಾಬ್‌ಗಳು ಮತ್ತು ಬೈಕ್ ಟ್ಯಾಕ್ಸಿಗಳಿಗೆ ದರವನ್ನು ತಾವೇ ನಿರ್ಧರಿಸುತ್ತಿವೆ. ಇದರಿಂದಾಗಿ ಚಾಲಕರು ಗಂಭೀರ ಆದಾಯ ಅಸ್ಥಿರತೆ, ಶೋಷಣೆ ಮತ್ತು ಸಮರ್ಥನೀಯವಲ್ಲದ ಹೆಚ್ಚುವರಿ ಸಮಯದ ಕೆಲಸದ ಪರಿಸ್ಥಿತಿಗಳಿಗೆ ಒಳಪಡುವಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇದರಿಂದಾಗಿ ಅಗ್ರಿಗೇಟರ್ ಕಂಪನಿಗಳು ಲಾಭ ಗಳಿಸುವುದನ್ನು ಮುಂದುವರೆಸಿದ್ದರೂ, ಲಕ್ಷಾಂತರ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ ಮತ್ತು ಬಡತನದ ಅಂಚಿಗೆ ತಳ್ಳಲ್ಪಡುತ್ತಿದ್ದಾರೆ ಎಂದು ಒಕ್ಕೂಟ ಆರೋಪಿಸಿದ್ದು, ಈ ಪರಿಸ್ಥಿತಿಯನ್ನು ನಿಭಾಯಿಸಲು ತಕ್ಷಣವೇ ಸರ್ಕಾರ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಚಾಲಕರು ಹಾಗೂ ಒಕ್ಕೂಟದ ಬೇಡಿಕೆಯೇನು?
ಚಾಲಕರ ಜೀವನೋಪಾಯದ ಸರಿಯಾದ ನಿಯಂತ್ರಣ ಮತ್ತು ರಕ್ಷಣೆಗಾಗಿ ಕರೆ ನೀಡುವ 2025 ರ ಮೋಟಾರು ವಾಹನ ಸಂಗ್ರಾಹಕ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ಸರ್ಕಾರದ ಮುಂದೆ ಬೇಡಿಕೆಗಳನ್ನು ಇಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾನ್ಯತೆ ಪಡೆದ ಚಾಲಕ ಸಂಘಗಳೊಂದಿಗೆ ಸಮಾಲೋಚಿಸಿದ ನಂತರ ಆಟೋ, ಕ್ಯಾಬ್‌ ಮತ್ತು ಬೈಕ್ ಟ್ಯಾಕ್ಸಿಗಳಂತಹ ಅಪ್ಲಿಕೇಶನ್ ಆಧಾರಿತ ಸೇವೆಗಳಿಗೆ ಕನಿಷ್ಠ ಮೂಲ ದರಗಳನ್ನು ತಕ್ಷಣ ನಿಗದಿಪಡಿಬೇಕು. ಅಸ್ತಿತ್ವದಲ್ಲಿರುವ ಕಾನೂನುಗಳು ಹಾಗೂ ಮಾರ್ಗಸೂಚಿಗಳ ಪ್ರಕಾರ, ಖಾಸಗಿ, ವಾಣಿಜ್ಯೇತರ ವಾಹನಗಳಲ್ಲಿ ವಾಣಿಜ್ಯ ಪ್ರಯಾಣಿಕರು ಅಥವಾ ಸರಕು ಸಾಗಣೆಗೆ ಬಳಸುವುದನ್ನು ನಿಷೇಧಿಸಬೇಕು. ಇಲ್ಲವೇ, ಅಂತಹ ವಾಹನಗಳನ್ನು ವಾಣಿಜ್ಯ ವಾಹನಗಳಾಗಿ ಪರಿವರ್ತಿಸುವುದನ್ನು ಕಡ್ಡಾಯಗೊಳಿಸಬೇಕು.

ಓಲಾ, ಉಬರ್‌ ರ‍್ಯಾಪಿಡೋ ಸೇರಿಂದತೆ ಎಲ್ಲಾ ಬೈಕ್‌ , ಆಟೋ, ಟ್ಯಾಕ್ಸಿಗಳು ರಾಷ್ಟ್ರವ್ಯಾಪ್ತಿ ಮುಷ್ಕರ ಕೈಗೊಂಡಿದೆಯಾದರೂ ನಾಳೆ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವ ಯಾವುದೇ ದೃಢೀಕರಣವನ್ನು ಈವರೆಗೂ ನೀಡಿಲ್ಲ. ಫೆ.7 ಹಮ್ಮಿಕೊಂಡಿರುವ ಮುಷ್ಕರದಿಂದಾಗಿ ಸಾರಿಗೆ ಸೇವೆಗಳನ್ನು ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ. ಆದಾಗ್ಯೂ, ಇದು ನಗರದಿಂದ ನಗರಕ್ಕೆ ಬದಲಾವಣೆಯಾಗುವ ಸಾಧ್ಯತೆಗಳಿದ್ದು, ಚಾಲಕರು ಎಂದಿನಂತೆ ಯಥಾ ಪ್ರಕಾರ ಸೇವೆ ನೀಡದೆ ಇದ್ದರೂ ಭಾಗಶಃ ಸೇವೆಗಳನ್ನು ನೀಡಬಹುದು ಎಂದು ಹೇಳಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...