ಒಲಿಂಪಿಕ್ಸ್‌ | ‘ಇದು ವಿಧ್ವಂಸಕ ಕೃತ್ಯ’; ಫೋಗಟ್ ಅನರ್ಹತೆಗೆ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಖಂಡನೆ

Date:

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಪ್ರತಿಕ್ರಿಯಿಸಿದ್ದು, ‘ಇದು ನಿಜಕ್ಕೂ ವಿಧ್ವಂಸಕ ಕೃತ್ಯ.’ ಯಾಕೆಂದರೆ, ಫೋಗಟ್‌ರಂತಹ ಗಣ್ಯ ಕ್ರೀಡಾಪಟುಗಳು ಪ್ರಮುಖ ಸ್ಪರ್ಧೆಗಳಿಗೆ ಮುನ್ನ ತೂಕವನ್ನು ಕಡಿಮೆ ಮಾಡುವ ತಂತ್ರಗಳನ್ನು ಚೆನ್ನಾಗಿ ತಿಳಿದಿರುತ್ತಾರೆ ಎಂದು ಹೇಳಿದ್ದಾರೆ.

- Advertisement -

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮತ್ತು ಏಕೈಕ ಪುರುಷ ಬಾಕ್ಸರ್ ವಿಜೇಂದರ್, “ಒಲಿಂಪಿಕ್ಸ್‌ ಫೈನಲ್‌ಗೆ ಮುನ್ನ ಫೋಗಟ್‌ ಅವರ ತೂಕ 100 ಗ್ರಾಂ ಮೀರಿದೆ ಎಂಬುದು ಆಘಾತಕಾರಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಇದು ವಿಧ್ವಂಸಕ ಕೃತ್ಯವಾಗಿದೆ ಎಂದು ನಾನು ಭಾವಿಸುತ್ತೇನೆ. 100 ಗ್ರಾಂ ಎಂಬ ಕಾರಣ ಕೇಳಿದರೆ, ತಮಾಷೆ ಎನ್ನಿಸುತ್ತದೆ. ನಾವು ಕ್ರೀಡಾಪಟುಗಳು ಒಂದು ರಾತ್ರಿಯಲ್ಲಿ 5 ರಿಂದ 6 ಕೆ.ಜಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಇದು ನಿಸ್ಸಂದೇಹವಾಗಿ ಕಷ್ಟ. ಆದರೆ ನಮ್ಮ ಹಸಿವು, ಬಾಯಾರಿಕೆ ಮತ್ತು ತೀವ್ರತರವಾದ ಪರಿಶ್ರಮವನ್ನು ಹೇಗೆ ನಿಯಂತ್ರಿಸಬೇಕೆಂದು ನಮಗೆ ತಿಳಿದಿದೆ,” ಎಂದು ಅವರು ಹೇಳಿದ್ದಾರೆ.

“ನಾನು ವಿಧ್ವಂಸಕ ಎಂದಿದ್ದರಲ್ಲಿ ‘ಭಾರತವು ಕ್ರೀಡಾ ರಾಷ್ಟ್ರವಾಗಿ ಬೆಳೆಯುವುದನ್ನು ನೋಡಲು ಇಷ್ಟಪಡದ ಜನರು’ ಇದ್ದಾರೆ. ಆ ಹುಡುಗಿ ತುಂಬಾ ಅನುಭವಿಸಿದ್ದಾಳೆ. ಆಕೆ ಈ ರೀತಿ ತಪ್ಪು ಮಾಡಿದ್ದಾರೆಂದು ನಂಬಲು ಸಾಧ್ಯವಿಲ್ಲ. ಆಕೆ ಗಣ್ಯ ಕ್ರೀಡಾಪಟು, ಆಕೆಗೆ ತೂಕವನ್ನು ನಿಭಾಯಿಸುವುದು ತಿಳಿದಿದೆ. ತೂಕಕ್ಕಿಂತ ಹೆಚ್ಚಿನದ್ದು ಬೇರೆ ಏನಾದರೂ ಇರಬಹುದು. ಫೋಗಟ್ ಚೆನ್ನಾಗಿದ್ದಾರೆಂದು ನಾನು ಭಾವಿಸುತ್ತೇನೆ. ಈಗ ಆಗಿರುವುದು ಒಳ್ಳೆಯದಲ್ಲ” ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಬೆದರಿಕೆವೊಡ್ಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ 2023ರ ಏಪ್ರಿಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಫೋಗಟ್ ಮುನ್ನಡೆಸಿದ್ದರು. ಪ್ರತಿಭಟನೆ ವೇಳೆ, ಪೊಲೀಸರು ಆಕೆಯನ್ನು ಬಂಧಿಸಿದ್ದರು. ಬೀದಿಯಲ್ಲಿ ಎಳೆದಾಡಿದ್ದರು. ಕೇಂದ್ರ ಸರ್ಕಾರದಿಂದಾದ ಇಂತಹ ಅವಮಾನ, ದೌರ್ಜನ್ಯಗಳನ್ನು ಸಹಿಸಿಕೊಂಡು ಫೋಗಟ್ ಮುನ್ನಡೆದಿದ್ದರು. ಒಲಿಂಪಿಕ್ಸ್‌ನಲ್ಲಿ ಹಲವು ಪಂದ್ಯಗಳನ್ನು ಗೆದ್ದು ಫೈನಲ್‌ವರೆಗೆ ತೆರಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...