ಜಮ್ಮು ಕಾಶ್ಮೀರ ವಿದ್ಯುತ್ ಬಿಕ್ಕಟ್ಟು: ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಒಮರ್ ಅಬ್ದುಲ್ಲಾ ವಾಗ್ದಾಳಿ

Date:

ಸಾಮಾನ್ಯ ಜನರು ವಿದ್ಯುತ್‌ನಂತಹ ಮೂಲ ಸೌಕರ್ಯಗಳಿಗಾಗಿ ಹೆಣಗಾಡುತ್ತಿದ್ದರೆ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಎಲ್ಲ ಐಷಾರಾಮಿ ಸೌಲಭ್ಯಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.

- Advertisement -

ಕಾಶ್ಮೀರದ ಬಂಡಿಪೋರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರಾಡಳಿತ ಪ್ರದೇಶ ಜನರು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಭೀಕರವಾದ ವಿದ್ಯುತ್ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಹೆಚ್ಚಿನ ಕಾಶ್ಮೀರಿಗಳು ಹೆಪ್ಪುಗಟ್ಟುವ ಚಳಿಯ ನಡುವೆ 16 ಗಂಟೆಗಳವರೆಗೆ ವಿದ್ಯುತ್ ಕಡಿತವನ್ನು ಸಹಿಸಿಕೊಳ್ಳಬೇಕಾಗಿದೆ. 2019ರ ಆಗಸ್ಟ್ ನಂತರ ಜನರು ಚಿಂತಿಸಬೇಡಿ, ಎಲ್ಲವೂ ಚೆನ್ನಾಗಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿತು. ಆದರೆ ಬಿಜೆಪಿ ನಗುವುದನ್ನು ಬಿಟ್ಟರೆ ಬೇರೇನು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ರಾಜ್ಯಪಾಲರೆ, ಕನಿಷ್ಠ ಮೂಲಸೌಕರ್ಯವನ್ನು ವ್ಯವಸ್ಥೆ ಮಾಡಿ. ನೀವು ಹೋದಲ್ಲೆಲ್ಲಾ ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡುತ್ತೀರಿ. ಆದರೆ ನಮಗೆ ಇಲ್ಲಿ ಒಂದೇ ಒಂದು ಎಂಜಿನ್ ಕೂಡ ಸಿಗುವುದಿಲ್ಲ. ರಾಜಭವನವು ಏನನ್ನಾದರೂ ಖರೀದಿಸಬೇಕಾದರೆ, ಯಾವುದೇ ಟೆಂಡರ್‌ಗಳ ಅಗತ್ಯವಿಲ್ಲ. ಗವರ್ನರ್ ಸಾಹಬ್ ಅವರ ಐಷಾರಾಮಿ ವಸ್ತುಗಳ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸಬಾರದು ಮತ್ತು ಟೆಂಡರ್ ನೀಡದೆ ತಕ್ಷಣವೇ ಅವರಿಗೆ ವಸ್ತುಗಳನ್ನು ಖರೀದಿಸಬೇಕು ಎಂದು  ಆದೇಶ ನೀಡಲಾಗಿದೆ. ಆದರೆ ಇಲ್ಲಿನ ಜನರು ವಿದ್ಯುತ್‌ ಸಮಸ್ಯೆಯಿಂದ ನಿತ್ಯವು ಬಳಲುತ್ತಿದ್ದಾರೆ” ಎಂದು ಒಮರ್ ಅಬ್ದುಲ್ಲಾ ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣದಂತೆ ದೆಹಲಿಯಲ್ಲೂ ಕಾಂಗ್ರೆಸ್ ಬಿಜೆಪಿಯ ಟೈರ್ ಪಂಕ್ಚರ್ ಮಾಡಲಿದೆ: ರಾಹುಲ್ ಗಾಂಧಿ

“ಕೇಂದ್ರ ಸರ್ಕಾರ ನಮ್ಮ ಅಸಹಾಯಕತೆಯ ಲಾಭವನ್ನು ಪಡೆದಿದೆ. ನಮ್ಮ ಯೋಜನೆಗಳನ್ನು ನಮಗೆ ಹಿಂತಿರುಗಿಸದಂತೆ ನಿಮ್ಮನ್ನು ಯಾವ ಶಕ್ತಿ ತಡೆಯುತ್ತಿದೆ. ವಿದ್ಯುತ್‌ ಸೌಲಭ್ಯ ಪಡೆಯಲು ನಾವು ನಿಮ್ಮ ಮುಂದೆ ಭಿಕ್ಷೆ ಬೇಡಬೇಕೆ” ಎಂದು ಒಮರ್ ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದರು.

ವಿದ್ಯುತ್ ಕಳ್ಳತನವನ್ನು ಕಡಿಮೆ ಮಾಡಲು ಕೇಂದ್ರಾಡಳಿತ ಪ್ರದೇಶದಾದ್ಯಂತ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸುವ ಯೋಜನೆಗೆ ರಾಜ್ಯಪಾಲರು ಕೆಲವು ತಿಂಗಳ ಹಿಂದೆ ಚಾಲನೆ ನೀಡಿದ್ದರು. ಇದರಿಂದ ಸಾರ್ವಜನಿಕರಿಗೆ ವಿದ್ಯುತ್‌ ಸಮಸ್ಯೆಯುಂಟಾದ ಕಾರಣ ಆಗಸ್ಟ್‌ನಲ್ಲಿ ಪ್ರತಿಭಟನೆ ವ್ಯಕ್ತವಾಯಿತು. ಕೆಲವು ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಆದರೆ ಸರ್ಕಾರವು ತನ್ನ ಆದೇಶ ಬದಲಿಸಲಿಲ್ಲ.

ಚಳಿಗಾಲದಲ್ಲಿ ಕಣಿವೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯು ತೀವ್ರವಾಗಿ ಕುಸಿಯುತ್ತದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿದ್ಯುತ್ ಬೇಡಿಕೆ 3,200 ಮೆಗಾವ್ಯಾಟ್‌ಗೆ ಏರಿಕೆಯಾಗಿದೆ. ಆದರೆ ಬೇಸಿಗೆಯ ಅವಧಿಯಲ್ಲಿ 1,350 ಮೆಗಾವ್ಯಾಟ್‌ಗಳ ಆಂತರಿಕ ಉತ್ಪಾದನೆ ಮಾತ್ರ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...