ವಂದತಿಗೆ ಕಿವಿಗೊಡಬೇಡಿ, ಸರತಿ ಸಾಲಲ್ಲಿ ನಿಂತರೆ ಪೆಟ್ರೋಲ್ ಪಂಪ್‌ ಬಂದ್ ಮಾಡಬೇಕಾಗುತ್ತೆ: ಒಮರ್ ಅಬ್ದುಲ್ಲಾ ಎಚ್ಚರಿಕೆ

Date:

ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಇಂಧನ ಕೊರತೆಯ ಆತಂಕ ಸೃಷ್ಟಿಯಾಗಿದೆ. ಹಲವೆಡೆ ಜನರು ಪೆಟ್ರೋಲ್ ಬಂಕ್‌ಗಳಲ್ಲಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇವೆಲ್ಲವುದರ ನಡುವೆ ವದಂತಿಗೆ ಕಿವಿಗೊಡಬೇಡಿ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಹಾಗೆಯೇ, ಪೆಟ್ರೋಲ್ ಪಂಪ್‌ಗಳಲ್ಲಿ ಹೀಗೆಯೇ ಸರತಿ ಸಾಲಿನಲ್ಲಿ ನಿಲ್ಲುವುದು ಮುಂದುವರಿಸಿದರೆ ಕೆಲವು ದಿನಗಳವರೆಗೆ ಪೆಟ್ರೋಲ್ ಪಂಪ್‌ಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

- Advertisement -

ಪೆಟ್ರೋಲ್ ಪಂಪ್‌ಗಳಲ್ಲಿ ದೀರ್ಘ ಸರತಿ ಸಾಲುಗಳಿರುವ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, “ಕೇಂದ್ರಾಡಳಿತ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಅಥವಾ ಎಲ್‌ಪಿಜಿ ಕೊರತೆಯಿಲ್ಲ. ಜನರು ಪೆಟ್ರೋಲ್ ಪಂಪ್‌ಗಳ ಹೊರಗೆ ಬೀಡುಬಿಡುವುದನ್ನು ನಿಲ್ಲಿಸಿ” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕೋವಿಡ್ ಕಾಲದಂತೆಯೇ ಎಲ್‌ಪಿಜಿ ಬಿಕ್ಕಟ್ಟನ್ನೂ ಜಯಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

“ನೀವು ಅನಗತ್ಯವಾಗಿ ಸಾಲಾಗಿ ನಿಲ್ಲುವುದನ್ನು ನಿಲ್ಲಿಸಬೇಕು ಎಂಬುದು ನನ್ನ ಪ್ರಾಮಾಣಿಕ ವಿನಂತಿ. ಇಲ್ಲದಿದ್ದರೆ ಮುಂದಿನ ಕೆಲವು ದಿನಗಳವರೆಗೆ ನಾನು ಎಲ್ಲಾ ಪೆಟ್ರೋಲ್ ಪಂಪ್‌ಗಳನ್ನು ಮುಚ್ಚಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಸರ್ಕಾರದ ಪರಿಶೀಲಿಸಿದಾಗ ಇಂಧನ ಮತ್ತು ಅಡುಗೆ ಅನಿಲ ಸಾಕಷ್ಟು ಇದೆ ಎಂದು ದೃಢವಾಗಿದೆ. ಪರಿಸ್ಥಿತಿ ಬದಲಾಗಿಲ್ಲ. ಸರ್ಕಾರದ ಮಾತು ಯಾರೂ ಕೇಳಲ್ಲ. ಆದರೆ ಎಲ್ಲರೂ ವದಂತಿಗಳನ್ನು ನಂಬುತ್ತಾರೆ ಎಂಬುದು ವಿಷಾದಕರ. ಇಂಧನ ಬಳಕೆಯನ್ನು ನಿರ್ಬಂಧಿಸುವ ಸ್ಥಿತಿಯೇ ಬಂದಿಲ್ಲ” ಎಂದು ಅಬ್ದುಲ್ಲಾ ಸ್ಪಷ್ಟಪಡಿಸಿದರು.

“ಕೊರತೆ ಇಲ್ಲದಿದ್ದರೂ ಜನರು ಆತಂಕಕ್ಕೆ ಒಳಗಾಗಿ ಅಗತ್ಯಕ್ಕಿಂತ ಅಧಿಕ ಖರೀದಿ ಮಾಡುವುದರಿಂದಾಗಿ ಪೂರೈಕೆ ಸರಪಳಿಗೆ ಅಡ್ಡಿಯಾಗಬಹುದು. ಆದ್ದರಿಂದ ಸಾಮಾನ್ಯವಾಗಿ ಬಳಸುವಷ್ಟೇ ಖರೀದಿ ಮಾಡಿ” ಎಂದು ನಾಗರಿಕರಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ ಬಳಿಕ ದಾಳಿ ಪ್ರತಿದಾಳಿ ನಡೆಯುತ್ತಲೇ ಇದೆ. ತನ್ನ ಹಡಗುಗಳ ಮೇಲೆ ಇಸ್ರೇಲ್, ಅಮೆರಿಕ ದಾಳಿ ನಡೆಸುತ್ತಿದ್ದಂತೆ ತೈಲ ರಫ್ತಿಗೆ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಸಾಗಾಟವನ್ನು ಇರಾನ್ ಬಂದ್ ಮಾಡಿದೆ. ಇದು ಜಾಗತಿಕವಾಗಿ ತೈಲ ಸರಬರಾಜಿಗೆ ಹೊಡೆತ ನೀಡಿದೆ.

ಇದನ್ನು ಓದಿದ್ದೀರಾ? ಇರಾನ್ ಯುದ್ಧ | ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ; ಬಂದ್‌ ಆಗಲಿವೆ ಹೋಟೆಲ್‌ಗಳು!

ಈಗಾಗಲೇ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಕ್ರಮವಾಗಿ ದುಪ್ಪಟ್ಟು ಹಣಕ್ಕೆ ಸಿಲಿಂಡರ್ ಮಾರಾಟ ದಂಧೆಯೂ ನಡೆಯುತ್ತಿದೆ. ಇವೆಲ್ಲವುದರ ನಡುವೆ ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಜಾಗತಿಕವಾಗಿ ಎದುರಾಗಬಹುದಾದ ದೀರ್ಘಕಾಲದ ಸವಾಲುಗಳನ್ನು ಎದುರಿಸಲು ಭಾರತೀಯರು ಕೋವಿಡ್ ಸಮಯದಲ್ಲಿ ತೋರಿದ ಒಗ್ಗಟ್ಟಿನಂತೆಯೇ ಸಿದ್ಧರಾಗಿರಬೇಕು. ಯುದ್ಧದಿಂದಾಗಿ ತೈಲ ಮತ್ತು ರಸಗೊಬ್ಬರಗಳ ಬೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹೇಗೆ ಪರಿಸ್ಥಿತಿಯನ್ನು ನಿಭಾಯಿಸಲಾಯಿತೋ, ಅದೇ ರೀತಿ ಈಗಲೂ ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಈ ಹೇಳಿಕೆಯು ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಕೋವಿಡ್‌ನಂತೆಯೇ ಸಮಸ್ಯೆ ಉಂಟಾಗಬಹುದು ಎಂದು ಜನರು ಅಗತ್ಯ ವಸ್ತುಗಳನ್ನು ಹೆಚ್ಚುವರಿ ಖರೀದಿಸಲು ಮುಂದಾಗಿದ್ದಾರೆ. ಪೆಟ್ರೋಲ್ ಕೂಡಾ ಅಗತ್ಯಕ್ಕಿಂತ ಅಧಿಕ ಸಂಗ್ರಹಿಸಲು ಶುರು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...