ಜಮ್ಮು ಕಾಶ್ಮೀರದಲ್ಲಿ ಉದ್ದೇಶಪೂರ್ವಕವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ: ಒಮರ್, ಮೆಹಬೂಬಾ ಆರೋಪ

Date:

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ ಚುನಾವಣೆಯನ್ನು ಕೇಂದ್ರ ಬಿಜೆಪಿ ಸರ್ಕಾರ “ಉದ್ದೇಶಪೂರ್ವಕವಾಗಿ ಮುಂದೂಡುತ್ತಿದೆ” ಎಂದು ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಅವಧಿಯು ಈ ವರ್ಷ ಕೊನೆಗೊಳ್ಳಬೇಕಿದೆ.

ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಬಿಜೆಪಿಯ ಉದ್ದೇಶಗಳ ಬಗ್ಗೆ ನನಗೆ ಅನುಮಾನವಿದೆ. ದಿನಾಂಕಗಳನ್ನು ಸೂಚಿಸುವ ಮೊದಲೇ ಬಿಜೆಪಿಯು ಕೆಲವು ತಪ್ಪುಗಳನ್ನು ಮಾಡುತ್ತದೆ ಎಂಬ ಬಗ್ಗೆ ನನಗೆ ಆತಂಕವಿದೆ. ಉದ್ಧವ್ ಠಾಕ್ರೆ ಗೆಲ್ಲುತ್ತಾರೆ ಎಂದು ತಿಳಿದಿದ್ದ ಮುಂಬೈನಲ್ಲಿ ಬಿಜೆಪಿ ಮಾಡಿದ ರೀತಿಯಲ್ಲಿಯೇ ಜಮ್ಮು ಕಾಶ್ಮೀರದಲ್ಲಿಯೂ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ವಿಳಂಬಗೊಳಿಸಿದರೆ ಆಶ್ಚರ್ಯಪಡಬೇಡಿ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹ ಎಂ ಎಸ್‌ ಸ್ವಾಮಿನಾಥನ್‌ ನಿಧನ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಮ್ಮು ಮತ್ತು ಕಾಶ್ಮೀರದ ಜನರು ಮತದಾನದ ಮೂಲಕ ಶಿಕ್ಷಿಸುತ್ತಾರೆ ಎಂದು ತಿಳಿದಿರುವ ಕಾರಣ ಬಿಜೆಪಿಯು ಚುನಾವಣೆ ನಡೆಸುವ ಮನಸ್ಥಿತಿಯಲ್ಲಿಲ್ಲ. ಕಣಿವೆ ರಾಜ್ಯದಲ್ಲಿ ಈಗ ಶೇ. 80 ರಷ್ಟು ಜನರು ಬಿಜೆಪಿಯನ್ನು ಇಷ್ಟಪಡುವುದಿಲ್ಲ ಎಂಬುದು ವಿಳಂಬಕ್ಕೆ ನಿಜವಾದ ಕಾರಣ. ಜನರ ಕೋಪವನ್ನು ಎದುರಿಸಲು ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ನಾಯಕತ್ವವು ತನ್ನ ಜನವಿರೋಧಿ ನೀತಿಗಳು ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ ಎಲ್ಲ ರಂಗಗಳಲ್ಲಿನ ವೈಫಲ್ಯದಿಂದಾಗಿ ತನ್ನ ನಿರ್ಬಂಧಿತ ದ್ವೇಷ ಮೂಡಿಸುವ ಅಜೆಂಡವನ್ನು ಜನರ ಮನಸ್ಸಿನಲ್ಲಿ ತುಂಬುತ್ತಿದೆ” ಎಂದು ಒಮರ್ ಅಬ್ದುಲ್ಲಾ ಹೇಳಿದರು.

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಕುರಿತು ಬಿಜೆಪಿಯ ನಿಲುವು ವ್ಯತಿರಿಕ್ತವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕೇಸರಿ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪರಿಸ್ಥಿತಿ ಸುಧಾರಿಸಿದೆ ಮತ್ತು ಜನರು ಸಂತೋಷವಾಗಿದ್ದಾರೆ ಎಂದು ಹೇಳುತ್ತಾರೆ. ಅದೇ ಸಮಯದಲ್ಲಿ, ಕಣಿವೆ ನಾಡಿನಲ್ಲಿ ಭದ್ರತಾ ಪರಿಸ್ಥಿತಿ ಸರಿಯಾಗಿಲ್ಲ ಮತ್ತು ಚುನಾವಣೆಗಳನ್ನು ನಡೆಸಲಾಗುವುದಿಲ್ಲ ಎಂದು ಸರ್ಕಾರ ಈಗ ಹೇಳುತ್ತದೆ” ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿ ಜಮ್ಮು ಕಾಶ್ಮೀರದ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಎರಡು ದಿನಗಳ ನಂತರ ಇಬ್ಬರು ನಾಯಕರು ಹೇಳಿಕೆಗಳು ನೀಡಿದ್ದಾರೆ.

ಹಲವಾರು ಬಿಜೆಪಿ ನಾಯಕರು ಜಮ್ಮು ಕಾಶ್ಮೀರದಲ್ಲಿ ಮತದಾರರ ಮೇಲೆ ದಾಳಿ ಮಾಡಲು ಉಗ್ರಗಾಮಿಗಳು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವಿಳಂಬದ ಬಗ್ಗೆ ಇತ್ತೀಚಿಗೆ ಸುಳಿವು ನೀಡಿದ್ದರು. 2024ಕ್ಕೆ ನಿಗದಿಯಾಗಿರುವ ಲೋಕಸಭೆ ಚುನಾವಣೆಯತ್ತ ಗಮನಹರಿಸುವಂತೆ ಸ್ಥಳೀಯ ನಾಯಕರಿಗೆ ಶಾ ನಿರ್ದೇಶಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ಐದು ವರ್ಷಗಳ ಅವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಶ್ರೀನಗರ ಮುನ್ಸಿಪಲ್ ಕಾರ್ಪೊರೇಶನ್ ಮತ್ತು ಜಮ್ಮು ಮುನ್ಸಿಪಲ್ ಕಾರ್ಪೊರೇಶನ್‌ನ ಅವಧಿಯೂ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದೆ. ಕೇಂದ್ರಡಳಿತ ಪ್ರದೇಶದಲ್ಲಿ ಪಂಚಾಯತ್ ಚುನಾವಣೆಗಳು ನವೆಂಬರ್-ಅಕ್ಟೋಬರ್‌ನಲ್ಲಿ ನಡೆಯಬೇಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ...