ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ಪ್ರಕಾಶ್ ರಾಜ್; ವಾಂಗ್​ಚುಕ್ ಹೋರಾಟಕ್ಕೆ ಬೆಂಬಲ

Date:

ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮಾರ್ಚ್ 6ರಂದು ‘ಕ್ಲೈಮೇಟ್ ಫಾಸ್ಟ್’ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಆಂದೋಲನಕ್ಕೆ ಪರಿಸರವಾದಿಗಳು, ಸ್ಥಳೀಯ ಜನರು, ಹಲವಾರು ಸೆಲೆಬ್ರಿಟಿಗಳು, ವಿವಿಧ ಸಮುದಾಯಗಳು ಬೆಂಬಲ ನೀಡುತ್ತಿವೆ. ಆದರೆ, ಕೇಂದ್ರ ಸರ್ಕಾರ ಅವರ ಹೋರಾಟಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

- Advertisement -

ಈ ನಡುವೆ ಇಂದು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಲಡಾಖ್‌ಗೆ ತೆರಳಿರುವ ಖ್ಯಾತ ನಟ ಪ್ರಕಾಶ್ ರಾಜ್, ಹೋರಾಟದಲ್ಲಿ ಭಾಗವಹಿಸುವ ಮೂಲಕ ಸೋನಮ್ ವಾಂಗ್​ಚುಕ್ ಅವರನ್ನು ಬೆಂಬಲಿಸಿದ್ದಾರೆ. ಈ ಕುರಿತು ಅವರು ಟ್ವಿಟರ್​ನಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಸೋನಮ್ ವಾಂಗ್​ಚುಕ್ ಅವರನ್ನು ಬೆಂಬಲಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ” ಎಂದು ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

“ಇಂದು ನನ್ನ ಬರ್ತ್​ಡೇ. ಹೀಗಾಗಿ ನಾನು ಈ ದಿನವನ್ನು ಲೇಹ್ ಲಡಾಖ್‌ನಲ್ಲಿ ಕಳೆಯಲು ನಿರ್ಧರಿಸಿದೆ. ಈ ಜನ ತಮಗಾಗಿ ಹೋರಾಡುತ್ತಿಲ್ಲ. ಇಲ್ಲಿನ ಜನರು ನಮ್ಮ ದೇಶ, ನಮ್ಮ ಪರಿಸರ ಮತ್ತು ನಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಿದ್ದಾರೆ. ಅವರ ಬೆಂಬಲಕ್ಕೆ ನಿಲ್ಲೋಣ” ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಇದರಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಕಂಡು ಬಂದಿದೆ.

“ಲಡಾಖ್ ಮತ್ತು ಹಿಮಾಲಯವನ್ನು ಉಳಿಸಿ” ಎಂಬ ವಾಂಗ್‌ಚುಕ್ ಅವರ ಉಪವಾಸ 21 ದಿನಗಳನ್ನು ತಲುಪಿದೆ. ಪ್ರತಿಭಟನೆಗೆ ರಾಜಕೀಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವಾಂಗ್​ಚುಕ್ ಟ್ವೀಟ್ ಮಾಡಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಅವರು ಅಪ್‌ಡೇಟ್‌ ನೀಡುತ್ತಾ ಬರುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಶೀಘ್ರವೇ ಸ್ಪಂದನೆ ಸಿಗುವ ಭರವಸೆಯಲ್ಲಿ ಅವರಿದ್ದಾರೆ.

ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್​ಚುಕ್, ಬಾಲಿವುಡ್ ನಟ ಅಮೀರ್ ಖಾನ್, ಕರೀನಾ ಕಪೂರ್, ಬೊಮನ್ ಇರಾನಿ ನಟನೆಯ, ರಾಜ್‌ಕುಮಾರ್ ಹಿರಾನಿ ನಿರ್ದೇರ್ಶನದ ‘ತ್ರೀ ಈಡಿಯಟ್ಸ್(3 idiots) ಸಿನಿಮಾಕ್ಕೆ ಪ್ರೇರಣೆಯಾಗಿದ್ದರು.

ಪ್ರಕಾಶ್ ರೈ ಅವರು ಸಿನಿಮಾ ಜೊತೆಗೆ ಅನೇಕ ಸಾಮಾಜಿಕ ಕೆಲಸ ಮಾಡುವ ಮೂಲಕವೂ ಗುರುತಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಜನವಿರೋಧಿ ನಡೆಗಳ ಟೀಕಾಕಾರರಾಗಿ ಗುರುತಿಸಿಕೊಂಡಿದ್ದಾರೆ. ಇದರಿಂದ ಬಿಜೆಪಿ ಹಾಗೂ ಸಂಘಪರಿವಾರದ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...