ಜಾತಿ ದೌರ್ಜನ್ಯ | ದಲಿತ ಯುವಕನ ಮೇಲೆ ಹಲ್ಲೆ: ತಲೆ ಬೋಳಿಸಿ, ಅರೆನಗ್ನಗೊಳಿಸಿ ಮೆರವಣಿಗೆ

Date:

ದಲಿತ ಯುವಕ ಹರ್ಜೋತ್ ಸಿಂಗ್ ಮೇಲೆ ಹಲ್ಲೆ ನಡೆಸಿ, ನಂತರ ಬಲವಂತವಾಗಿ ತಲೆ ಬೋಳಿಸಿ ಕಪ್ಪು ಬಣ್ಣ ಬಳಿದು ಅರೆನಗ್ನ ಮೆರವಣಿಗೆ ನಡೆಸಿದ ಘಟನೆ ಪಂಜಾಬ್‌ನ ಲುಧಿಯಾನದ ಹೊರವಲಯದಲ್ಲಿರುವ ಸೀದಾ ಗ್ರಾಮದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

ಯುವಕನ ಸ್ನೇಹಿತ ಮತ್ತು ಗ್ರಾಮದ ಯುವತಿಯೊಬ್ಬಳು ಮನೆ ತೊರೆದು ಹೋಗಿದ್ದು, ಅವರಿಗೆ ಈ ಯುವಕನೇ ಸಹಾಯ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ಕುಟುಂಬಸ್ಥರು ಈ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿ ಸದ್ಯ ಓರ್ವನ ಬಂಧನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ

ಹರ್ಜೋತ್ ತನ್ನ ಸ್ನೇಹಿತ ಮತ್ತು ಯುವತಿಯ ವಿವಾಹವನ್ನು ಜೂನ್ 19ರಂದು ನಡೆಸಿದ್ದಾನೆ ಎಂದು ಕುಟುಂಬಸ್ಥರು ಆರೋಪ. ಈ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ, ಹರ್ಜೋತ್ ಸಲೂನ್‌ನಲ್ಲಿದ್ದಾಗ ಕೆಲವರು ಸಲೂನ್‌ಗೆ ನುಗ್ಗಿ ಹರ್ಜೋತ್‌ನನ್ನು ಹೊರಗೆ ಎಳೆದುಕೊಂಡು ಹೋಗಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ.

ಬಲವಂತವಾಗಿ ಯುವಕನ ಗಡ್ಡ ಮತ್ತು ಮೀಸೆಯನ್ನು ಬೋಳಿಸಲಾಗಿದ್ದು, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಟ್ಟೆಗಳನ್ನು ಹರಿದು ಅರೆಬೆತ್ತಲೆಯಾಗಿ ಬೀದಿಗಳಲ್ಲಿ ಮೆರವಣಿಗೆ ಮಾಡಿ ಜಾತಿ ನಿಂದನೆ ಮಾಡಲಾಗಿದೆ. ಈ ಕೃತ್ಯದ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲೂ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮೂತ್ರ ವಿಸರ್ಜಿಸಿ ವಿಕೃತಿ

ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದವರನ್ನು ಗುರುಪ್ರೀತ್ ಅಲಿಯಾಸ್ ಗೋಪಾ, ಸಿಮ್ರನ್‌ಜೀತ್ ಸಿಂಗ್ ಅಲಿಯಾಸ್ ಸಿಮ್ಮಾ, ಸಂದೀಪ್ ಅಲಿಯಾಸ್ ಸ್ಯಾಮ್, ರಾಜ್‌ವೀರ್ ಮತ್ತು ರಮಣದೀಪ್ ಅಲಿಯಾಸ್ ಕಾಕಾ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2) (ಅಪರಾಧಕ್ಕೆ ಪ್ರಚೋದನೆ), ಮತ್ತು 351(ಬೆದರಿಕೆ) ಹಾಗೂ ಐಟಿ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಸಿಮ್ರನ್‌ಜೀತ್ ಸಿಂಗ್ ಅನ್ನು ಬಂಧಿಸಲಾಗಿದೆ ಎಂದು ಮೆಹರ್ಬನ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಪರಮದೀಪ್ ಸಿಂಗ್ ದೃಢಪಡಿಸಿದ್ದಾರೆ. ಉಳಿದ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಒಳಪಡಿಸಲಾಗುವುದು ಎಂದೂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...