ಒಂದು ಜಿಲ್ಲೆ, ಒಂದು ಬೇಡಿಕೆ: ಇಂದು ಸಿಜೆಪಿ ದೇಶವ್ಯಾಪಿ ಪ್ರತಿಭಟನೆ, ಕೇಂದ್ರದೊಂದಿಗೆ 2ನೇ ಸುತ್ತಿನ ಮಾತುಕತೆ

Date:

‘ಒಂದು ಜಿಲ್ಲೆ, ಒಂದು ಬೇಡಿಕೆ’ ಎಂಬ ಘೋಷವಾಕ್ಯದಡಿ ನೀಟ್ (NEET) ಪರೀಕ್ಷಾ ಅಕ್ರಮವನ್ನು ಖಂಡಿಸಿ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಶುಕ್ರವಾರ ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಇದೇ ವೇಳೆ, ಬಿಕ್ಕಟ್ಟು ಶಮನಕ್ಕಾಗಿ ಕೇಂದ್ರ ಸರ್ಕಾರದೊಂದಿಗೆ ಇಂದು ಮಧ್ಯಾಹ್ನ 12.30ಕ್ಕೆ ಎರಡನೇ ಸುತ್ತಿನ ಮಹತ್ವದ ಮಾತುಕತೆಯೂ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು ದೇಶದ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಶಾಂತಿಯುತ ಧರಣಿ ನಡೆಸುವಂತೆ ತನ್ನ ಬೆಂಬಲಿಗರು, ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಸಂಘಟನೆಗಳಿಗೆ ಅದು ಕರೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇನ್ನೊಂದೆಡೆ, ನೀಟ್ ವಿವಾದವು ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಭಾರಿ ಕೋಲಾಹಲ ಸೃಷ್ಟಿಸಿದೆ. ಶುಕ್ರವಾರ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನ ‘ಮಕರ ದ್ವಾರ’ದ ಬಳಿ ಜಮಾಯಿಸಿದ ವಿರೋಧ ಪಕ್ಷಗಳ ನಾಯಕರು, ‘ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ’ ಎಂಬ ಬಿತ್ತಿಪತ್ರಗಳನ್ನು ಹಿಡಿದು ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ರಾಜೀನಾಮೆ ಪಡೆಯುವವರೆಗೂ ಸದನದಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ.

ವಿದ್ಯಾರ್ಥಿಗಳ ಆಕ್ರೋಶ ಮಿತಿಮೀರುತ್ತಿದ್ದಂತೆ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದೆ. ಗುರುವಾರ ತಡರಾತ್ರಿ ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ದಿಢೀರ್ ಎತ್ತಂಗಡಿ ಮಾಡಿದ್ದು, ಅವರ ಸ್ಥಾನಕ್ಕೆ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಕಾರ್ಯದರ್ಶಿಯಾಗಿ ನೇಮಿಸಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರೇ ಈ ಕಠಿಣ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರವು ಈಗಾಗಲೇ ‘ಫಾಸ್ಟ್ ಟ್ರ್ಯಾಕ್’ (ತ್ವರಿತಗತಿ) ನ್ಯಾಯಾಲಯವನ್ನು ರಚಿಸಿ ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ವಾರ ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಹಿತ ಕಾಯುವ ಕಠಿಣ ಕಾನೂನು ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಈ ಎಲ್ಲ ಗದ್ದಲಗಳ ನಡುವೆ ದೆಹಲಿ ವಿಶ್ವವಿದ್ಯಾಲಯವು (ಡಿಯು) ತನ್ನ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಕಟ್ಟುನಿಟ್ಟಿನ ಎಚ್ಚರಿಕೆ ರವಾನಿಸಿದೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಪ್ರತಿಭಟನೆಗಳಿಂದ ಸಂಪೂರ್ಣವಾಗಿ ದೂರವಿರುವಂತೆ ಸೂಚಿಸಿದ್ದು, ಧರಣಿಯಲ್ಲಿ ಪಾಲ್ಗೊಂಡರೆ ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಮತ್ತು ಭವಿಷ್ಯದ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...