ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದಾಗ ವಿದ್ಯುತ್ ಅವಘಡ ಸಂಭವಿಸಿ ಕನಿಷ್ಠ ಒಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಜಾರ್ಖಂಡ್ ರಾಜಧಾನಿ ರಾಂಚಿಯಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಘೋಡ್ಥಂಭ ಪೊಲೀಸ್ ಹೊರಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 11:30 ಸುಮಾರಿಗೆ ಈ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ ಚುನಾವಣೆ | ಈದ್, ಮೊಹರಂಗೆ 2 ಉಚಿತ ಗ್ಯಾಸ್ ಸಿಲಿಂಡರ್; ಅಮಿತ್ ಶಾ ಭರವಸೆ
‘ತಾಜಿಯಾ’ದ ಮೇಲ್ಭಾಗವು ತಂತಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಗಿರಿದಿಹ್ ಉಪ ಆಯುಕ್ತ (ಡಿಸಿ) ರಾಮ್‌ನಿವಾಸ್ ಯಾದವ್ ತಿಳಿಸಿದ್ದಾರೆ.
“ಕೆಲವರು ತಾಜಿಯಾವನ್ನು ಹಾಕುತ್ತಿದ್ದಾಗ, ಅದು ಹೈಟೆನ್ಷನ್ ತಂತಿಗೆ ತಗುಲಿತು. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಗಾಯಾಳುಗಳನ್ನು ಗಿರಿದಿಹ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
