​’ಒಂದು ದೇಶ, ಒಂದು ಚುನಾವಣೆ’ ಎಂಬುದು ‘ಒಂದು ದೇಶ, ಒಂದು ಪಕ್ಷ’ದ ಮುಖವಾಡ: ಮುಂಬೈನಲ್ಲಿ ಸಿಜೆಪಿ ಆಕ್ರೋಶ

Date:

‘ಒಂದು ದೇಶ, ಒಂದು ಚುನಾವಣೆ’ (One Nation, One Election) ಎಂಬ ಪ್ರಸ್ತಾವನೆಯು ವಾಸ್ತವದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ‘ಒಂದು ದೇಶ, ಒಂದು ಪಕ್ಷ’ (One Nation, One Party) ಎಂಬ ಗುರಿಯನ್ನು ಮರೆಮಾಚುವ ತಂತ್ರವಾಗಿದೆ ಎಂದು ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕ ಅಭಿಜೀತ್ ದೀಪ್ಕೆ ವಾಗ್ದಾಳಿ ನಡೆಸಿದ್ದಾರೆ.

- Advertisement -

​ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಹಾಗೂ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (SIR) ವಿವಾದಕ್ಕೆ ಸಂಬಂಧಿಸಿದಂತೆ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ನೇಶ್ ಕುಮಾರ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಿಜೆಪಿ ವತಿಯಿಂದ ಗಾಂಧಿ ಜಯಂತಿಯಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದೀಪ್ಕೆ, ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡದಿದ್ದರೆ, ಈ ಹೋರಾಟವು ಮುಂಬೈನಿಂದ ದೇಶಾದ್ಯಂತ ಎಲ್ಲ ನಗರಗಳಿಗೂ ವ್ಯಾಪಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

​ಸಿಇಸಿ ‘ಮತಗಳ ಕಳ್ಳ’ ಎಂದ ಸಿಜೆಪಿ:

“ಚುನಾವಣಾ ಆಯೋಗದ ಮೇಲಿನ ಸಾರ್ವಜನಿಕರ ವಿಶ್ವಾಸ ಕುಸಿದಿದೆ. ಜನರು ಈಗ ಗ್ಯಾನೇಶ್ ಕುಮಾರ್ ಅವರನ್ನು ‘ಮತಗಳ ಕಳ್ಳ’ ಎಂದು ನೋಡುತ್ತಿದ್ದಾರೆ. ಅವರು ಈ ಕೂಡಲೇ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು” ಎಂದು ಸಿಜೆಪಿ ನಾಯಕರು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ತಮ್ಮ ಪಕ್ಷದ ಪ್ರತಿಭಟನಾಕಾರರನ್ನು ಬಂಧಿಸುವಂತೆ ದೀಪ್ಕೆ ಸವಾಲು ಹಾಕಿದರು. ಕೇವಲ ಎರಡು ತಿಂಗಳ ಹಿಂದಷ್ಟೇ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪತ್ರಿಕೆ ಸೋರಿಕೆ ವಿರುದ್ಧ ಹೋರಾಟ ಮಾಡಿದ್ದೆವು, ಈಗ ಪ್ರಜಾಪ್ರಭುತ್ವ ಉಳಿಸಲು ಮತ್ತೆ ಬೀದಿಗಿಳಿಯುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

​ಗಣ್ಯರ ಬೆಂಬಲ, ಶಬಾನಾ ಆಜ್ಮಿ ಭಾಗಿ:

ಶಿವಾಜಿ ಪಾರ್ಕ್‌ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಿರಿಯ ನಟಿ ಶಬಾನಾ ಆಜ್ಮಿ, ನಟ ನಾಸಿರುದ್ದೀನ್ ಷಾ, ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಮತ್ತು ಸಾಮಾಜಿಕ ಕಾರ್ಯಕರ್ತ ತುಷಾರ್ ಗಾಂಧಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಶಬಾನಾ ಆಜ್ಮಿ, “ಮತದಾನ ಮಾಡುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವುದನ್ನು ಪ್ರಶ್ನಿಸುವುದು ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನಮ್ಮ ಸಾಂವಿಧಾನಿಕ ಹಕ್ಕಾಗಿದೆ” ಎಂದು ಪ್ರತಿಪಾದಿಸಿದರು. ಈ ಹೋರಾಟಕ್ಕೆ ಶಿವಸೇನೆ (ಯುಬಿಟಿ) ಹಾಗೂ ಎಂಎನ್ಎಸ್ (MNS) ಬೆಂಬಲ ವ್ಯಕ್ತಪಡಿಸಿವೆ.

​ಅಖಿಲೇಶ್ ಯಾದವ್ ಕಳವಳ, ಇಂಟರ್ನೆಟ್ ಕಡಿತದ ಆರೋಪ:

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಸರ್ಕಾರಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳು ನಿಷ್ಪಕ್ಷಪಾತವಾಗಿರಬೇಕು. ಆದರೆ, ಇಂದು ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆಯೇ ರಾಜಕೀಯ ಪಕ್ಷಗಳು ಹಾಗೂ ದೇಶದಾದ್ಯಂತ ಪ್ರಶ್ನೆಗಳು ಏಳುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಪ್ರತಿಭಟನಾ ಸ್ಥಳದಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದ ಕಾರಣ ಹೋರಾಟವನ್ನು ಯೂಟ್ಯೂಬ್‌ನಲ್ಲಿ ನೇರಪ್ರಸಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಿಜೆಪಿ ಆರೋಪಿಸಿದೆ. ಮತ್ತೋರ್ವ ನಾಯಕ ಸೌರವ್ ದಾಸ್, ಜಂತರ್ ಮಂತರ್ ಬಳಿ ನಡೆದಿದ್ದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ತೋರಿದ ‘ದೌರ್ಜನ್ಯ’ವನ್ನು ಕಟುವಾಗಿ ಖಂಡಿಸಿದರು.

​ಪೊಲೀಸರಿಂದ ವಿಚಾರಣೆ:

ಇದಕ್ಕೂ ಮುನ್ನ, ಗುರುವಾರ ಸಂಜೆ ಮರೈನ್ ಡ್ರೈವ್ ಬಳಿ ಇದ್ದ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದರು. “ಟೀ ಕುಡಿಯುವ ನೆಪದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನನ್ನನ್ನು ಠಾಣೆಗೆ ಕರೆದೊಯ್ದು ಸುಖಾಸುಮ್ಮನೆ ನನ್ನ ಸಮಯ ವ್ಯರ್ಥ ಮಾಡಿದರು” ಎಂದು ದೀಪ್ಕೆ ಆರೋಪಿಸಿದ್ದಾರೆ. ಆದರೆ, ತಾವು ಅವರನ್ನು ವಶಕ್ಕೆ ಪಡೆದಿದ್ದಿಲ್ಲ, ಕೇವಲ ವಿಚಾರಣೆ ನಡೆಸಿದ್ದೆವು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಜನರು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...