ಕಳೆದ ವರ್ಷ ಪ್ರತಿ 46 ಗಂಟೆಗಳಿಗೊಮ್ಮೆ ಒಬ್ಬ ಪೊಲೀಸ್ ಸಿಬ್ಬಂದಿ ಸಾವು: ಐಬಿ ಮುಖ್ಯಸ್ಥ ಮಾಹಿತಿ

Date:

ಕಳೆದ ವರ್ಷ ಪ್ರತಿ 46 ಗಂಟೆಗಳಿಗೊಮ್ಮೆ ಒಬ್ಬ ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಮಯದಲ್ಲಿ ಸಾವನ್ನಪ್ಪಿದ್ದಾರೆ. 365 ದಿನಗಳಲ್ಲಿ ಒಟ್ಟು 191 ಜೀವಗಳು ಬಲಿಯಾಗಿವೆ ಎಂದು ಗುಪ್ತಚರ ಬ್ಯೂರೋ (ಐಬಿ) ನಿರ್ದೇಶಕ ತಪನ್ ದೇಕಾ ಮಂಗಳವಾರ ತಿಳಿಸಿದ್ದಾರೆ.

- Advertisement -

ದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಪೊಲೀಸ್ ಸ್ಮರಣಾರ್ಥ ದಿನದಂದು ಕರ್ತವ್ಯ ನಿರ್ವಹಿಸುತ್ತಿದ್ದಾಗ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ತಪನ್ ದೇಕಾ ಅವರು, “ಸ್ವಾತಂತ್ರ್ಯದ ನಂತರ, ಒಟ್ಟು 36,684 ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಾಲಿನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಪೊಲೀಸ್‌ ಕಸ್ಟಡಿಯಲ್ಲಿ ಆರೋಪಿ ಸಾವು; ಐವರು ಪೊಲೀಸರ ಬಂಧನ

“ಈ ದಿನ, ಅಕ್ಟೋಬರ್ 21, 1959ರಂದು, ಗುಪ್ತಚರ ಬ್ಯೂರೋದ ಡಿಸಿಐಒ ಕರಮ್ ಸಿಂಗ್ ನೇತೃತ್ವದಲ್ಲಿ 10 ಸಿಆರ್‌ಪಿಎಫ್ ಸಿಬ್ಬಂದಿ, ಸಶಸ್ತ್ರ ಚೀನೀ ತುಕಡಿಯನ್ನು ಎದುರಿಸುತ್ತಾ ಭಾರತ-ಚೀನಾ ಗಡಿಯನ್ನು ಕಾಯುತ್ತಿದ್ದಾಗ ತಮ್ಮ ಪ್ರಾಣವನ್ನು ಅರ್ಪಿಸಿದರು. ಅಂದಿನಿಂದ, ನಾವು ಪ್ರತಿ ವರ್ಷ ಈ ದಿನವನ್ನು ಪೊಲೀಸ್ ಸ್ಮರಣಾರ್ಥ ದಿನವನ್ನಾಗಿ ಆಚರಿಸುತ್ತಿದ್ದೇವೆ” ಎಂದು ಸ್ಮರಿಸಿದರು.

“ಈ ದಿನದಂದು, ಎಲ್ಲಾ ಅಗಲಿದ ಸಹೋದ್ಯೋಗಿಗಳಿಗೆ ಗೌರವ ಸಲ್ಲಿಸಲು ರಾಜ್ಯ ರಾಜಧಾನಿಗಳು, ಜಿಲ್ಲೆಗಳು ಮತ್ತು ಪೊಲೀಸ್ ಠಾಣೆ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ, ಇಂದು ಇಲ್ಲಿ ಬಿಎಸ್‌ಎಫ್, ಸಿಐಎಸ್‌ಎಫ್, ಸಿಆರ್‌ಪಿಎಫ್, ಐಟಿಬಿಪಿ, ಎಸ್‌ಎಸ್‌ಬಿ, ಎನ್‌ಎಸ್‌ಜಿ, ಅಸ್ಸಾಂ ರೈಫಲ್ಸ್, ಆರ್‌ಪಿಎಫ್, ಎನ್‌ಡಿಆರ್‌ಎಫ್ ಮತ್ತು ದೆಹಲಿ ಪೊಲೀಸರು ಜಂಟಿ ಸ್ಮಾರಕ ಮೆರವಣಿಗೆಯನ್ನು ಆಯೋಜಿಸುತ್ತಾರೆ” ಎಂದರು.

ಈ ಸಂದರ್ಭದಲ್ಲಿ ಹಾಜರಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಹುತಾತ್ಮ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...