ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

Date:

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ನೀಡಲಾದ ‘ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ (MPLADS) ಅನುದಾನವನ್ನು ಬಳಸಿಕೊಳ್ಳುವಲ್ಲಿ ತೀವ್ರ ಹಿಂದೆ ಉಳಿದಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಹಾಗೂ ಗ್ರಾಮೀಣ ಅಭಿವೃದ್ಧಿ ಆಯುಕ್ತರ ಕಚೇರಿಯ ಅಧಿಕೃತ ಅಂಕಿ-ಅಂಶಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಜೂನ್ 2026ರ ವೇಳೆಗೆ ಒಟ್ಟು ಬಿಡುಗಡೆಯಾಗಿದ್ದ ₹135.95 ಕೋಟಿ ಅನುದಾನದಲ್ಲಿ ಸಂಸದರು ಬಳಸಿದ್ದು ಕೇವಲ 24.12 ಕೋಟಿ ರೂಪಾಯಿ ಅಂದರೆ ಶೇ. 18 ಮಾತ್ರ.

- Advertisement -

ಸಂಸದರು ಪ್ರಸ್ತಾಪಿಸಿದ ಅನೇಕ ಯೋಜನೆಗಳು ಇನ್ನೂ ಜಿಲ್ಲಾಡಳಿತದ ಅನುಮೋದನೆಯ ಹಂತದಲ್ಲೇ ಇವೆ. ಸುಮಾರು 215ಕ್ಕೂ ಹೆಚ್ಚು ಯೋಜನೆಗಳು ಪರಿಶೀಲನೆಯಲ್ಲಿದ್ದರೆ, ಅನುಮೋದನೆ ದೊರೆತ 154 ಕಾಮಗಾರಿಗಳು ಇನ್ನೂ ಆರಂಭವೇ ಆಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಇದನ್ನೂ ಓದಿ: ​’ಭೂಮಿ ಖರೀದಿಸಲು ಸಹಾಯ ಮಾಡಿ’: ಉತ್ತರಾಖಂಡ್‌ ಸಿಎಂಗೆ ಮಧ್ಯರಾತ್ರಿ ರಿಷಭ್ ಪಂತ್ ಮನವಿ

ಅನುದಾನ ಬಳಕೆಯಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದ ನರೇಶ್ ಬನ್ಸಲ್ ಅವರು ತಮಗೆ ಬಂದ ಅನುದಾನದಲ್ಲಿ ಶೇ. 40 ರಷ್ಟು (₹10.96 ಕೋಟಿ) ಖರ್ಚು ಮಾಡುವ ಮೂಲಕ ಮುಂಚೂಣಿಯಲ್ಲಿದ್ದಾರೆ. ಲೋಕಸಭಾ ಸಂಸದರಲ್ಲಿ ಬಿಜೆಪಿಯ ಮಾಲಾ ರಾಜ್ಯಲಕ್ಷ್ಮಿ ಶಾ ಅವರು ಹೆಚ್ಚಿನ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಂಡಿದ್ದಾರೆ. ಆದರೆ, ಗಡ್ವಾಲ್ ಸಂಸದ ಅನಿಲ್ ಬಲೂನಿ ಹಾಗೂ ಅಲ್ಮೋರಾ ಸಂಸದ ಅಜಯ್ ತಮ್ತಾ ಅವರ ನಿಧಿ ಬಳಕೆಯ ಪ್ರಮಾಣ ತೀರಾ ಕಡಿಮೆ ಮಟ್ಟದಲ್ಲಿದೆ (ಶೇ. 1ಕ್ಕಿಂತ ಕಡಿಮೆ).

MPLADS ಯೋಜನೆಯಡಿಯಲ್ಲಿ ಪ್ರತಿಯೊಬ್ಬ ಸಂಸದರಿಗೂ ತಮ್ಮ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಶಿಕ್ಷಣ, ಸಾರ್ವಜನಿಕ ನೈರ್ಮಲ್ಯ ಹಾಗೂ ರಸ್ತೆ ನಿರ್ಮಾಣದಂತಹ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ವರ್ಷಕ್ಕೆ ₹5 ಕೋಟಿ ಅನುದಾನ ನೀಡಲಾಗುತ್ತದೆ.

ಈ ಹಣವು ರದ್ದಾಗದ ನಿಧಿಯಾಗಿದ್ದು, ಮುಂದಿನ ವರ್ಷಗಳಿಗೆ ವರ್ಗಾವಣೆಯಾಗುತ್ತದೆ. ಆದಾಗ್ಯೂ, ಸಾರ್ವಜನಿಕ ಕೆಲಸಗಳಿಗೆ ನಿಗದಿಪಡಿಸಿದ ಹಣವು ಸಕಾಲದಲ್ಲಿ ಬಳಕೆಯಾಗದಿರುವುದು ಸ್ಥಳೀಯ ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದೆ ಎಂಬ ಟೀಕೆ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...