ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

Date:

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್ ಪ್ರತಿಪಾದಿಸಿದ್ದಾರೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಗುರುವಾರ ರೂಪನಗರ ಜಿಲ್ಲೆಯ ಚಮಕೌರ್ ಸಾಹಿಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ನ ‘ಜವಾನಿ ಸಂಭಾಳ್’ (ಯುವಕರನ್ನು ಉಳಿಸಿ) ಸೈಕಲ್ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

- Advertisement -

2022ರ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಜನತೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಭಾರಿ ಬಹುಮತ ನೀಡಿದ್ದರು. ಆದರೆ, ಭಗವಂತ್ ಮಾನ್ ನೇತೃತ್ವದ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಪೈಲಟ್ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ರಾಜ್ಯದಲ್ಲಿ ಮಾದಕವಸ್ತು ಹಾವಳಿ, ಗ್ಯಾಂಗ್‌ಸ್ಟರ್ ಸಂಸ್ಕೃತಿ, ಅಪರಾಧ ಪ್ರಕರಣಗಳು ಮತ್ತು ಭ್ರಷ್ಟಾಚಾರ ಮಿತಿಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಮುಂಬರುವ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿಜೆಪಿ ಬೆನ್ನತ್ತಿದ ಕಾಂಗ್ರೆಸ್‌; ‘ಎಎಪಿ ಆಡಳಿತದ ಪಂಜಾಬ್‌ನಲ್ಲೂ ಅದೇ ಧೈರ್ಯ ತೋರಿಸಿ’: ಸಚಿನ್ ಪೈಲಟ್ ಸವಾಲು

ಇದೇ ವೇಳೆ ಬಿಜೆಪಿ ವಿರುದ್ಧವೂ ಕಿಡಿಕಾರಿದ ಪೈಲಟ್, “ಪಂಜಾಬ್‌ನಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂಬುದು ಬಿಜೆಪಿಗೆ ಚೆನ್ನಾಗಿ ತಿಳಿದಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಪಂಜಾಬ್‌ಗೆ ಯಾವ ಕೈಗಾರಿಕೆ ಅಥವಾ ವಿಶೇಷ ಪ್ಯಾಕೇಜ್ ನೀಡಿದೆ?” ಎಂದು ಪ್ರಶ್ನಿಸಿದರು.

ಬಿಹಾರ, ಗುಜರಾತ್ ಮತ್ತು ಮಹಾರಾಷ್ಟ್ರಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸುವ ಕೇಂದ್ರ ಸರ್ಕಾರ, ಪಂಜಾಬ್ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ಅವರ ನೇತೃತ್ವದಲ್ಲಿ ಆರಂಭವಾಗಿರುವ ಈ 8 ದಿನಗಳ ಸೈಕಲ್ ಯಾತ್ರೆಯು ಮೊದಲ ಹಂತದಲ್ಲಿ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 625 ಕಿ.ಮೀ. ಸಂಚರಿಸಲಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಪರ್ಗತ್ ಸಿಂಗ್, ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೇರಿದಂತೆ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಂಜಾಬ್ ಕಾಂಗ್ರೆಸ್ ಸಂಪೂರ್ಣ ಒಗ್ಗಟ್ಟಿನಿಂದ ಮುನ್ನಡೆಯುತ್ತಿದ್ದು, ಶೀಘ್ರದಲ್ಲೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ ಎಂದು ಪೈಲಟ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...