ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ: ಆಂಧ್ರ ಸಿಎಂ ನಾಯ್ಡು

Date:

ಕುಸಿಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಸರಪಂಚ್, ಕೌನ್ಸಿಲರ್ ಅಥವಾ ಮೇಯರ್ ಆಗಲು ಬಯಸುವವರು ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರಬೇಕು ಎಂಬ ನೀತಿಯನ್ನು ತರಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ.

- Advertisement -

ಜನರು ಹೆಚ್ಚು ಮಕ್ಕಳನ್ನು ಪಡೆಯುವಂತೆ ಪ್ರೋತ್ಸಾಹಿಸುವ ನೀತಿಗಳನ್ನು ಜಾರಿಗೆ ತರಲಾಗುವುದು ಎಂದು ಚಂದ್ರಬಾಬು ನಾಯ್ಡು ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

”ಒಂದು ಕಾಲದಲ್ಲಿ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಪಂಚಾಯತಿ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗುತ್ತಿರಲಿಲ್ಲ. ಆದರೀಗ ಕಡಿಮೆ ಸಂಖ್ಯೆಯ ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನಿಮಗೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸರಪಂಚ್, ಮುನಿಸಿಪಿಲ್ ಕೌನ್ಸಿಲರ್, ಮಹಾನಗರ ಪಾಲಿಕೆ ಅಧ್ಯಕ್ಷ ಅಥವಾ ಮೇಯರ್ ಆಗಲು ಸಾಧ್ಯ” ಎಂದು ಅವರು ಘೋಷಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್‌ಬಿಐ ಭದ್ರತಾ ಸಂಸ್ಥೆ ಸಿಬ್ಬಂದಿ ಮೇಲೆ ಗುಂಡಿನ ದಾಳಿ; ಒಬ್ಬನ ಸಾವು, 93 ಲಕ್ಷ ದರೋಡೆ

ಉತ್ತರ ಭಾರತವು ಇನ್ನು 15 ವರ್ಷಗಳಲ್ಲಿ ಸ್ಥಿರ ಫಲವಂತಿಕೆಯ ಲಾಭವನ್ನು ಕಳೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಹಳೆಯ ತಲೆಮಾರು ಹೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ, ಹಾಲಿ ತಲೆಮಾರು ಈ ಸಂಖ್ಯೆಯನ್ನು ಒಂದಕ್ಕೆ ತಂದಿದೆ. ಇನ್ನೂ ಹೆಚ್ಚು ಜಾಣರು ಮೋಜು ಮಾಡಲು ದುಪ್ಪಟ್ಟು ಆದಾಯ, ಮಕ್ಕಳು ಬೇಡ ನೀತಿಯತ್ತ ಹೋಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕೊರಿಯಾ, ಜಪಾನ್ ಹಾಗೂ ಯೂರೋಪ್ ಖಂಡವನ್ನು ಉದಾಹರಿಸಿದ ಚಂದ್ರಬಾಬು ನಾಯ್ಡು, ಅಲ್ಲಿನ ಜನ ಕುಸಿಯುತ್ತಿರುವ ಜನಸಂಖ್ಯೆಯ ಅಪಾಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಸಂಪತ್ತು ಸೃಷ್ಟಿ, ಹೆಚ್ಚು ಆದಾಯ ಗಳಿಸುವ ಮೂಲಕ ತಮ್ಮ ದೇಶಗಳನ್ನು ಪ್ರಗತಿಯತ್ತ ಕೊಂಡೊಯ್ಯಲು ಬಯಸಿದರು ಎಂದು ಹೇಳಿದ್ದಾರೆ.

”ಅವರಿಗೀಗ ಜನ ಬೇಕಾಗಿದೆ. ನಾವು ಜನರನ್ನು ಅಲ್ಲಿಗೆ ಕಳಿಸಬೇಕಿದೆ. ನಾವೀಗ ಆ ಸ್ಥಿತಿ ತಲುಪಿದ್ದೇವೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...