ಆಪರೇಷನ್ ಸಿಂಧೂರ್ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ.
ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ ಕಾರ್ಯಗಳನ್ನು ಅತ್ಯಂತ ನಿಖರತೆ ಮತ್ತು ವೃತ್ತಿಪರತೆಯಿಂದ ಯಶಸ್ವಿಯಾಗಿ ನಿರ್ವಹಿಸಿದೆ. ಈ ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ಯೋಜಿತ ಮತ್ತು ರಹಸ್ಯ ರೀತಿಯಲ್ಲಿ ನಡೆಸಲಾಯಿತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್
ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಹಂಚಿಕೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಅಸ್ಪಷ್ಟ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ತಪ್ಪಿಸಿ ಎಂದು ವಾಯುಪಡೆ ಎಲ್ಲರಿಗೂ ಮನವಿ ಮಾಡುತ್ತದೆ ಎಂದು ಹೇಳಿದೆ.
ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು. ಆದರೆ ಶನಿವಾರ ರಾತ್ರಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಈಗ ವಾಯುಸೇನೆ ಆಪರೇಷನ್ ಸಿಂಧೂರ್ ಮುಂದುವರಿಯಲಿದೆ ಎಂದು ಅಧಿಕೃತವಾಗಿ ತಿಳಿಸಿದೆ.
The Indian Air Force (IAF) has successfully executed its assigned tasks in Operation Sindoor, with precision and professionalism. Operations were conducted in a deliberate and discreet manner, aligned with National Objectives.
— Indian Air Force (@IAF_MCC) May 11, 2025
Since the Operations are still ongoing, a detailed…