ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

Date:

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ) ಗುಂಪಿನಲ್ಲಿ ಗುರುತಿಸಿಕೊಂಡಿದ್ದ 20 ಸಂಸದರ ಪೈಕಿ 17 ಜನರು ಶೀಘ್ರದಲ್ಲೇ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಂಡಾಯ ಸಂಸದ ಜಗದೀಶ್ ಚಂದ್ರ ಬರ್ಮಾ ಬಸುನಿಯಾ ತಿಳಿಸಿದ್ದಾರೆ.

- Advertisement -

ಕಳೆದ ಜೂನ್ ತಿಂಗಳಲ್ಲಿ ತೃಣಮೂಲ ಕಾಂಗ್ರೆಸ್‌ನ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಹೊರಬಂದಿದ್ದ 20 ಲೋಕಸಭೆ ಸಂಸದರು ಎನ್‌ಸಿಪಿಐ ಜೊತೆ ವಿಲೀನಗೊಂಡು ಎನ್‌ಡಿಎಗೆ ಬೆಂಬಲ ಸೂಚಿಸಿದ್ದರು. ಇದೀಗ ಬಸುನಿಯಾ ಅವರ ಪ್ರಕಾರ, ಮುಂಬರುವ ದುರ್ಗಾಪೂಜೆಯ (ಅಕ್ಟೋಬರ್) ಹೊತ್ತಿಗೆ ಅಥವಾ ನಂತರ ಈ 17 ಸಂಸದರು ನೇರವಾಗಿ ಬಿಜೆಪಿ ಅಂಗಳಕ್ಕೆ ಧುಮುಕಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನೂ ಓದಿ: ಆಪರೇಷನ್ ಟೈಗರ್ | ಶಿವಸೇನೆ ಧ್ವಂಸಕ್ಕೆ BJP ಕುತಂತ್ರ; ಮುಂದುವರೆದ ಕೇಸರಿ ಕೊಳಕಿನ ಇತಿಹಾಸ

ಒಟ್ಟು 20 ಸಂಸದರ ಪೈಕಿ 17 ಜನರು ಒಂದಾಗಿ ಬಿಜೆಪಿ ಸೇರುತ್ತಿರುವುದರಿಂದ, ಒಟ್ಟು ಸಂಖ್ಯೆಯ ಮೂರನೇ ಎರಡರಷ್ಟು (2/3) ಭಾಗದ ತಾಂತ್ರಿಕ ಮಾನದಂಡವನ್ನು ಇದು ಪೂರೈಸುತ್ತದೆ. ಇದರಿಂದಾಗಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಯಾವುದೇ ಅನರ್ಹತೆಯ ಭೀತಿ ಎದುರಾಗುವುದಿಲ್ಲ ಎಂಬುದು ರೆಬೆಲ್ ನಾಯಕರ ಲೆಕ್ಕಾಚಾರವಾಗಿದೆ.

ಉಳಿದ ಮೂವರು ಸಂಸದರಾದ ಅಬು ತಾಹೇರ್ ಖಾನ್, ಖಲೀಲೂರ್ ರೆಹಮಾನ್ ಹಾಗೂ ಯೂಸುಫ್ ಪಠಾಣ್ ಅವರು ನೇರವಾಗಿ ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ. ತಮ್ಮ ಕ್ಷೇತ್ರಗಳ ರಾಜಕೀಯ ಪರಿಸ್ಥಿತಿಗಳನ್ನು ಪರಿಗಣಿಸಿ ಅವರು ಬಿಜೆಪಿ ಸೇರದೇ ಹೊರಗಿನಿಂದಲೇ ಎನ್‌ಡಿಎಗೆ ಬೆಂಬಲ ನೀಡಲಿದ್ದಾರೆ ಹಾಗೂ ಅವರಿಗೆ ಕೆಲವು ಜವಾಬ್ದಾರಿಗಳನ್ನು ನೀಡುವ ಸಾಧ್ಯತೆಯಿದೆ ಎಂದು ಬಸುನಿಯಾ ಮಾಹಿತಿ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಶಾಕ್ ನೀಡುತ್ತಾ ಸಾಗಿರುವ ಬಿಜೆಪಿಯ ಈ ತಂತ್ರಗಾರಿಕೆ, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹಳೆಯ ರಾಜಕೀಯ ಸಮೀಕರಣಗಳನ್ನು ಬುಡಮೇಲು ಮಾಡಲು ‘ಆಪರೇಷನ್ ಕಮಲ’ದ ದಾಳವನ್ನು ಮುಂದುವರಿಸಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ವಿವಿ ಆಡಳಿತ!

18 ದಿನಗಳ ಉಪವಾಸ ಸತ್ಯಾಗ್ರಹ ಮತ್ತು ಹೋರಾಟದ ನಂತರ, ಜಾಮಿಯಾ ಮಿಲ್ಲಿಯಾ...