ಆಪರೇಷನ್ ಸಿಂಧೂರ್, ಬಾಲಾಕೋಟ್‌ನ ‘ಜಾದೂಗಾರ’ ಈಗ ಸಿಕ್ಕಿಬಿದ್ದಿದ್ದಾನೆ: ಮೋದಿಗೆ ರಾಹುಲ್ ಪರೋಕ್ಷ ಟಾಂಗ್

Date:

‘ಆಪರೇಷನ್ ಸಿಂಧೂರ್ ಮತ್ತು ಬಾಲಾಕೋಟ್‌ನ ಜಾದೂಗಾರ ಈಗ ಸಿಕ್ಕಿಬಿದ್ದಿದ್ದಾನೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಂಸತ್ತಿನ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಲೋಕಸಭೆಯಲ್ಲಿ ಕಾವೇರಿದ ಚರ್ಚೆ ನಡೆಯಿತು. ನೂತನ ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿಯವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತಮ್ಮ ಭಾಷಣದ ಉದ್ದಕ್ಕೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ, “ಈ ‘ಜಾದೂಗಾರ ಮತ್ತು ಉದ್ಯಮಿ’ಯ ಪಾಲುದಾರಿಕೆಯ ಬಗ್ಗೆ ಇಡೀ ದೇಶಕ್ಕೆ ತಿಳಿದಿದೆ” ಎಂದು ಮಾರ್ಮಿಕವಾಗಿ ನುಡಿದರು.

ನೂತನ ಕ್ಷೇತ್ರ ಮರುವಿಂಗಡಣಾ ಮಸೂದೆಯು ಭಾರತದ ‘ಚುನಾವಣಾ ನಕ್ಷೆಯನ್ನೇ ಬದಲಾಯಿಸುವ ಯತ್ನ’ ಎಂದು ಆರೋಪಿಸಿದ ಅವರು, “ಕೇಂದ್ರ ಸರ್ಕಾರವು ದಕ್ಷಿಣ ಭಾರತ, ಈಶಾನ್ಯ ರಾಜ್ಯಗಳು ಹಾಗೂ ಸಣ್ಣ ರಾಜ್ಯಗಳಿಗೆ ಸ್ಪಷ್ಟ ಸಂದೇಶವೊಂದನ್ನು ನೀಡುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ನಿಮ್ಮ ಪ್ರಾತಿನಿಧ್ಯವನ್ನು ಕಸಿದುಕೊಳ್ಳಲಿದ್ದೇವೆ ಎಂಬುದನ್ನೇ ಈ ಮಸೂದೆ ಹೇಳುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಹಿಳೆಯರು ನಮ್ಮ ರಾಷ್ಟ್ರೀಯ ದೃಷ್ಟಿಕೋನದ ಪ್ರಮುಖ ಪ್ರೇರಕ ಶಕ್ತಿ ಎಂದು ಬಣ್ಣಿಸಿದ ರಾಹುಲ್, ಪ್ರಸ್ತುತ ಮಂಡಿಸಿರುವ ಮಸೂದೆಯು ‘ಮಹಿಳಾ ಸಬಲೀಕರಣ’ಕ್ಕೆ ಸಂಬಂಧಿಸಿದ್ದಲ್ಲ ಎಂದರು. “2023ರಲ್ಲಿ ಅಂಗೀಕರಿಸಲಾದ ಮೂಲ ಮಹಿಳಾ ಮೀಸಲಾತಿ ಮಸೂದೆಯೇ ನೈಜವಾದದ್ದು. ಈಗ ತಂದಿರುವ ಮಸೂದೆಯು ಕೇವಲ ‘ಜಾತಿ ಗಣತಿ’ಯನ್ನು ಮೂಲೆಗುಂಪು ಮಾಡುವ ತಂತ್ರವಾಗಿದೆ” ಎಂದು ಟೀಕಿಸಿದರು.

“ಸರ್ಕಾರವು ದಲಿತರನ್ನು ಹಿಂದೂಗಳು ಎಂದು ಕರೆಯುತ್ತದೆ, ಆದರೆ ಸಮಾಜದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನಿರಾಕರಿಸುತ್ತಿದೆ. ಒಬಿಸಿಗಳು, ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ವಿರುದ್ಧ ‘ಕ್ರೂರ ಮತ್ತು ಕರುಣೆಯಿಲ್ಲದ’ ತಾರತಮ್ಯ ಎಸಗಲಾಗುತ್ತಿದೆ. ಅಲ್ಪಸಂಖ್ಯಾತರ ಪ್ರಾತಿನಿಧ್ಯವನ್ನು ಕಸಿದುಕೊಳ್ಳಲು ಯತ್ನಿಸುತ್ತಿರುವ ಸರ್ಕಾರ, ಸಂವಿಧಾನಕ್ಕಿಂತ ‘ಮನುವಾದ’ವನ್ನು ಹೆಚ್ಚು ನಂಬುತ್ತದೆ.ಈ ಮಸೂದೆಯನ್ನು ‘ರಾಷ್ಟ್ರ ವಿರೋಧಿ ಕಾಯ್ದೆ’ ಎಂದು ಹೇಳಿದ ಅವರು, ಇಡೀ ವಿರೋಧ ಪಕ್ಷಗಳು ಒಗ್ಗೂಡಿ ಇದನ್ನು ಬಲವಾಗಿ ವಿರೋಧಿಸಲಿವೆ. ಎಂದು ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ? ನಗೆಮೊಗದಿಂದಲೇ ಎದುರಾಳಿಗಳನ್ನು ಕಟ್ಟಿಹಾಕುವ ಪ್ರಿಯಾಂಕಾ ಗಾಂಧಿ; ಲೋಕಸಭೆಯಲ್ಲಿ ಇರಿದ ‘ಮಧುರ ಚೂರಿ’ಯ ವಾಗ್ದಾಳಿ!

‘ನನಗೆ, ಪತ್ನಿಯ ಸಮಸ್ಯೆ ಇಲ್ಲ’ ಎಂದ ರಾಹುಲ್
ಭಾಷಣದ ಗಂಭೀರತೆಯ ನಡುವೆಯೂ ಹಾಸ್ಯದ ಧಾಟಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನನಗೆ ಮತ್ತು ಪ್ರಧಾನಿಯವರಿಗೆ ‘ಪತ್ನಿಯ ಸಮಸ್ಯೆ’ ಇಲ್ಲ” ಎಂದು ನಗೆಚಟಾಕಿ ಹಾರಿಸುವ ಮೂಲಕ ಸದನದ ಗಮನ ಸೆಳೆದರು.

ರಾಹುಲ್ ಮಾತಿಗೆ ಆಕ್ಷೇಪ
ರಾಹುಲ್ ಗಾಂಧಿ ಅವರ ಜಾದೂಗಾರ ಹೇಳಿಕೆಗಳಿಗೆ ಆಡಳಿತ ಪಕ್ಷದ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ರಾಹುಲ್ ಗಾಂಧಿ ಬಳಸಿದ ‘ಜಾದೂಗಾರ’ ಎಂಬ ಪದಬಳಕೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆಕ್ಷೇಪ ವ್ಯಕ್ತಪಡಿಸಿ, ಕೇವಲ ಮಸೂದೆಗೆ ಸೀಮಿತವಾಗಿ ಮಾತನಾಡುವಂತೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ರಾಹುಲ್, ಇದು ಕೇವಲ ರೂಪಕ ಎಂದರು. ಆದರೆ, ಸಂಸದೀಯ ಘನತೆ ಮತ್ತು ಮೌಲ್ಯಗಳನ್ನು ಕಾಪಾಡುವಂತೆ ಸ್ಪೀಕರ್ ಸೂಚನೆ ನೀಡಿದರು.

ಇದೇ ವಿಷಯವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ರಾಹುಲ್ ಗಾಂಧಿ ನಡುವೆ ತೀವ್ರ ವಾಗ್ಯುದ್ಧ ನಡೆಯಿತು. ಇದೇ ವೇಳೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ರಾಹುಲ್ ಗಾಂಧಿ ಅವರ ಭಾಷಣದವನ್ನು ತೀವ್ರವಾಗಿ ವಿರೋಧಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...