ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

Date:

ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಬದಲಾಗಿ ಭಾರತದ ರಾಜಕೀಯ, ಸಾಮಾಜಿಕ ಹಾಗೂ ಮಿಲಿಟರಿ ಇಚ್ಛಾಶಕ್ತಿಯ ಸಂಕೇತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

- Advertisement -

ಲಕ್ನೋದಲ್ಲಿ ಭಾನುವಾರ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, “ಭಯೋತ್ಪಾದನೆಯ ವಿರುದ್ಧ ದೇಶದ ದೃಢ ಸಂಕಲ್ಪ ಮಾಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗಿನ ಭಾರತ ವಿರೋಧಿ ಶಕ್ತಿಗಳಿಗೆ ನಿರ್ಣಾಯಕ ಹೊಡೆತ ನೀಡಿವೆ. ಇಂದು ಭಾರತ ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾಗಿದೆ. ನಾವು ನಿರಂತರವಾಗಿ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.

“ನಮ್ಮ ದೇಶದ ಮೇಲೆ ದಾಳಿ ಮಾಡಿ ಅನೇಕ ಕುಟುಂಬಗಳ ಸದಸ್ಯರನ್ನು ಹೊಡೆದ ಭಯೋತ್ಪಾದಕ ಸಂಘಟನೆಗಳನ್ನು ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಸದೆಬಡಿದು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಿವೆ. ಇಡೀ ರಾಷ್ಟ್ರ ಇಂದು ಭಾರತೀಯ ಪಡೆಗಳ ಶೌರ್ಯಕ್ಕೆ ವಂದಿಸುತ್ತಿದೆ” ಎಂದರು.

“ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಯನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಪಡೆಗಳು ಆಪರೇಷನ್ ಸಿಂಧೂರ ಪ್ರಾರಂಭಿಸಿದವು. ನಾವು ಎಂದಿಗೂ ಪಾಕಿಸ್ತಾನದ ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ, ಪಾಕಿಸ್ತಾನವು ಭಾರತೀಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ್ದಲ್ಲದೆ, ದೇವಾಲಯಗಳು ಮತ್ತು ಗುರುದ್ವಾರಗಳ ಮೇಲೂ ದಾಳಿ ಮಾಡಲು ಪ್ರಯತ್ನಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಪಡೆಗಳು ಧೈರ್ಯ ಮತ್ತು ಸಂಯಮ ಪ್ರದರ್ಶಿಸಿದವು. ಪಾಕಿಸ್ತಾನದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿ ಸೂಕ್ತ ಉತ್ತರ ನೀಡಿದವು” ಎಂದು ಹೇಳಿದರು.

“ಭಾರತ ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಂಡಾಗಲೆಲ್ಲ ಗಡಿಯಾಚೆಗಿನ ಪ್ರದೇಶಗಳು ಭಯೋತ್ಪಾದಕರು ಮತ್ತು ಅವರ ಮಾಸ್ಟರ್​ಮೈಂಡ್​ಗಳಿಗೆ ಸುರಕ್ಷಿತವಾಗಿರುವುದಿಲ್ಲ ಎಂಬುದನ್ನು ಈ ಕಾರ್ಯಾಚರಣೆ ಮತ್ತೆ ತೋರಿಸಿದೆ” ಎಂದು ತಿಳಿಸಿದರು.

“ನಾವು ನಮ್ಮ ಕಾರ್ಯಾಚರಣೆಗಳನ್ನು ಗಡಿಯ ಸಮೀಪವಿರುವ ಮಿಲಿಟರಿ ನೆಲೆಗಳಿಗೆ ಮಾತ್ರ ಸೀಮಿತಗೊಳಿಸಲಿಲ್ಲ. ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯ ಪ್ರತಿಧ್ವನಿ ಕೇಳಿಬಂದಿದೆ. ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಯತ್ನಿಸುವವರಿಗೆ ಏನಾಗುತ್ತದೆ ಎಂಬುದನ್ನು ಇಡೀ ಜಗತ್ತು ನೋಡಿದೆ” ಎಂದರು.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಘಟನೆಗೆ ಪ್ರತಿಯಾಗಿ ಭಾರತ ಮೇ 7ರಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಪ್ರಾರಂಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...