ಸ್ಪೀಕರ್ ಓಂ ಬಿರ್ಲಾ ಚಹಾ ಕೂಟಕ್ಕೆ ವಿಪಕ್ಷಗಳ ಬಹಿಷ್ಕಾರ; ರಾಜ್ಯಸಭಾ ಸಭಾಪತಿ ಕೂಟಕ್ಕೆ ಖರ್ಗೆ, ಸೋನಿಯಾ ಭೇಟಿ

Date:

ಸಂಸತ್ತಿನ ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆಯೋಜಿಸಿದ್ದ ಸಾಂಪ್ರದಾಯಿಕ ಉಪಹಾರಕೂಟವನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (TMC) ಮತ್ತು ಸಮಾಜವಾದಿ ಪಾರ್ಟಿ (SP) ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಪ್ರಮುಖ ವಿಪಕ್ಷಗಳು ಬಹಿಷ್ಕರಿಸಿವೆ.

- Advertisement -

ಆದಾಗ್ಯೂ, ರಾಜ್ಯಸಭೆಯಲ್ಲಿ ಭಿನ್ನ ವಾತಾವರಣ ಕಂಡುಬಂದಿದ್ದು, ರಾಜ್ಯಸಭಾ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ಅವರು ಆಯೋಜಿಸಿದ್ದ ಚಹಾ ಕೂಟದಲ್ಲಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವಾರು ವಿಪಕ್ಷ ನಾಯಕರು ಭಾಗವಹಿಸಿ ಸೌಹಾರ್ದತೆ ಮೆರೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್...

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ 22 ಸೀಟುಗಳ ಮತ ಎಣಿಕೆ ನಡೆಯುತ್ತಿದ್ದು ಇಲ್ಲಿಯವರೆಗೂ 254 ಡೆಮೊಕ್ರಟಿಕ್ ಅಭ್ಯರ್ಥಿಗಳು ಮತ್ತು 169 ರಿಪಬ್ಲಿಕನ್ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಸಮೀಕ್ಷೆಗಳ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಇದನ್ನೂ ಓದಿ: ಚಾಯ್ ಪೇ ಚರ್ಚಾ: ಗಮನ ಸೆಳೆದ ಪ್ರಿಯಾಂಕಾ ಕೇಂದ್ರಿತ ಚಿತ್ರ!

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ನಡೆದ ಉಪಹಾರಕೂಟದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಸಚಿವರು ಹಾಗೂ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ನಾಯಕರು ಪಾಲ್ಗೊಂಡಿದ್ದರು.

ಕಾಂಗ್ರೆಸ್, ಟಿಎಂಸಿ ಹಾಗೂ ಎಸ್‌ಪಿ ನಾಯಕರು ಈ ಕೂಟದಿಂದ ಸಂಪೂರ್ಣವಾಗಿ ದೂರ ಉಳಿದರಾದರೂ, ಡಿಎಂಕೆ ಸಂಸದೆ ಕನಿಮೋಳಿ ಅವರು ಈ ಸಭೆಯಲ್ಲಿ ಭಾಗವಹಿಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಅಧಿವೇಶನದ ಅವಧಿಯಲ್ಲಿ ಪ್ರಮುಖ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡದಿರುವುದು ಹಾಗೂ ಗದ್ದಲದ ನಡುವೆಯೇ ಮಸೂದೆಗಳನ್ನು ಅಂಗೀಕರಿಸಿದ ಸ್ಪೀಕರ್ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿ, ವಿಪಕ್ಷ ನಾಯಕರು ಈ ಬಹಿಷ್ಕಾರದ ನಿರ್ಧಾರ ಕೈಗೊಂಡಿದ್ದಾರೆ.

ಮತ್ತೊಂದೆಡೆ, ರಾಜ್ಯಸಭಾ ಸಭಾಪತಿ ಸಿ. ಪಿ. ರಾಧಾಕೃಷ್ಣನ್ ಆಯೋಜಿಸಿದ್ದ ಚಹಾ ಕೂಟಕ್ಕೆ ವಿಪಕ್ಷಗಳ ಪ್ರಮುಖ ನಾಯಕರು ಆಗಮಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ಸಭಾಪತಿಗಳ ಜೊತೆ ಉಪಹಾರ ಸೇವಿಸಿ, ಸಂಸದೀಯ ಸಂಪ್ರದಾಯದಂತೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.

ಪ್ರತಿ ಸಂಸತ್ ಅಧಿವೇಶನ ಮುಕ್ತಾಯಗೊಂಡ ತಕ್ಷಣ ಲೋಕಸಭಾ ಸ್ಪೀಕರ್ ಹಾಗೂ ರಾಜ್ಯಸಭಾ ಸಭಾಪತಿಗಳು ತಮ್ಮ ಕೊಠಡಿಗಳಲ್ಲಿ ಎಲ್ಲಾ ಪಕ್ಷಗಳ ನಾಯಕರಿಗೆ ಚಹಾ ಕೂಟ ಆಯೋಜಿಸುವುದು ಬಹುಕಾಲದಿಂದ ನಡೆದುಬಂದ ಸಾಂಪ್ರದಾಯಿಕ ಪದ್ಧತಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...