ಬಿಜೆಪಿ ಪ್ರಣಾಳಿಕೆಯಲ್ಲಿ ಹಣದುಬ್ಬರ, ನಿರುದ್ಯೋಗದ ಪ್ರಸ್ತಾಪವಿಲ್ಲ: ರಾಹುಲ್ ಗಾಂಧಿ

Date:

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಟೀಕಿಸಿರುವ ಕಾಂಗ್ರೆಸ್ ಚುನಾವಣಾ ಕಡತ ಸಂಪೂರ್ಣ ಸುಳ್ಳಿನಿಂದ ಕೂಡಿದ್ದು, ನಂಬಲರ್ಹವಲ್ಲ ಎಂದು ಟೀಕಿಸಿದೆ. ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರವನ್ನು ನಿರ್ಲಕ್ಷಿಸಿದೆ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ಜನರ ಬದುಕಿಗೆ ಅಗತ್ಯವಾದ ಬಹು ಮುಖ್ಯವಾದ ಸಮಸ್ಯೆಗಳನ್ನು ಚರ್ಚಿಸಲು ಕೂಡ ಬಯಸುವುದಿಲ್ಲ. ಹಣದುಬ್ಬರ ಹಾಗೂ ನಿರುದ್ಯೋಗದ ಬಗ್ಗೆ ಪ್ರಸ್ತಾಪವಿಲ್ಲ. ಇಂಡಿಯಾ ಒಕ್ಕೂಟದ ಯೋಜನೆ ತುಂಬ ಸ್ಪಷ್ಟವಾಗಿದೆ. ಪ್ರತಿ ವರ್ಷ 30 ಲಕ್ಷ ಉದ್ಯೋಗ ನೇಮಕಾತಿ ಹಾಗೂ ಪ್ರತಿ ವಿದ್ಯಾವಂತ ಯುವಕರಿಗೆ 1 ಲಕ್ಷ ರೂ. ಉದ್ಯೋಗ ಖಾತರಿ ದೊರಕಿಸುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪ್ರಸ್ತುತ ಸಮಯದಲ್ಲಿ ಯುವಕರು ಪ್ರಧಾನಿ ಮೋದಿ ತೋಡಿದ ಹಳ್ಳಕ್ಕೆ ಬೀಳುವುದಿಲ್ಲ. ಯುವಕರು ಕಾಂಗ್ರೆಸ್ ಕೈ ಬಲಪಡಿಸಿದರೆ ದೇಶದಲ್ಲಿ ಉದ್ಯೋಗ ಕ್ರಾಂತಿ ಉಂಟಾಗಲಿದೆ” ಎಂದು ಹೇಳಿದ್ದಾರೆ.

ಬಿಜೆಪಿಯ ಪ್ರಣಾಳಿಕೆ ಸಂವಿಧಾನವನ್ನು ಬದಲಿಸುವ ಪತ್ರ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.

“ನೆನಪಿಡಿ, ಬಿಜೆಪಿಯು ತಳಮಟ್ಟದಿಂದ ದೇಶ, ಸಮಾಜ ಹಾಗೂ ಪ್ರಜಾಪ್ರಭುತ್ವದ ವಿರುದ್ಧ ಎಲ್ಲ ರೀತಿಯ ಪಿತೂರಿಗಳನ್ನು ಆರಂಭಿಸಿದೆ. ಆರಂಭದಲ್ಲಿ ಪ್ರಮುಖ ನಾಯಕರು ಜನರ ಮುಂದೆ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿ, ಸಂಜೆಯಾಗುತ್ತಿದ್ದಂತೆ ಸಂವಿಧಾನವನ್ನು ನಾಶಪಡಿಸುವ ವರದಿಯನ್ನು ತಯಾರಿಸುತ್ತಾರೆ. ಮುಂದೆ ಸಂಪೂರ್ಣವಾಗಿ ಅಧಿಕಾರಕ್ಕೆ ಬಂದರೆ ಅವರು ಸಂವಿಧಾನದ ಮೇಲೆ ದಾಳಿ ನಡೆಸುತ್ತಾರೆ” ಎಂದು ಪ್ರಿಯಾಂಕಾ ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಾಬಾ ಸಾಹೇಬ್‌ ಅವರ ಸಂವಿಧಾನ ಭಾರತದ ಆತ್ಮವಾಗಿದ್ದು,ಎಲ್ಲ ವಿಪಕ್ಷಗಳು ಬಿಜೆಪಿ ಸೋಲಿಸಲು ಒಂದಾಗಿವೆ ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದರು.

“ಇಂದು ನಾವೆಲ್ಲರೂ ಸಂವಿಧಾನ ಬದಲಿಸುವ ಬಿಜೆಪಿ ಯೋಜನೆಯ ವಿರುದ್ಧ ಒಂದಾಗಿದ್ದು, ದೇಶವು ಸಂವಿಧಾನದಿಂದ ಮುನ್ನಡೆಯಲಿದೆ ಎಂದು ಘಂಟಾಘೋಷವಾಗಿ ಹೇಳುತ್ತೇವೆ. ಸಂವಿಧಾನ ಬದಲಿಸುವ ಅವರ ಉದ್ದೇಶವನ್ನು ನಾವೆಲ್ಲರೂ ಒಟ್ಟಾಗಿ ಸೋಲಿಸುತ್ತೇವೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ರೈತರ ಆದಾಯವನ್ನು ದ್ವಿಗುಣ ಮಾಡುತ್ತೇನೆ ಎಂದು ಹೇಳಿದ್ದರು. ಎಂಎಸ್‌ಪಿಯನ್ನು ಹೆಚ್ಚಿಸಿ ಗ್ಯಾರಂಟಿ ಖಾತರಿ ನೀಡುತ್ತೇನೆ ಎಂದಿದ್ದರು. ತಮ್ಮ ಅವಧಿಯಲ್ಲಿ ದೇಶದ ಜನರಿಗಾಗಿ ಸುಳ್ಳು ಹೇಳುವುದನ್ನು ಬಿಟ್ಟು ಅಂತಹ ದೊಡ್ಡ ಅನುಕೂಲಗಳನ್ನು ಅವರು ಮಾಡಿಲ್ಲ ಎಂದು ಹರಿಹಾಯ್ದರು.

ಬಿಜೆಪಿ ಇಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು,ಏಕರೂಪ ನಾಗರಿಕ ಸಂಹಿತೆ, ಒಂದು ದೇಶ ಒಂದು ಚುನಾವಣೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...