ಚುನಾವಣೆಗಾಗಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆಯಿಂದ ಅವಘಡ: ಪ್ರಧಾನಿ ವಿರುದ್ಧ ಖರ್ಗೆ ಆಕ್ರೋಶ

Date:

ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಮಾರ್ಚ್‌ನಲ್ಲಿ ಟರ್ಮಿನಲ್‌ 1 ಅನ್ನು ವಿಸ್ತರಿಸುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 10 ವರ್ಷಗಳಲ್ಲಿ  ಕಳಪೆ ಮೂಲ ಸೌಕರ್ಯದಿಂದಾಗಿ ಮೋದಿ ಸರ್ಕಾರದ ಕಾಮಗಾರಿಗಳು ಇಸ್ಪೀಟ್‌ ಎಲೆಗಳಂತೆ ಕಳೆಗೆ ಬೀಳುತ್ತಿವೆ.  ಭ್ರಷ್ಟಾಚಾರ ಹಾಗೂ ಅಪರಾಧಿ ಭಾವನೆಯ ನಿರ್ಲಕ್ಷ್ಯದ ಬೇಜವಾಬ್ದಾರಿಯೆ ಇದಕ್ಕೆ ಕಾರಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೆಹಲಿ ವಿಮಾನ ಟರ್ಮಿನಲ್‌1ರ ನಿಲ್ದಾಣ ಹಾಗೂ ಮಧ್ಯ ಪ್ರದೇಶದ ವಿಮಾನ ನಿಲ್ದಾಣದ ಛಾವಣಿ ಕುಸಿತ ,ಅಯೋಧ್ಯೆಗಳ ರಸ್ತೆಗಳ ಸ್ಥಿತಿ, ರಾಮ ಮಂದಿರ ಸೋರಿಕೆ, ಮುಂಬೈನ ಹಾರ್ಬರ್‌ ಲಿಂಕ್‌ ರೋಡ್‌ ಬಿರುಕು ಬಿಟ್ಟಿರುವುದು, ಬಿಹಾರದಲ್ಲಿ 13 ಸೇತುವೆಗಳು ಕುಸಿತ, ಗುಜರಾತ್‌ನಲ್ಲಿ ಮೋಬ್ರಿ ಸೇತುವೆ ಕುಸಿತಗಳು ಮೋದಿ ಸರ್ಕಾರ ವಿಶ್ವ ದರ್ಜೆಯ ಮೂಲಸೌಕರ್ಯ ಎಂದು ಹೇಳಿಕೊಳ್ಳುವ ಪೊಳ್ಳು ಮಾತಿನ ನಿದರ್ಶನವಾಗಿವೆ ಎಂದು ಖರ್ಗೆ ಖಂಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

ಇವೆಲ್ಲವೂ ಚುನಾವಣೆಗೂ ಮುನ್ನ ರಿಬ್ಬನ್‌ ಕತ್ತರಿಸುವ ಸಮಾರಂಭದಲ್ಲಿ ತ್ವರಿತವಾಗಿ ತೊಡಗಿಸಿಕೊಳ್ಳುವುದಕ್ಕಾಗಿ ಮಾಡಿದ ಸುಳ್ಳು ಹಾಗೂ ವಾಕ್ಚಾತುರ್ಯದ ಪ್ರದರ್ಶನವಾಗಿದೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಮಡಿದ ಸಂತ್ರಸ್ತರಿಗೆ ಸಂತಾಪಗಳು. ಸಂಸ್ತ್ರಸ್ತ ಕುಟುಂಬ ಭ್ರಷ್ಟ, ಅಸಮರ್ಥ ಹಾಗೂ ಸ್ವಾರ್ಥ ಸರ್ಕಾರದ ಭಾರವನ್ನು ಹೊತ್ತಿಕೊಂಡಿದೆ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಘೋಷಣೆಯಾಗುವ ಮುನ್ನ ಮಾರ್ಚ್‌ 10ರಂದು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 9800 ಕೋಟಿ ರೂ. ವೆಚ್ಚದಲ್ಲಿ 15 ವಿಮಾನ ನಿಲ್ದಾಣ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇವುಗಳಲ್ಲಿ ಇಂದು ಮೇಲ್ಚಾವಣಿ ಕುಸಿತಗೊಂಡಿರುವ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೂಡ ಒಂದಾಗಿದೆ.

ಚುನಾವಣೆಗಾಗಿ ಅಪೂರ್ಣಗೊಂಡ ಕಾಮಗಾರಿಗಳನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದರಿಂದ ದುರ್ಘಟನೆಗಳು ಸಂಭವಿಸಿವೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...