FCRA ತಿದ್ದುಪಡಿ ಮಸೂದೆ ವಿರೋಧಿಸಿ ಸಂಸತ್ತಿನ ಆವರಣದಲ್ಲಿ ವಿಪಕ್ಷ ಸಂಸದರ ಪ್ರತಿಭಟನೆ

Date:

ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಸೂದೆ ವಿರುದ್ದ ಬುಧವಾರ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಹಲವಾರು ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

- Advertisement -

‘ಎನ್‌ಜಿಒಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಿ’ ಎಂದು ಬರೆದ ಬೃಹತ್ ಬ್ಯಾನರ್ ಹಿಡಿದ ವಿಪಕ್ಷ ಸಂಸದರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಸಂಸದರು, ಎಸ್‌ಪಿಯ ಡಿಂಪಲ್ ಯಾದವ್ ಮತ್ತು ರಾಮ್ ಗೋಪಾಲ್ ಯಾದವ್, ಐಯುಎಂಎಲ್‌ನ ಇಟಿ ಮೊಹಮ್ಮದ್ ಬಶೀರ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ಮತ್ತು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಎಫ್‌ಸಿಆರ್‌ಎ ತಿದ್ದುಪಡಿ: ಸ್ವಯಂಸೇವಾ ಸಂಸ್ಥೆಗಳು, ಕ್ರೈಸ್ತ ಸಮುದಾಯದ ಕೊರಳಿಗೆ ಕುಣಿಕೆಯಾದ ಕಾಯ್ದೆ

ಇನ್ನು ಕಾಂಗ್ರೆಸ್ ಮಂಗಳವಾದ ಈ ಮಸೂದೆ ವಿರುದ್ದ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಮಸೂದೆ ಸಂವಿಧಾನಬಾಹಿರವಾಗಿದ್ದು, ಈ ಕಠಿಣ ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿತ್ತು. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ, ಸಂಘಟನಾ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಪಕ್ಷದ ಸಂಸದರು ದೆಹಲಿಗೆ ತುರ್ತಾಗಿ ತಲುಪಿ ಬುಧವಾರ ಸಂಸತ್ತಿಗೆ ಹಾಜರಾಗುವಂತೆ ಕೇಳಿಕೊಂಡಿದ್ದರು.

ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ (ಎಫ್‌ಸಿಆರ್‌ಎ) ತಿದ್ದುಪಡಿ ಮಸೂದೆಯನ್ನು ಮಾರ್ಚ್ 25ರಂದು ಲೋಕಸಭೆಯಲ್ಲಿ ಪರಿಚಯಿಸಲಾಗಿದೆ. ವಿದೇಶಿ ನಿಧಿಯ ಮೂಲಕ ಬಲವಂತದ ಧಾರ್ಮಿಕ ಮತಾಂತರದಲ್ಲಿ ತೊಡಗಿರುವ ವ್ಯಕ್ತಿಗಳನ್ನು ನಾವು ಬಿಡಲ್ಲ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಈ ಮಸೂದೆ ಅಲ್ಪಸಂಖ್ಯಾತರ ಅದರಲ್ಲೂ ಕ್ರೈಸ್ತ ಸಮುದಾಯದ ಸಂಸ್ಥೆಗಳ ಮೇಲೆ ನಡೆಸುವ ಪ್ರಹಾರ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಕೇರಳದಲ್ಲಿ ವಿಧಾನಸಭೆ ಚುನಾವಣೆಯ ನಡುವೆ ಬಿಜೆಪಿಗೆ ಈ ಮಸೂದೆ ಹಿನ್ನಡೆ ತರುವ ಸಾಧ್ಯತೆಯಿದೆ.

ಈ ಮಸೂದೆಯಡಿಯಲ್ಲಿ ನಿಯೋಜಿತ ಪ್ರಾಧಿಕಾರ ಎಂಬ ಹೊಸ ವ್ಯವಸ್ಥೆಯಿದೆ. ಯಾವುದೇ ಸಂಸ್ಥೆಯ ಎಫ್‌ಸಿಆರ್‌ಎ ಪರವಾನಗಿ ರದ್ದಾದರೆ, ಅಮಾನತುಗೊಂಡರೆ ಅಥವಾ ನವೀಕರಣಗೊಳ್ಳದಿದ್ದರೆ ಆ ಸಂಸ್ಥೆಯು ವಿದೇಶಿ ಹಣದಿಂದ ನಿರ್ಮಿಸಿದ ಕಟ್ಟಡ, ಆಸ್ಪತ್ರೆ, ಶಾಲೆ ಮೊದಲಾದ ಆಸ್ತಿಗಳನ್ನು ಈ ಪ್ರಾಧಿಕಾರವು ತನ್ನ ವಶಕ್ಕೆ ಪಡೆಯಬಹುದಾಗಿದೆ. ಧಾರ್ಮಿಕ ಪ್ರಾರ್ಥನಾ ಮಂದಿರಗಳನ್ನೂ ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಳ್ಳಬಹುದು. ಇದು ತೀವ್ರ ಆತಂಕವನ್ನು ಸೃಷ್ಟಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...