ರಾಮಮಂದಿರ ಲೂಟಿ ಚರ್ಚೆಗೆ ವಿಪಕ್ಷಗಳ ಆಗ್ರಹ; ಆಗಸ್ಟ್‌ 3ವರೆಗೆ ಉಭಯ ಸದನಗಳ ಮುಂದೂಡಿಕೆ

Date:

ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಲೂಟಿ ಪ್ರಕರಣದ ಕುರಿತು ಸಂಸತ್ತಿನಲ್ಲಿ ತುರ್ತು ಚರ್ಚೆ ನಡೆಸಬೇಕೆಂದು ವಿಪಕ್ಷಗಳು ಸಂಸತ್ತಿನ ಎರಡೂ ಸದನಗಳಲ್ಲಿ ಪಟ್ಟು ಹಿಡಿದಿವೆ. ವಿಪಕ್ಷಗಳ ಆಗ್ರಹದ ನಡುವೆಯೂ ಚರ್ಚೆಗೆ ಅವಕಾಶ ನೀಡದ ಲೋಕಸಭೆ ಮತ್ತು ರಾಜ್ಯಸಭೆಯ ಸ್ಪೀಕರ್‌ ಮತ್ತು ಸಭಾಪತಿಗಳು ಎರಡೂ ಸದನಗಳ ಕಲಾಪಗಳನ್ನು ಆಗಸ್ಟ್‌ 3ರವರೆಗೆ ಮುಂದೂಡಿದ್ದಾರೆ.

- Advertisement -

ಕಲಾಪ ಆರಂಭವಾಗುತ್ತಿದ್ದಂತೆಯೇ ‘ಇಂಡಿಯಾ’ ಮೈತ್ರಿಕೂಟದ ಸಂಸದರು ರಾಮ ಮಂದಿರ ಕಾಣಿಕೆ ದುರ್ಬಳಕೆ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಇದರ ಜೊತೆಗೆ ವಿದ್ಯಾರ್ಥಿಗಳ ಪ್ರತಿಭಟನೆ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿಚಾರವನ್ನೂ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸದನದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು, ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆಗಳ ಕಳ್ಳತನ ಮತ್ತು ದುರ್ಬಳಕೆ ಆರೋಪಗಳು ದೇಶದ ಜನರ ನಂಬಿಕೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿದೆ. ಈ ದೇಣಿಗೆ ಲೂಟಿ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದವು.

ಇತ್ತೀಚೆಗಷ್ಟೇ ಸಂಸತ್ ಆವರಣದಲ್ಲಿಯೂ ಕಾಣಿಕೆ ಪೆಟ್ಟಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದ ಸಂಸದರು, “ರಾಮ ಮಂದಿರ ಕಾಣಿಕೆ ಕಳ್ಳತನ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯುತ್ತಿದೆ. ಆದರೂ, ಪ್ರಕರಣದ ಬಗ್ಗೆ ಸರ್ಕಾರ ಮೌನಕ್ಕೆ ಜಾರಿದೆ” ಎಂದು ಆರೋಪಿಸಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಂಗೀತಾ’ ಮತ್ತು ‘ಸಂಗೇತಾ’ ನಡುವಿನ ವ್ಯತ್ಯಾಸ ಹಸಿದ ಗ್ರಾಹಕರಿಗೆ ತಿಳಿಯದು: ಮದ್ರಾಸ್ ಹೈಕೋರ್ಟ್

ತಂಜಾವೂರಿನ ಐತಿಹಾಸಿಕ ಬೃಹದೀಶ್ವರ ದೇವಾಲಯದ ಎದುರು ಇರುವ ಉಪಾಹಾರ ಗೃಹವೊಂದು ‘ಹೋಟೆಲ್...

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು...

ತೇಣಿ ಜೈಲ್‌ಬ್ರೇಕ್; ಹಿರಿಯ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿದ ಸಿಎಂ ವಿಜಯ್!

 ಆಗಸ್ಟ್ 6, 2024 ರಿಂದ ತೇಣಿ ಜಿಲ್ಲಾ ಜೈಲಿನ ಹೆಚ್ಚುವರಿ ಸೂಪರಿಂಟೆಂಡೆಂಟ್...