ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್‌ ಅವರಿಗೆ ಪತ್ರ ಬರೆದಿವೆ. ಪತ್ರದಲ್ಲಿ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR), ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ (EVM) ಬಳಕೆಯ ವಿಧಾನಗಳು ಹಾಗೂ ಪ್ರಸ್ತುತ ಎಎಪಿ ಆಡಳಿವಿರುವ ಪಂಜಾಬ್‌ನ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಉಲ್ಲೇಖಿಸಿದ್ದು, ಕಳವಳ ವ್ಯಕ್ತಪಡಿಸಿವೆ. ಅಕ್ಟೋಬರ್ 10 ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೋಲಿಸರು ನಡೆಸಿದ ದೌರ್ಜನ್ಯದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿವೆ.

- Advertisement -

2027ರ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯ ಬಗ್ಗೆ ಪತ್ರದಲ್ಲಿ ಕಳವಳ ವ್ಯಕ್ತಪಿಸಲಾಗಿದೆ. ಗಡಿ ರಾಜ್ಯವಾದ ಪಂಜಾಬ್‌ನಲ್ಲಿ ಮತದಾರರ ಸಂಖ್ಯೆಯು 2026ರ ಜೂನ್ ತಿಂಗಳಿನಲ್ಲಿ 2.14 ಕೋಟಿಯಷ್ಟಿತ್ತು. ಆದರೆ, ಆಗಸ್ಟ್ ತಿಂಗಳಿನಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದಾಗ ಈ ಸಂಖ್ಯೆಯು 1.93 ಕೋಟಿಗೆ ಕುಸಿದಿದೆ. ಅಂದರೆ, ಕೇವಲ ಎರಡೇ ತಿಂಗಳಲ್ಲಿ ಸುಮಾರು 20 ಲಕ್ಷ ಮತದಾರರ ಹೆಸರುಗಳು ಪಟ್ಟಿಯಿಂದ ನಾಪತ್ತೆಯಾಗಿವೆ ಎಂದು ವಿಪಕ್ಷಗಳ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಎಸ್‌ಐಆರ್ ಮತ್ತು ಇವಿಎಂ ವಿಷಯಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, “ಚುನಾವಣಾ ಆಯೋಗದ ಸಾಂಸ್ಥಿಕ ಅಧಿಕಾರವನ್ನು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಏಕಪಕ್ಷೀಯ ನಿರ್ಧಾರದ ಮೂಲಕ ‘ಎಸ್‌ಐಆರ್’ ಪ್ರಕ್ರಿಯೆಗೆ ಬಳಸಿಕೊಂಡಿದ್ದಾರೆ” ಎಂದು ದೂರಲಾಗಿದೆ.

2025ರ ಫೆಬ್ರವರಿಯಲ್ಲಿ ಗ್ಯಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡುವ ಆಯ್ಕೆ ಸಮಿತಿ ಸಭೆಯಲ್ಲೇ ರಾಹುಲ್‌ ಗಾಂಧಿ ಅವರು ಅಸಮ್ಮತಿ ಟಿಪ್ಪಣಿಯನ್ನು ದಾಖಲಿಸಿದ್ದನ್ನು ಪತ್ರದಲ್ಲಿ ವಿವರಿಸಲಾಗಿದೆ.

ಪ್ರಸ್ತುತ, ಪತ್ರದಲ್ಲಿ ಗ್ಯಾನೇಶ್‌ ಕುಮಾರ್ ಅವರ ವಜಾಕ್ಕೆ ಆಗ್ರಹಿಸುತ್ತಿಲ್ಲ. ಬದಲಾಗಿ, ಗ್ಯಾನೇಶ್ ಮತ್ತು ಚುನಾವಣಾ ಆಯೋಗದ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಸೂಕ್ತ ಪರಿಶೀಲನೆ ಮತ್ತು ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮಾತ್ರವೇ ಕೋರುತ್ತಿದ್ದೇವೆ ಎಂದು ವಿಪಕ್ಷಗಳು ಸ್ಪಷ್ಟವಾಗಿ ಹೇಳಿದೆ. ಈ ಮನವಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಬಾಕಿ ಇರುವ ಸಂಬಂಧಿತ ಪ್ರಕರಣಗಳ ವಿಚಾರಣೆಯ ಜೊತೆಯಲ್ಲೇ ಪರಿಗಣಿಸಬಹುದು ಎಂದೂ ವಿಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ.

ಹೊಸದಾಗಿ ಮತದಾರರಾಗಿ ನೋಂದಾಯಿಸಿಕೊಳ್ಳಲು ಅಗತ್ಯವಿರುವ ‘ಫಾರ್ಮ್-6’ ಕುರಿತು ಪ್ರಸ್ತಾಪಿಸಿರುವ ವಿಪಕ್ಷಗಳು, “ಅರ್ಜಿದಾರರು ಅಥವಾ ಅವರ ಸಂಬಂಧಿಕರು ಹಿಂದೆ ನಡೆದ ಯಾವುದೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರೇ ಎಂಬುದನ್ನು ಘೋಷಿಸುವ ಹೊಸ ನಿಬಂಧನೆ ಸೇರಿಸಲಾಗಿದೆ. ಅಕ್ಟೋಬರ್ 5ರಂದು ಸುಪ್ರೀಂ ಕೋರ್ಟ್‌, ‘ಈ ಪರಿಷ್ಕೃತ ಫಾರ್ಮ್-6ಗೆ ತಾವು ಯಾವುದೇ ಅನುಮೋದನೆ ನೀಡಿಲ್ಲ’ ಎಂದಿತ್ತು. ಆದರೂ, ಹೊಸ ನಿಬಂದನೆಯುಳ್ಳ ಫಾರ್ಮ್‌-6 ಮುಂದುವರೆದಿದೆ. ಆಯೋಗವು ಕಾನೂನುಬಾಹಿರ ಷರತ್ತುಗಳನ್ನು ಹೇರುವುದರಿಂದ ಹೊಸ ಮತ್ತು ಚೊಚ್ಚಲ ಮತದಾರರ ಹಕ್ಕಿಗೆ ಧಕ್ಕೆಯಾಗುತ್ತದೆ. ಇದರಿಂದ ಬೃಹತ್ ಪ್ರಮಾಣದ ಅರ್ಹ ಮತದಾರರು ಹೊರಗುಳಿಯುವ ಅಪಾಯವಿದೆ” ಎಂದು ಹೇಳಿವೆ.

 ದೇಶಾದ್ಯಂತ ಎಸ್‌ಐಆರ್ ಪ್ರಕ್ರಿಯೆಯನ್ನು ಜಾರಿಗೆ ತರಲು ಚುನಾವಣಾ ಆಯೋಗವು ಯಾವುದೇ ಅಧಿಕೃತ ತೀರ್ಮಾನ ಕೈಗೊಂಡಿರುವ ದಾಖಲೆಗಳಿಲ್ಲ ಎಂದು ಹೇಳಲಾಗಿದೆ. ಅಂತಹ ತೀರ್ಮಾನದ ಕಡತವೇನಾದರೂ ಇದ್ದರೆ ಅದನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಇದಲ್ಲದೆ, ಆಯೋಗದ ‘ಇಸಿಐ-ನೆಟ್’ ವ್ಯವಸ್ಥೆಯು ಕೇಂದ್ರೀಕೃತ ಮತ್ತು ಅಪಾರದರ್ಶಕ ವಿನ್ಯಾಸವನ್ನು ಹೊಂದಿದೆ.  1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 13ಬಿ ಪ್ರಕಾರ, ಮತದಾರರ ಪಟ್ಟಿಯ ತಯಾರಿ ಮತ್ತು ಪರಿಷ್ಕರಣೆಯ ಪೂರ್ಣ ಅಧಿಕಾರವು ಸ್ಥಳೀಯ ‘ಚುನಾವಣಾ ನೋಂದಣಿ ಅಧಿಕಾರಿಗಳಿಗೆ’ (ERO) ಸೇರಿದ್ದಾಗಿದ್ದು, ತಂತ್ರಾಂಶ ಅಥವಾ ತಾಂತ್ರಿಕ ಬದಲಾವಣೆಗಳ ಮೂಲಕ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ತಪ್ಪಾಗಿ ಮತದಾರರನ್ನು ಅಳಿಸುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ ಎಂದು ವಿಪಕ್ಷಗಳು ಹೇಳಿವೆ.

ಇವಿಎಂಗಳ ವಿಚಾರವನ್ನೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದ್ದು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರಕ್ರಿಯೆಗಳು ಮತ್ತು ನೀತಿಗಳು ಮೊದಲಿಗೆ ಚುನಾವಣೆಗಳು ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿವೆ ಎಂಬ ನಂಬಿಕೆಯನ್ನು ಸಾಮಾನ್ಯ ಮತದಾರರಲ್ಲಿ ಮೂಡಿಸುವಂತಿರಬೇಕು. ಆದ್ದರಿಂದ ಜಾಗತಿಕ ಅತ್ಯುತ್ತಮ ಮಾನದಂಡಗಳಿಗೆ ಅನುಗುಣವಾಗಿ ಇವಿಎಂ-ಸಂಬಂಧಿತ ನಿರ್ಧಾರಗಳು, ನೀತಿಗಳು, ಕಾರ್ಯವಿಧಾನಗಳು, ತಾಂತ್ರಿಕ ವಿನ್ಯಾಸ ಹಾಗೂ ಶೈಲಿಯನ್ನು ಕೂಲಂಕಷವಾಗಿ ಮರುಪರಿಶೀಲಿಸಬೇಕು” ಎಂದು ಆಗ್ರಹಿಸಲಾಗಿದೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್,...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....