ಕೆನ್-ಬೆಟ್ವಾ ಯೋಜನೆಗೆ ವಿರೋಧ: 14 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅಮಿತ್ ಭಟ್ನಾಗರ್ ಬಂಧನ; 150 ಮಂದಿ ವಶಕ್ಕೆ

Date:

ದೇಶದ ಮೊದಲ ನದಿ ಜೋಡಣೆ ಯೋಜನೆಯಾದ ‘ಕೆನ್-ಬೆಟ್ವಾ ಲಿಂಕ್ ಯೋಜನೆ’ಯನ್ನು ವಿರೋಧಿಸಿ ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಕುಪಿ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದ ಸರ್ಕಾರ, ಪೊಲೀಸರ ಮೂಲಕ ಪ್ರತಿಭಟನಾಕಾರರನ್ನು ಬಂಧಿಸಿದೆ. ಯೋಜನೆಯ ವಿರುದ್ಧ ಸತತ 14 ದಿನಗಳಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದ ಹೋರಾಟಗಾರ ಅಮಿತ್ ಭಟ್ನಾಗರ್ ಅವರನ್ನು ಪೊಲೀಸರು ಹೊತ್ತೊಯ್ದಿದಿದ್ದು, ಆಸ್ಪತ್ರೆಗೆ ದಾಖಲಿಸಿದೆ.

- Advertisement -

ಸುಮಾರು 44,605 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದಾಗಿ ಮುಳುಗಡೆಯಾಗಲಿರುವ ದೌಧನ್ ಜಲಾಶಯ ವ್ಯಾಪ್ತಿಯ ಸುಮಾರು 2,000 ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಿಲ್ಲ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಜುಲೈ 3 ರಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಭಾನುವಾರ ಮುಂಜಾನೆ, ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸುತ್ತಿದ್ದಂತೆ, ಭಟ್ನಾಗರ್ ಮತ್ತು ಇತರ ಪ್ರತಿಭಟನಾಕಾರರು ನದಿಗೆ ಇಳಿದು ಪೊಲೀಸರು ವಾಪಸ್ ಹೋಗುವಂತೆ ಘೋಷಣೆಗಳನ್ನು ಕೂಗಿದರು. ಆದರೂ, ಪೊಲೀಸರು ಸುಮಾರು 150 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಸ್‌ನಲ್ಲಿ ಕರೆದೊಯ್ದಿದ್ದಾರೆ.

ತಮ್ಮ ಕಾರ್ಯಾಚರಣೆ ಬಗ್ಗೆ ಮಾತನಾಡಿದರು ಛತ್ತರಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಪಾಟ್ಲೆ, “ಸತತ ಎರಡು ವಾರಗಳಿಂದ ಆಹಾರ ತ್ಯಜಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ಭಟ್ನಾಗರ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರತಿಭಟನಾಕಾರರನ್ನು ಪನ್ನಾ ಜಿಲ್ಲೆಗೆ ರವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ತಮ್ಮ ಬಂಧನಕ್ಕೂ ಮುನ್ನ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ್ದ ಹೋರಾಟಗಾರ ಅಮಿತ್ ಭಟ್ನಾಗರ್, “ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆಯು ಪಾರದರ್ಶಕವಾಗಿಲ್ಲ. ಪರಿಹಾರ ವಿತರಣೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ರತಿಯಾ, ಕರಿ ಮತ್ತು ಖಜ್ನಾವಿ ಸೇರಿದಂತೆ ಹಲವು ಗ್ರಾಮ ಪಂಚಾಯತ್‌ಗಳ ಸಭಾ ನಡಾವಳಿಗಳ ಪುಸ್ತಕದಲ್ಲಿ ಒಂದೇ ರೀತಿಯ ಒಕ್ಕಣೆಯನ್ನು ನಕಲು ಮಾಡಿ ಬರೆಯಲಾಗಿದೆ. ಅಲ್ಲದೆ, ಖರಿಹಾನಿ ಗ್ರಾಮದಲ್ಲಿ ಮನೆಗಳ ಪರಿಹಾರಕ್ಕಾಗಿ ಮಂಜೂರಾಗಿದ್ದ 11 ಕೋಟಿ ರೂಪಾಯಿಗಳ ಪೈಕಿ ಸುಮಾರು 8 ಕೋಟಿ ರೂಪಾಯಿಯನ್ನು ಆ ಗ್ರಾಮಕ್ಕೆ ಸಂಬಂಧವೇ ಇಲ್ಲದ ಹಾಗೂ ದಶಕಗಳ ಹಿಂದೆಯೇ ವಲಸೆ ಹೋಗಿದ್ದ ವ್ಯಕ್ತಿಗಳ ಹೆಸರಿಗೆ ವಿತರಿಸಲಾಗಿದೆ” ಎಂದು ಅವರು ದಾಖಲೆ ಸಮೇತ ದೂರಿದ್ದಾರೆ.

ಆದಾಗ್ಯೂ, ಈ ಎಲ್ಲಾಆರೋಪಗಳನ್ನು ಛತ್ತರಪುರ ಜಿಲ್ಲಾಧಿಕಾರಿ ಪಾರ್ಥ್ ಜೈಸ್ವಾಲ್ ತಳ್ಳಿಹಾಕಿದ್ದಾರೆ. “ಪ್ರತಿಭಟನೆಯಲ್ಲಿ ತೊಡಗಿರುವವರಲ್ಲಿ 90%ರಷ್ಟು ಜನರು ಈ ಯೋಜನೆಯಿಂದ ಸಂತ್ರಸ್ತರಾದವರೇ ಅಲ್ಲ. ಗ್ರಾಮ ಸಭೆಯ ದಾಖಲೆಗಳು ನಕಲಿ ಎಂಬ ಆರೋಪ ಸುಳ್ಳಾಗಿದ್ದು, ಜಿಲ್ಲಾಡಳಿತವು ನಿಯಮಾನುಸಾರವೇ ಪರಿಹಾರ ವಿತರಿಸಿದೆ. ನೆರೆಯ ಪನ್ನಾ ಜಿಲ್ಲೆಯ ಇತರ ಅಣೆಕಟ್ಟು ಯೋಜನೆಗಳ ಕುರಿತು ಅಸಮಾಧಾನ ಹೊಂದಿರುವ ಕೆಲವು ಹೊರಗಿನ ವ್ಯಕ್ತಿಗಳು ಇಲ್ಲಿ ಬಂದು ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದು ಪ್ರತಿಭಟನಾಕಾರರ ವಿರುದ್ಧ ಆರೋಪ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...