ಜಮ್ಮು ಕಾಶ್ಮೀರ ನಿಗೂಢ ಕಾಯಿಲೆಗೆ ‘ಆರ್ಗನೊಫಾಸ್ಫರಸ್’ ವಿಷ ಕಾರಣ: ತಜ್ಞರು

Date:

ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ ‘ನಿಗೂಢ ಕಾಯಿಲೆ’ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು ‘ಆರ್ಗನೊಫಾಸ್ಫರಸ್’ ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -

ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು ಪ್ರತಿವಿಷವನ್ನು ನೀಡಲಾಗಿದೆ, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯದ ಮೇಲೆ ಇದು ಉತ್ತಮವಾದ ಪ್ರಭಾವ ಬೀರಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಬಲಿ; ‘ಕಂಟೈನ್ಮೆಂಟ್ ಝೋನ್’ ಘೋಷಣೆ, ವೈದ್ಯರ ರಜೆ ರದ್ದು

“ನಾವು ಅಟ್ರೋಪಿನ್ ಪ್ರತಿವಿಷವನ್ನು ಬಳಿಸಿದ್ದೇವೆ. ಅದು ಚೆನ್ನಾಗಿ ಕೆಲಸ ಮಾಡಿದೆ. ವಿಷದ ನಿಖರವಾದ ಸ್ವರೂಪವನ್ನು ನಿರ್ಧರಿಸಿದ ನಂತರ ನಾವು ರೋಗಿಗಳಿಗೆ ಅಟ್ರೋಪಿನ್ ನೀಡಿದ್ದೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಾಧಾಲ್ ಗ್ರಾಮದಲ್ಲಿ ಸಾವುಗಳ ಹಿಂದೆ ಸಾಂಕ್ರಾಮಿಕ ರೋಗ ಅಥವಾ ವೈರಸ್‌ಗಳು ಅಥವಾ ಬ್ಯಾಕ್ಟೀರಿಯಾಗಳು ಕಾರಣವಲ್ಲ ಎಂಬುದು ಪ್ರಯೋಗಾಲಯದಲ್ಲಿ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಕಾರಣವನ್ನು ಪತ್ತೆ ಹಚ್ಚುವುದು ಅತೀ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಹಾಗಾಗಿ ನಿಗೂಢ ಕಾಯಿಲೆ ಎಂದೇ ಕರೆಯಲಾಗಿತ್ತು.

ಭಾರತದ ಆಹಾರ ಸುರಕ್ಷತಾ ಮಾನದಂಡಗಳ ಪ್ರಾಧಿಕಾರವು ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರ ಆರೋಗ್ಯ ಇಲಾಖೆಗೆ ಪರೀಕ್ಷೆಯಲ್ಲಿ ಆರ್ಗನೊಫಾಸ್ಫರಸ್ ಕಂಡುಬಂದಿದೆ. ಅದು ಸಾವಿಗೆ ಕಾರಣ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

“ಆಹಾರ ಮತ್ತು ನೀರಿನಲ್ಲಿ ಆರ್ಗನೊಫಾಸ್ಫರಸ್ ಬಳಕೆಯು ನರಹತ್ಯೆಯೇ ಅಥವಾ ಆಕಸ್ಮಿಕವೇ ಎಂಬುದು ಈಗ ತನಿಖೆಯ ವಿಷಯವಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದರು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾವುಗಳ ತನಿಖೆಗಾಗಿ ವಿಶೇಷ ತನಿಖಾ ತಂಡ ಅಥವಾ ಎಸ್‌ಐಟಿಯನ್ನು ರಚಿಸಿದ್ದಾರೆ.

ಕಳೆದ ವಾರ, ಅಧಿಕಾರಿಗಳು ಗ್ರಾಮವನ್ನು ಕಂಟೈನ್‌ಮೆಂಟ್ ವಲಯವೆಂದು ಘೋಷಿಸಿ 200ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಿದರು. ಇದರ ಹೊರತಾಗಿ, ಗ್ರಾಮಸ್ಥರು ಉಪಯೋಗಿಸುತ್ತಿದ್ದ ನೀರಿನ ಮೂಲದಲ್ಲಿ ಕೀಟನಾಶಕಗಳು ಕಂಡುಬಂದಿದೆ. ತನಿಖೆಗಾಗಿ ಸದ್ಯ ಅದನ್ನೂ ಮುಚ್ಚಲಾಗಿದೆ. ಗ್ರಾಮಸ್ಥರು ಬಳಸಿದ ಆಹಾರ ಪದಾರ್ಥಗಳನ್ನು ಸಹ ಪರೀಕ್ಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...