‘ನಮ್ಮ ಹೋರಾಟ ಮುಂದುವರಿಯಲಿದೆ, ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು’: ರಾಹುಲ್ ಗಾಂಧಿ

Date:

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆದ ತೀವ್ರ ಪ್ರತಿಭಟನೆಯ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳು ಸರ್ಕಾರದ ಮುಂದಿಟ್ಟಿದ್ದ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಇದರ ಬೆನ್ನಲ್ಲೇ, ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ತಕ್ಷಣವೇ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ವಿದ್ಯಾರ್ಥಿಗಳ ಹೋರಾಟಕ್ಕೆ ಬೃಹತ್ ಗೆಲುವು ದೊರೆತಿದೆ. ನಮ್ಮ ಶಿಕ್ಷಣ ವ್ಯವಸ್ಥೆಯ ಮೇಲೆ ದಾಳಿ ನಡೆಯುತ್ತಿತ್ತು. ಶಿಕ್ಷಣವನ್ನು ಖಾಸಗೀಕರಣಗೊಳಿಸಲಾಗುತ್ತಿತ್ತು; ಅಂತಹ ಕೃತ್ಯಗಳಿಗೆ ಈ ಬೃಹತ್ ಆಂದೋಲನವು ಸೂಕ್ತ ಉತ್ತರ ನೀಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಪ್ರಧಾನ್ ರಾಜೀನಾಮೆ ನೀಡಬೇಕಿತ್ತು. ಅವರು ಹುದ್ದೆಯಿಂದ ನಿರ್ಗಮಿಸಿದ್ದು ಒಳ್ಳೆಯದೇ ಆಯಿತು. ಆದರೆ, ಈಗ ಸರ್ಕಾರವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಗಾಂಧಿ, “ಆರ್‌ಎಸ್‌ಎಸ್ ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಆಕ್ರಮಿಸಿಕೊಂಡಿದೆ. ಮೋದಿಯವರದ್ದು ತಪ್ಪಿದ್ದರೆ, ಆರ್‌ಎಸ್‌ಎಸ್‌ನದ್ದೂ ಅಷ್ಟೇ ತಪ್ಪಿದೆ. ಅದು ನಮ್ಮ ಶಿಕ್ಷಣ ವ್ಯವಸ್ಥೆಗೆ ಗೆದ್ದಲಿನಂತೆ ಕೆಲಸ ಮಾಡಿದೆ. ಜ್ಞಾನ ಮತ್ತು ಶಿಕ್ಷಣದ ಮೇಲೆ ಆಕ್ರಮಣ ಎಸಗಲಾಗಿದೆ,” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಆಗ ‘ಜಿರಳೆ’ ಎಂಬ ಚುಚ್ಚುಮಾತು, ಈಗ ಸಮಯವಿಲ್ಲವೆಂಬ ನಿರ್ಲಕ್ಷ್ಯ: ಪ್ರತಿಭಟನೆಯ ಬೆಂಕಿಗೆ ತುಪ್ಪ ಸುರಿದರೆ…

“ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ಅಭಿನಂದನೆಗಳು; ನಿಮ್ಮೆಲ್ಲರ ಬಗ್ಗೆ ನಮಗೆ ಹೆಮ್ಮೆಯಿದೆ. ರಸ್ತೆಗಿಳಿದು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ತಮ್ಮ ಭವಿಷ್ಯದ ರಕ್ಷಣೆಗೆ ದೃಢವಾಗಿ ನಿಂತ ಪ್ರತಿಯೊಬ್ಬ ಯುವಕ ಹಾಗೂ ವಿದ್ಯಾರ್ಥಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು,” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ರೈತರು, ಕಾರ್ಮಿಕರು, ಬಡವರು ಹಾಗೂ ಈ ಸರ್ಕಾರದಿಂದ ತುಳಿತಕ್ಕೊಳಗಾದ ಸಮಾಜದ ಪ್ರತಿಯೊಂದು ವರ್ಗಕ್ಕೂ ನನ್ನದೊಂದು ಸಂದೇಶ: ಸಂವಿಧಾನಾತ್ಮಕ ಮಾರ್ಗದಲ್ಲಿ ನಿಮ್ಮ ಸಾಭಿಮಾನಕ್ಕಾಗಿ ದೃಢವಾಗಿ ನಿಲ್ಲುವುದೇ ನಿಜವಾದ ಧೈರ್ಯ. ಈ ಸರ್ಕಾರವನ್ನು ತೊಲಗಿಸುವ ಸಮಯ ಬಂದಿದೆ, ಯಾವುದಕ್ಕೂ ಹೆದರಬೇಡಿ,” ಎಂದು ಅವರು ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....