CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

Date:

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಭಾನುವಾರ ಮುಂಬೈ ಮತ್ತು ದೆಹಲಿಯಲ್ಲಿ ಪ್ರತಿಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ನಾಗರಿಕ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಂತೆ ಇತ್ತ ಮೋದಿ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಕಸರತ್ತು ನಡೆಸಿದೆ. ಮೋದಿ ಹಾಗೂ ಸಚಿವ ಅಮಿತ್‌ ಶಾ ಅವರ ದಮನಕಾರಿ ಕ್ರಮಗಳು ಇದೀಗ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿವೆ.

- Advertisement -

ಮುಂಬೈನಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ, ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ, ಎನ್‌ಸಿಪಿ (ಎಸ್‌ಪಿ) ರಾಜ್ಯಾಧ್ಯಕ್ಷ ಜಯಂತ್‌ ಪಾಟೀಲ್‌ ಹಾಗೂ ಕಾಂಗ್ರೆಸ್‌ ನಾಯಕ ಬಾಳಾಸಾಹೇಬ್‌ ಥೋರಾತ್‌ ಸೇರಿದಂತೆ ಸಾವಿರಾರು ಮಂದಿ ‘ವಿರಾಟ್‌ ಗರ್ಜನಾ ಮೋರ್ಚಾ’ದಲ್ಲಿ ಭಾಗವಹಿಸಿದರು. ಬಳಿಕ ಪ್ರತಿಭಟನಾ ಮೆರವಣಿಗೆ ರ‍್ಯಾಲಿಯಾಗಿ ಪರಿವರ್ತನೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಈ ವೇಳೆ ಮಾತನಾಡಿದ ಉದ್ಧವ್‌ ಠಾಕ್ರೆ, ದೇಶ ಅಧಿಕಾರದಲ್ಲಿರುವವರ ದಬ್ಬಾಳಿಕೆ ಮತ್ತು ಸರ್ವಾಧಿಕಾರಿ ಧೋರಣೆಯ ವಿರುದ್ಧ ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದೆ ಎಂದು ಆರೋಪಿಸಿದರು. ಮಹಾರಾಷ್ಟ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಮೂಲಕ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರನ್ನು ಹೊರಗಿಡಲಾಗಿದೆ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗ ಸೇರಿದಂತೆ ಸ್ವತಂತ್ರ ಸಂಸ್ಥೆಗಳು ಬಿಜೆಪಿ ಪ್ರಭಾವದಿಂದ ಮುಕ್ತವಾಗಿ ಹಾಗೂ ನ್ಯಾಯಸಮ್ಮತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದರು. ಈ ಕಾರಣದಿಂದಲೇ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಪಕ್ಷಕ್ಕೆ ಅನುಕೂಲವಾಗುವಂತೆ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಎಂಎನ್‌ಎಸ್‌ ಮುಖ್ಯಸ್ಥ ರಾಜ್‌ ಠಾಕ್ರೆ, SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಮತ್ತು ಮತದಾನವನ್ನು ಬ್ಯಾಲೆಟ್‌ ಪೇಪರ್‌ ಮೂಲಕ ನಡೆಸಬೇಕು ಎಂದು ಆಗ್ರಹಿಸಿದರು.

ಇತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (AAP), ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ನಾಗರಿಕ ಸಮಾಜದ ಸದಸ್ಯರು ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದರು.

ಪ್ರತಿಭಟನಾಕಾರರು ಜಂತರ್‌ ಮಂತರ್‌ ತಲುಪದಂತೆ ಕೇಂದ್ರ ದೆಹಲಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಈ ವೇಳೆ AISA ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ, ದೆಹಲಿ AAP ಅಧ್ಯಕ್ಷ ಸೌರಭ್‌ ಭಾರದ್ವಾಜ್‌ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

AISA ಕಾರ್ಯಕರ್ತರು ಸತತ ಮೂರನೇ ದಿನವೂ ಪ್ರತಿಭಟನೆ ಮುಂದುವರಿಸಿದರು. ಶಾಂಗ್ರಿ-ಲಾ ಹೆಕ್ಸಾಗನ್‌ ಬಳಿ ಬ್ಯಾರಿಕೇಡ್‌ ದಾಟಲು ಯತ್ನಿಸಿದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಇದನ್ನೂ ಓದಿ: ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಬ್ಯಾರಿಕೇಡ್‌ ಏರಲು ಯತ್ನಿಸಿದ ನೇಹಾ ಬೋರಾ ಅವರನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್‌ ವಾಹನದಲ್ಲಿ ಕರೆದೊಯ್ಯಲು ಮುಂದಾದಾಗ ಪ್ರತಿಭಟನಾಕಾರರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಕೆಲವರು ಪೊಲೀಸ್‌ ವಾಹನದ ಮುಂದೆ ಮಲಗಿದರೆ, ಹಲವು ಮಹಿಳೆಯರು ವಾಹನದ ಮೇಲೇರಿ ಬೋರಾ ಅವರನ್ನು ಕರೆದೊಯ್ಯುವುದನ್ನು ತಡೆಯಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ವಾಹನವನ್ನು ಹಿಂದಕ್ಕೆ ಚಲಾಯಿಸಿ ಬಳಿಕ ಅವರನ್ನು ಸ್ಥಳಾಂತರಿಸಿದರು.

CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೆಹಲಿ ಪೊಲೀಸರು ಭಾರಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಜಂತರ್‌ ಮಂತರ್‌ ಸೇರಿದಂತೆ ಕೇಂದ್ರ ದೆಹಲಿಯ ಹಲವು ಪ್ರದೇಶಗಳಲ್ಲಿ BNSS ಸೆಕ್ಷನ್‌ 163 ಅಡಿ ನಿರ್ಬಂಧ, ಬ್ಯಾರಿಕೇಡ್‌, ಪೊಲೀಸ್‌ ಮತ್ತು ಅರೆಸೇನಾ ಪಡೆಗಳ ನಿಯೋಜನೆ, ಪ್ರತಿಭಟನಾಕಾರರ ಬಂಧನ/ವಶಕ್ಕೆ ಪಡೆಯುವಿಕೆ ಹಾಗೂ ಸಂಚಾರ ನಿರ್ಬಂಧ ಜಾರಿಗೊಳಿಸಲಾಗಿದೆ.

ಅಕ್ಟೋಬರ್‌ 2ರಂದು ನಡೆದ ಪ್ರತಿಭಟನೆಯ ವೇಳೆ ಸುಮಾರು 1,000 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದ್ದು, ನಂತರದ ದಿನಗಳಲ್ಲೂ ನೂರಾರು ಮಂದಿ ವಶಕ್ಕೆ ಪಡೆಯಲಾಗಿದೆ. ಪ್ರತಿಭಟನಾಕಾರರು ಜಂತರ್‌ ಮಂತರ್‌ ತಲುಪದಂತೆ ಪೊಲೀಸರು ಅವರನ್ನು ಬಸ್‌ಗಳಲ್ಲಿ ವಿವಿಧ ಪೊಲೀಸ್‌ ಠಾಣೆಗಳಿಗೆ ಕರೆದೊಯ್ದಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿ ಪ್ರಕರಣಗಳನ್ನೂ ದಾಖಲಿಸಲಾಗಿದೆ. ಜತೆಗೆ, ಪ್ರತಿಭಟನೆ ಪ್ರದೇಶಗಳಲ್ಲಿ ಡ್ರೋನ್‌ಗಳ ಮೂಲಕ ನಿಗಾ, ಹೆಚ್ಚಿನ ಪೊಲೀಸ್‌ ಪಡೆಗಳ ನಿಯೋಜನೆ, ಮೆಟ್ರೋ ನಿಲ್ದಾಣಗಳ ಪ್ರವೇಶ-ನಿರ್ಗಮನದ ತಾತ್ಕಾಲಿಕ ನಿರ್ಬಂಧ ಹಾಗೂ ಕೆಲವು ಪ್ರದೇಶಗಳಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ, ಅನಿಯಂತ್ರಿತ ವಶಕ್ಕೆ ಪಡೆಯುವಿಕೆ, ಗುರುತಿನ ಬ್ಯಾಡ್ಜ್‌ಗಳನ್ನು ಮರೆಮಾಚುವುದು, ಸಿವಿಲ್‌ ಉಡುಪಿನ ಸಿಬ್ಬಂದಿ ಬಳಕೆ ಹಾಗೂ ಮುಖ ಗುರುತಿಸುವ ತಂತ್ರಜ್ಞಾನ ಬಳಸಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

ಅಕ್ಟೋಬರ್‌ 3ರಂದು ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮೂವರು ಮಹಿಳಾ ಪತ್ರಕರ್ತರು ದೆಹಲಿ ಪೊಲೀಸರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅನುಚಿತ ವರ್ತನೆಯ ಆರೋಪ ಮಾಡಿದ್ದು, ಈ ಕುರಿತು ಕ್ರೈಂ ಬ್ರಾಂಚ್‌ ತನಿಖೆಗೆ ವಹಿಸಲಾಗಿದೆ. ಪೊಲೀಸರು ತಮ್ಮ ಕ್ರಮ ಕಾನೂನುಬದ್ಧವಾಗಿತ್ತು ಎಂದು ಹೇಳಿದ್ದು, ಘಟನೆಗೆ ಸಂಬಂಧಿಸಿದ CCTV ಮತ್ತು ಇತರ ವಿಡಿಯೊಗಳನ್ನು ಪರಿಶೀಲಿಸಲಾಗುತ್ತಿದೆ.

ಈ ನಡುವೆ ಕೇರಳದಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರಿಗೆ ಸಂಬಂಧಿಸಿದ ಮತ್ತೊಂದು ಬೆಳವಣಿಗೆ ನಡೆದಿದೆ. 2006ರಲ್ಲಿ ನಡೆದಿದ್ದ ಕೆಎಸ್‌ಟಿಪಿ ಯೋಜನೆ ಹಾಗೂ ಅದಕ್ಕೆ ಸಂಬಂಧಿಸಿದ ಮಲೇಷ್ಯಾ ಮೂಲದ ಎಂಜಿನಿಯರ್‌ ಒಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಗೃಹ ಸಚಿವ ರಮೇಶ್‌ ಚೆನ್ನಿತ್ತಲಾ ವಿಜಿಲೆನ್ಸ್‌ ತನಿಖೆಗೆ ಆದೇಶಿಸಿದ್ದಾರೆ. ಆ ಸಂದರ್ಭದಲ್ಲಿ ಗ್ಯಾನೇಶ್‌ ಕುಮಾರ್‌ ಕೇರಳದ ಲೋಕೋಪಯೋಗಿ ಇಲಾಖೆಯ (PWD) ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಅಭಿಪ್ರಾಯದ ಹಿನ್ನೆಲೆಯಲ್ಲಿ ವಿಜಿಲೆನ್ಸ್‌ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಈ ವಿವಾದವು 2006ರಲ್ಲಿ ಜಾರಿಯಲ್ಲಿದ್ದ KSTP – Kerala State Transport Project ಗೆ ಸಂಬಂಧಿಸಿದ್ದಾಗಿದೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ತಿರುವನಂತಪುರದಿಂದ ಅಂಗಮಾಲಿವರೆಗಿನ ಎಂ.ಸಿ. ರಸ್ತೆ (MC Road) ಅಭಿವೃದ್ಧಿ ಕಾಮಗಾರಿಯನ್ನು ಮಲೇಷ್ಯಾ ಮೂಲದ ಕಂಪನಿಯೊಂದು ವಹಿಸಿಕೊಂಡಿತ್ತು. ಈ ಕಾಮಗಾರಿಯ ಪ್ರಾಜೆಕ್ಟ್ ಎಂಜಿನಿಯರ್ ಆಗಿದ್ದ ಮಲೇಷ್ಯಾ ದೇಶದ ಪ್ರಜೆ ‘ಲೀ ಸೀ ಬೀನ್’ (Lee See Been) ಅವರು 2006ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿಟ್ಟಿದ್ದ Suicide Notesಗಳಲ್ಲಿ ಅಂದಿನ ಪಿಡಬ್ಲ್ಯೂಡಿ ಕಾರ್ಯದರ್ಶಿ ಗ್ಯಾನೇಶ್ ಕುಮಾರ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ತೀವ್ರವಾದ ಆರೋಪಗಳನ್ನು ಮಾಡಿದ್ದರು ಎಂಬ ಗಂಭೀರ ಸಂಗತಿ ಈಗ ಮುನ್ನೆಲೆಗೆ ಬಂದಿದೆ.

ಆ ಸಮಯದಲ್ಲಿ ಈ ಕುರಿತು ಪ್ರಾಥಮಿಕ ತನಿಖೆ ಆರಂಭವಾಗಿದ್ದರೂ, ಗ್ಯಾನೇಶ್ ಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ನಿಯೋಜನೆಗೊಂಡು ಹೋದ ಬಳಿಕ ಆ ತನಿಖೆ ಅರ್ಧದಲ್ಲೇ ನಿಂತಿತ್ತು. ಆದರೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಹಾಗೂ ಕೆಪಿಸಿಸಿ ಮುಖಂಡರ ದೂರಿನ ಮೇರೆಗೆ, ಕೇರಳ ಗೃಹ ಸಚಿವ ರಮೇಶ್ ಚೆನ್ನಿಥಾಲ ಅವರು “ಸರ್ಕಾರವು ಮೂಕಪ್ರೇಕ್ಷಕನಾಗಿರಲು ಸಾಧ್ಯವಿಲ್ಲ” ಎಂದು ಹೇಳಿ, ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳಕ್ಕೆ (VACB) ಈ ಹಳೇ ಕಡತಗಳನ್ನು ಮರುಪರಿಶೀಲಿಸಿ ಪ್ರಾಥಮಿಕ ತನಿಖೆ ನಡೆಸಲು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡುವಂತಿರಬೇಕು: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ದೆಹಲಿಯ ಸಾರ್ವಜನಿಕ ಸ್ಥಳಗಳು ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಳಸುವಾಗ ಪ್ರತಿಯೊಬ್ಬ ಮಹಿಳೆಯೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...