ದೆಹಲಿಯಲ್ಲಿ ಭುಗಿಲೆದ್ದ ಆಕ್ರೋಶ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್,ಮೆಟ್ರೋ ನಿಲ್ದಾಣಗಳು ಬಂದ್

Date:

ದೆಹಲಿಯಲ್ಲಿ ಸಿಜೆಪಿ ಆಯೋಜಿಸಿರುವ ‘ಸಂಸತ್ ಚಲೋ’ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈಲ್ವೆ ಭವನ, ಶಾಸ್ತ್ರಿ ಭವನ ಹಾಗೂ ಕೃಷಿ ಭವನದ ಬಳಿ ಜಮಾಯಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹಾಗೂ ಆರ್‌ಪಿಎಫ್ ಸಿಬ್ಬಂದಿ ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಜನಪಥ್, ರಾಜೀವ್ ಚೌಕ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಸೇವಾ ತೀರ್ಥ ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ. ಪ್ರತಿಭಟನಾಕಾರರಿಗೆ ಶಬಾನಾ ಆಜ್ಮಿ, ಮನೋಜ್ ಝಾ, ಪ್ರಕಾಶ್ ರಾಜ್ ಸೇರಿದಂತೆ ಹಲವರು ನೀರು ವಿತರಿಸಿ ಬೆಂಬಲ ಸೂಚಿಸಿದರು.

- Advertisement -

ಶಾಂತಿಯುತ ಪ್ರತಿಭಟನೆಯ ಮೇಲೆ ಲಾಠಿಚಾರ್ಜ್ ಮಾಡಿರುವ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಸಂಸತ್ತು ಕೇವಲ ಮಸೂದೆಗಳನ್ನು ಅಂಗೀಕರಿಸುವ ರಬ್ಬರ್ ಸ್ಟ್ಯಾಂಪ್ ಅಲ್ಲ; ಬದಲಿಗೆ ಜನರ ಧ್ವನಿ ಮತ್ತು ಕಳವಳಗಳನ್ನು ಚರ್ಚಿಸುವ ವೇದಿಕೆಯಾಗಬೇಕು. ವಿಪಕ್ಷಗಳ ದನಿಯನ್ನು ಅಡಗಿಸುವುದು ಸರಿಯಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸಂಸತ್ ಮಾರ್ಗದಲ್ಲಿ ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ಇ.ಡಿ ಅಥವಾ ಸುಪ್ರೀಂ ಕೋರ್ಟ್ ಕಡೆಗೆ ಮೆರವಣಿಗೆ ನಡೆಸಬೇಕು ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದಾರೆ ಎಂದು ಆಪ್ ನಾಯಕ ಗೋಪಾಲ್ ರಾಯ್ ತಿಳಿಸಿದ್ದಾರೆ. “ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳುತ್ತಿದ್ದಾರೆ. ವಾಂಗ್‌ಚುಕ್ ಅವರ ಉಪವಾಸವನ್ನು ಬಲವಂತವಾಗಿ ಅಂತ್ಯಗೊಳಿಸಿದ ಸರ್ಕಾರದ ಕ್ರಮ ಜನರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ” ಎಂದರು. ಇದೇ ವೇಳೆ ವಿದ್ಯಾರ್ಥಿಗಳನ್ನು ಬೆಂಬಲಿಸಿದ ಫಾರೂಕ್ ಅಬ್ದುಲ್ಲಾ, ಸರ್ಕಾರವು ಲಡಾಖ್ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಆಸ್ಪತ್ರೆಯಿಂದ ವಾಂಗ್‌ಚುಕ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಭವಿಷ್ಯ ಮತ್ತು ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಪ್ರತಿಭಟನೆಯು ದೆಹಲಿಯ ಬೀದಿಗಳಲ್ಲಿ ಭಾರೀ ಉದ್ವಿಗ್ನತೆ ಸೃಷ್ಟಿಸಿದೆ. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಬಲವಂತವಾಗಿ ಹತ್ತಿಕ್ಕುವ ಸರ್ಕಾರದ ನಡೆಗೆ ರಾಷ್ಟ್ರಮಟ್ಟದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಸಂಸತ್ತಿನ ಕಲಾಪದಲ್ಲೂ ಈ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...