ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

Date:

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ ಬೆನ್ನಲ್ಲೇ, ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ ಎಂದು ಆರೋಪಿಸಿರುವ ಅವರು, ಶುಕ್ರವಾರ (ಅ.16) ನವದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

- Advertisement -

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ರಂಕಾ ಮತ್ತು ದಾಸ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದನ್ನು ದೀಪ್ಕೆ ಪ್ರಶ್ನಿಸಿದ್ದಾರೆ. “ದೇಶದಲ್ಲಿ ತ್ರಿವರ್ಣ ಧ್ವಜವನ್ನು ಹಿಡಿಯುವುದು ಈಗ ಅಪರಾಧವಾಗಿದೆಯೇ? ಅವರು ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜವನ್ನು ಮಾತ್ರ ಹಿಡಿದಿದ್ದರು. ಅದರಿಂದ ಶಾಂತಿಗೆ ಹೇಗೆ ಭಂಗ ಉಂಟಾಗುತ್ತದೆ? ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೆಂದಿದ್ದರೆ ಅಧಿಕೃತವಾಗಿ ಘೋಷಿಸಲಿ. ಆದರೆ, ಅಘೋಷಿತ ತುರ್ತು ಪರಿಸ್ಥಿತಿಯ ರೀತಿಯಲ್ಲಿ ಕ್ರಮ ಕೈಗೊಳ್ಳುವುದು ಏಕೆ ಎಂದು ಆಕ್ಷೇಪಿಸಿದ್ದಾರೆ. ಪ್ರತಿಭಟನಾಕಾರರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವುದನ್ನೂ ದೀಪ್ಕೆ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದೇ ವೇಳೆ, ಸಂಸತ್ತಿನತ್ತ ಕಾಂಗ್ರೆಸ್ ನಡೆಸುತ್ತಿರುವ ಮೆರವಣಿಗೆಗೆ ದೀಪ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮತ್ತು ತಮ್ಮ ಪಕ್ಷದ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಅವರು ಹೇಳಿದ್ದಾರೆ.

ಸಿಜೆಪಿಗೆ ವಿದೇಶಿ ಮೂಲಗಳಿಂದ ಹಣಕಾಸು ನೆರವು ದೊರೆಯುತ್ತಿದೆ ಎಂಬ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ದೀಪ್ಕೆ, ವಿದೇಶಿ ಹಣಕಾಸು ನೆರವಿನ ಕುರಿತು ತಮ್ಮ ಬಳಿ ಸಾಕ್ಷ್ಯಗಳಿದ್ದರೆ ಅವುಗಳನ್ನು ಸರ್ಕಾರಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಧ್ವಜಾರೋಹಣ: ರಾಷ್ಟ್ರಧ್ವಜ ಹಾರಿಸುವುದು ಅಪರಾಧವೇ – ಸಿಜೆಪಿ ನಾಯಕ ದೀಪ್ಕೆ ಪ್ರಶ್ನೆ

ದೆಹಲಿ ಪೊಲೀಸರು ಈ ತ್ರಿವರ್ಣ ಧ್ವಜ ಪ್ರತಿಭಟನೆಗೆ ಅನುಮತಿ ನೀಡುತ್ತಾರೋ ಅಥವಾ ಮುನ್ನೆಚ್ಚರಿಕೆ ಕ್ರಮವಾಗಿ ನಾಯಕರನ್ನು ತಡೆಯುತ್ತಾರೋ ಎಂಬುದು ಕುತೂಹಲಕಾರಿಯಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಜಾಮೀನು ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ಹೇಗೆ ಸಾಗಲಿದೆ ಹಾಗೂ ವಿದೇಶಿ ನಿಧಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಅಥವಾ ತನಿಖಾ ಸಂಸ್ಥೆಗಳು ಅಧಿಕೃತವಾಗಿ ತನಿಖೆ ಪ್ರಾರಂಭಿಸುತ್ತವೆಯೇ? ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ...

ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...