ಕಾಮಾಲೆ ಹರಡುವಿಕೆ ವಿರುದ್ಧ ಆಕ್ರೋಶ; ಕ್ಯಾಂಪಸ್‌ನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಕಾಲೇಜು ವಿದ್ಯಾರ್ಥಿಗಳು

Date:

ಕಳಪೆ ಗುಣಮಟ್ಟದ ಆಹಾರ ಮತ್ತು ಕಲುಷಿತ ನೀರಿನಿಂದಾಗಿ ಕಾಲೇಜು ಕ್ಯಾಂಪಸ್‌ನಲ್ಲಿ ಕಾಮಾಲೆ (ಜಾಂಡಿಸ್) ಹರಡುತ್ತಿದೆ ಎಂದು ಮಧ್ಯಪ್ರದೇಶದ ಸೆಹೋರ್‌ನಲ್ಲಿರುವ ವಿಐಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡಗಳ ಕಿಟಕಿಗಳಿಗೆ ಕಲ್ಲು ತೂರಾಟ ನಡೆಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ, ಕ್ಯಾಂಪಸ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ವಿದ್ಯಾರ್ಥಿಗಳ ಆಕ್ರೋಶದಿಂದಾಗಿ ಹಲವಾರು ಬಸ್‌ಗಳು, ಕಾರುಗಳು ಸುಟ್ಟುಹೋಗಿವೆ, ಆ್ಯಂಬುಲೆನ್ಸ್‌ಗೂ ಹಾನಿಯಾಗಿದೆ. ಕ್ಯಾಂಪಸ್‌ನ ಬಹುಭಾಗಗಳಿಗೆ ಹಾನಿಯಾಗಿದೆ. ಕ್ಯಾಂಪನ್‌ಗೆ ಸುಮಾರು 5 ಪೊಲೀಸ್ ಠಾಣೆಗಳ ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಶ್ವವಿದ್ಯಾಲಯ ಆಡಳಿತವು ನವೆಂಬರ್ 30ರವರೆಗೆ ರಜೆ ಘೋಷಿಸಿದೆ.

ಕಳಪೆ ಆಹಾರ ಮತ್ತು ಅಸುರಕ್ಷಿತ ಕುಡಿಯುವ ನೀರಿನಿಂದಾಗಿ ಕ್ಯಾಂಪಸ್‌ನ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಲವಾರು ವಿದ್ಯಾರ್ಥಿಗಳು ಕಾಮಾಲೆ ರೋಗದಿಂದ ಬಳಲುತ್ತಿದ್ದಾರೆ. ಕಲುಷಿತ ನೀರಿನಿಂದ ಕೆಲವು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಹಾಸ್ಟೆಲ್‌ಗಳಲ್ಲಿನ ಸಮಸ್ಯೆಗಳ ಬಗ್ಗೆ ಹಾಸ್ಟೆಲ್‌ ವಾರ್ಡನ್‌ಗಳು ಮತ್ತು ಭದ್ರತಾ ಸಿಬ್ಬಂದಿಗಳ ಕೆಲವು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ. ಆದರೆ, ಆ ವಿದ್ಯಾರ್ಥಿಗಳ ಮೇಲೆಯೇ ವಾರ್ಡನ್‌ ಮತ್ತು ಸಿಬ್ಬಂದಿಗಳು ಹಲ್ಲೆ ನಡೆಸಿದ್ದು, ಮೌನವಾಗಿರುವಂತೆ ಬೆದರಿಕೆ ಹಾಕಿದ್ದಾರೆ. ವಿಶ್ವವಿದ್ಯಾಲಯದ ಆಡಳಿತದೊಂದಿಗೆ ಮಾತನಾಡಲು ಯತ್ನಿಸಿದರೂ, ಆಡಳಿತವು ಸರಿಯಾಗಿ ಸ್ಪಂದಿಸಿಲ್ಲವೆಂದು ಆಕ್ರೋಶಿತ ವಿದ್ಯಾರ್ಥಿಗಳು ದೂರಿದ್ದಾರೆ.

ವಾರ್ಡನ್‌ಗಳು ಮತ್ತು ಆಡಳಿತದ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಸುಮಾರು ಸುಮಾರು 4,000 ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯು ಕಲ್ಲು ತೂರಾಟಕ್ಕೆ ತಿರುಗಿದೆ.

ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಅಷ್ಟಾದ ಎಸ್‌ಡಿಎಂ ನಿತಿನ್ ಟೇಲ್ ಅವರು ಆಹಾರ ಮತ್ತು ನೀರಿನ ಸಮಸ್ಯೆಗಳು ಇರುವುದು ಸತ್ಯವೆಂದು ಹೇಳಿದ್ದಾರೆ. ಆದರೆ, ಸಮಸ್ಯೆಗಳಿಂದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

“ವಿದ್ಯಾರ್ಥಿಗಳಿಗೆ ಆಹಾರ ಮತ್ತು ನೀರಿನ ಸಮಸ್ಯೆಗಳಿದ್ದವು. ಕಳಪೆ ಗುಣಮಟ್ಟ ಕುರಿತು ದೂರುಗಳು ಬಂದಿದ್ದು, ಅವುಗಳು ಬಗೆರಿಯದೇ ಇರುವುದು ಪ್ರತಿಭಟನೆಗೆ ಕಾರಣವಾಗದೆ. ಕಾಮಾಲೆಯಿಂದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿವೆ. ಆದರೆ ಇದು ನಿಜವಲ್ಲ. ಸಮಸ್ಯೆಗಳನ್ನು ಪರಿಹರಿಸಲು ನೀರು ಮತ್ತು ಆಹಾರ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...