ಸಿಜೆಪಿ ಪ್ರತಿಭಟನೆ ವರದಿಗಾರಿಕೆ ವೇಳೆಯೇ 12ಕ್ಕೂ ಅಧಿಕ ಪತ್ರಕರ್ತರ ಬಂಧನ; ಪೊಲೀಸರ ವಿರುದ್ಧ ತೀವ್ರ ಆಕ್ರೋಶ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ 12ಕ್ಕೂ ಅಧಿಕ ಪತ್ರಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರೆಸ್ ಗುರುತಿನ ಚೀಟಿ ಇದ್ದರೂ ಸಹ ಪೊಲೀಸರು ಪತ್ರಕರ್ತರನ್ನು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದಿದ್ದಾರೆ.

- Advertisement -

ಪ್ರತಿಭಟನೆ ನಡೆಯುತ್ತಿದ್ದ ಜಂತರ್ ಮಂತರ್ ಮತ್ತು ಸೆಂಟ್ರಲ್ ದೆಹಲಿ ಭಾಗಗಳಲ್ಲಿ ವರದಿಗಾರಿಕೆ ಮಾಡುತ್ತಿದ್ದ ರಾಷ್ಟ್ರೀಯ ದಿನಪತ್ರಿಕೆಗಳು, ಪ್ರಮುಖ ಡಿಜಿಟಲ್ ಮಾಧ್ಯಮ ಸಂಸ್ಥೆಗಳ ವರದಿಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಪೈಕಿ ನವಭಾರತ್ ಟೈಮ್ಸ್, ಹಿಂದೂಸ್ತಾನ್, ಸ್ಕ್ರೋಲ್, ನ್ಯೂಸ್‌ಲಾಂಡ್ರಿ ಮತ್ತು ಇಂಡಿಯಾ ಟುಡೇ ಸಂಸ್ಥೆಯ ವರದಿಗಾರರು ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ತಮ್ಮ ಗುರುತಿನ ಚೀಟಿಗಳನ್ನು ತೋರಿಸಿ ‘ನಾವು ಪತ್ರಕರ್ತರು’ ಎಂದು ಸ್ಪಷ್ಟಪಡಿಸಿದರೂ ಪೊಲೀಸರು ದುರ್ವರ್ತನೆ ತೋರಿ, ಬಲವಂತವಾಗಿ ಕರೆದೊಯ್ದರು ಎಂದು ಕೆಲ ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ಘಟನೆ ನಡೆದ ಕೆಲ ಗಂಟೆಗಳ ನಂತರ ವಶಕ್ಕೆ ಪಡೆಯಲಾಗಿದ್ದ ಪತ್ರಕರ್ತರನ್ನು ಬಿಡುಗಡೆ ಮಾಡಲಾಗಿದೆ.

ನೆಟ್ಟಿಗರು ದೆಹಲಿ ಪೊಲೀಸರ ಈ ನಡವಳಿಕೆಯನ್ನು ಖಂಡಿಸಿದ್ದು, ಮಾಧ್ಯಮಗಳ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪ್ರೆಸ್ ಕಾರ್ಡ್ ತೋರಿಸಿದರೂ ಬಂಧಿಸಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಂಧನಕ್ಕೊಳಗಾದ ಪತ್ರಕರ್ತರು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು (ಉದಾಹರಣೆಗೆ ಕಾವ್ಯಾ ಕರ್ನಾಟಕ್, ಹರ್ಷ ಯಾದವ್ ಮತ್ತಿತರರು) ಪೊಲೀಸರು ತಮ್ಮನ್ನು ಕಾರು, ಕ್ಯಾಬ್‌ಗಳಿಂದ ಎಳೆದು ಬಸ್‌ಗೆ ತಳ್ಳಿದ ವೀಡಿಯೋಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿದ್ದು, “ಮಾಧ್ಯಮಗಳಿಗೆ ರಕ್ಷಣೆ ಎಲ್ಲಿದೆ?” ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಹಲವು ಎಕ್ಸ್ (X) ಬಳಕೆದಾರರು ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರು ಈ ಸ್ಥಿತಿಯನ್ನು ತುರ್ತು ಪರಿಸ್ಥಿತಿಗೆ ಹೋಲಿಸಿದ್ದಾರೆ. ಶಾಂತಿಯುತವಾಗಿ ವರದಿಗಾರಿಕೆ ಮಾಡುತ್ತಿದ್ದವರನ್ನು ಅಪರಾಧಿಗಳಂತೆ ನೋಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ #PressFreedom, #DelhiPolice, #JournalistsDetained ಹಾಗೂ #FreeThePress ನಂತಹ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿದ್ದು, ಬಂಧಿತ ಪತ್ರಕರ್ತರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಲು, ಪೊಲೀಸರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...