ರಾಮಮಂದಿರ | ಸಂಬಳ ಕಡಿತ, ಕೆಲಸದ ಅವಧಿ ಹೆಚ್ಚಳ; ಉದ್ಯೋಗ ತೊರೆದ 23 ನಗದು ಎಣಿಕೆ ನೌಕರರು

Date:

ಅಯೋಧ್ಯೆ ರಾಮಮಂದಿರದ ನಿರ್ವಹಣೆ ಮಾಡುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ನಗದು ಎಣಿಕೆ ಕಾರ್ಯದಲ್ಲಿ ತೊಡಗಿದ್ದ 23 ಉದ್ಯೋಗಿಗಳು ತಮ್ಮ ಕೆಲಸದ ಅವಧಿ ಹೆಚ್ಚಳ ಮತ್ತು ಸಂಬಳ ಕಡಿತವನ್ನು ವಿರೋಧಿಸಿ ಸಾಮೂಹಿಕವಾಗಿ ಉದ್ಯೋಗ ತೊರೆದಿದ್ದಾರೆ.

- Advertisement -

ರಾಮ ಮಂದಿರಕ್ಕೆ ಭಕ್ತರು ನೀಡುವ ನಗದು ಕಾಣಿಕೆಯನ್ನು ಎಣಿಕೆ ಮಾಡಲು ಒಟ್ಟು 36 ಉದ್ಯೋಗಿಗಳನ್ನು ನಿಯೋಜಿಸಲಾಗಿತ್ತು. ಆದರೆ ಮ್ಯಾನೇಜ್‌ಮೆಂಟ್ ನಿಯಮಗಳಲ್ಲಿ ತಂದ ಬದಲಾವಣೆಯಿಂದ ಬೇಸತ್ತ 23 ನೌಕರರು ಗುರುವಾರ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ರೂಪದಲ್ಲಿ ರಾಜೀನಾಮೆ ನೀಡಿದ್ದಾರೆ. ಸದ್ಯ ಕೇವಲ 13 ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ರಾಮಮಂದಿರ ಲೂಟಿ: ಆರೋಪಿಗಳ ಪರ ವಾದಿಸದಿರಲು ಅಯೋಧ್ಯೆಯ ವಕೀಲರ ನಿರ್ಧಾರ

ಈ ಹಿಂದೆ ಪ್ರತಿಯೊಬ್ಬ ನೌಕರನಿಗೆ ತಿಂಗಳಿಗೆ 14,755 ರೂ. ವೇತನ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಜಾರಿಗೆ ತಂದ ಹೊಸ ವ್ಯವಸ್ಥೆಯಿಂದಾಗಿ ಕೆಲವರಿಗೆ ಮಾತ್ರ ಹೆಚ್ಚಿನ ಹಣ ಸಿಗುತ್ತಿದ್ದು, ಉಳಿದವರ ವೇತನದಲ್ಲಿ ಕಡಿತವಾಗಿದೆ. ಇದರೊಂದಿಗೆ ಉದ್ಯೋಗಿಗಳಿಗೆ ಸಿಗುತ್ತಿದ್ದ ರಜೆಗಳ ಸಂಖ್ಯೆಯನ್ನು ಕಡಿತಗೊಳಿಸಲಾಗಿದೆ. ಕೆಲಸದ ಅವಧಿಯನ್ನೂ ಬದಲಾಯಿಸಲಾಗಿದೆ.

ಈ ಹೊಸ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೇ ಪದ್ಧತಿಯನ್ನೇ ಮುಂದುವರಿಸಬೇಕೆಂಬ ನೌಕರರ ಬೇಡಿಕೆಯನ್ನು ಮ್ಯಾನೇಜ್‌ಮೆಂಟ್ ತಿರಸ್ಕರಿಸಿದ ಬೆನ್ನಲ್ಲೇ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮತ್ತೊಂದೆಡೆ, ಈ ಘಟನೆಗೆ ಬೇರೆಯದೇ ಆಯಾಮವಿದೆ ಎಂದೂ ಕೆಲವು ವರದಿಗಳು ಹೇಳುತ್ತಿವೆ. ನಗದು ಎಣಿಕೆ ಕಾರ್ಯದಲ್ಲಿದ್ದ ಹಲವು ಸಿಬ್ಬಂದಿಯನ್ನು ಈ ಹಿಂದೆ ಹೌಸ್ ಕೀಪಿಂಗ್ (ಸ್ವಚ್ಛತಾ) ವಿಭಾಗದಿಂದ ಇಲ್ಲಿಗೆ ವರ್ಗಾಯಿಸಲಾಗಿತ್ತು. ಆದರೆ ಇತ್ತೀಚೆಗೆ ಕಾಣಿಕೆ ಹಣದಲ್ಲಿ ‘ದುರುಪಯೋಗ’ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಮ್ಯಾನೇಜ್‌ಮೆಂಟ್ ಇವರನ್ನು ಮರಳಿ ಹೌಸ್ ಕೀಪಿಂಗ್ ವಿಭಾಗಕ್ಕೇ ಕಳುಹಿಸಲು ತೀರ್ಮಾನಿಸಿತ್ತು. ಆದರೆ ಅಲ್ಲಿಗೆ ಮರಳಲು ಇಷ್ಟಪಡದ ನೌಕರರು ರಾಜೀನಾಮೆ ನೀಡುವ ಹಾದಿ ಹಿಡಿದಿದ್ದಾರೆ ಎನ್ನಲಾಗಿದೆ.

ಈಗಾಗಲೇ ರಾಮಮಂದಿರ ದೇಣಿಗೆ ಲೂಟಿ ಪ್ರಕರಣದಿಂದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶವಿದೆ. ಈಗ ನೌಕರರು ಸಾಮೂಹಿಕ ರಾಜೀನಾಮೆ ನೀಡಿರುವುದು ಮಂದಿರದ ಕಾಣಿಕೆ ಎಣಿಕೆ ಪ್ರಕ್ರಿಯೆಗೆ ತಾತ್ಕಾಲಿಕ ಅಡಚಣೆ ಉಂಟಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...