ಸಿಕ್ಕಿಂ | ಭಾರೀ ಮಳೆಯಿಂದ ಭೂಕುಸಿತ; 2,400 ಪ್ರವಾಸಿಗರ ರಕ್ಷಣೆ

Date:

  • ಸಿಕ್ಕಿಂ ರಾಜ್ಯದ ಲಾಚೆನ್‌, ಲಾಚುಂಗ್‌ ಪ್ರದೇಶದಲ್ಲಿ ಭೂಕುಸಿತ
  • ಪ್ರವಾಸಿಗರಲ್ಲಿ 60 ಮಂದಿ ನಾಮ್ಚಿ ಕಾಲೇಜು ವಿದ್ಯಾರ್ಥಿಗಳು

ಸಿಕ್ಕಿಂ ರಾಜ್ಯದ ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಸಿಕ್ಕಿಹಾಕಿಕೊಂಡಿದ್ದ 2,464 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ (ಜೂನ್ 18) ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಶನಿವಾರ ಹಠಾತ್ತನೆ ಸುರಿದ ಮಳೆಯಿಂದಾಗಿ ಲಾಚೆನ್ ಮತ್ತು ಲಾಚುಂಗ್ ಪ್ರದೇಶದಲ್ಲಿ ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಭಾರೀ ಮಳೆಯಿಂದ ಪೆಗಾಂಗ್-ಚುಂಗ್ತಾಂಗ್ನಲ್ಲಿ ಭೂಕುಸಿತದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಹಾನಿಗೊಳಗಾದ ರಸ್ತೆಯನ್ನು ಸರಿಪಡಿಸುವ ಕಾರ್ಯ ಭರದಿಂದ ಸಾಗಿದ್ದು ಹವಾಮಾನ ವೈಪರೀತ್ಯದ ಹಿನ್ನೆಲೆ ಈ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ ಎಂದು ಉತ್ತರ ಸಿಕ್ಕಿಂ ಜಿಲ್ಲಾಧಿಕಾರಿ ಹೇಮ್ ಕುಮಾರ್ ಚೆಟ್ರಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜನರಲ್ ರಿಸರ್ವ್ ಎಂಜಿನಿಯರ್ ಫೋರ್ಸ್ (ಜಿಆಇಎಫ್), ಚುಂಗ್ತಾಂಗ್ ಉಪವಿಭಾಗೀಯ ಅಧಿಕಾರಿಗಳು, ಸೇನೆಯ ಅಧಿಕಾರಿಗಳು ಮತ್ತು ಪಂಚಾಯತ್‌ನ ಸ್ಥಳೀಯ ಸದಸ್ಯರು ಮೂರು ದಿನಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 2,464 ಪ್ರವಾಸಿಗರನ್ನು ರಕ್ಷಿಸಲಾಗಿದೆ.

ರಾಜ್ಯ ಸರ್ಕಾರದ ವಾಹನಗಳಲ್ಲಿ ಅವರನ್ನು ರಾಜಧಾನಿ ಗ್ಯಾಂಗ್ಟಕ್‌ಗೆ ಕರೆತರಲಾಗಿದೆ. ಪ್ರವಾಸಿಗರಿಗೆ ಬೇಕಾದ ತುರ್ತು ವೈದ್ಯಕೀಯ ನೆರವನ್ನು ಒದಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ | ಅತಿಕ್ರಮಣ ವಿರೋಧಿ ಕಾರ್ಯಾಚರಣೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ: ಒಬ್ಬ ಸಾವು

ಪ್ರವಾಸಿಗರಲ್ಲಿ 60 ಮಂದಿ ನಾಮ್ಚಿ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

“ಸಿಕ್ಕಿಂ ರಾಜ್ಯದಲ್ಲಿ ಮಳೆ, ಭೂಕುಸಿತದಿಂದ ಹಾನಿಯಾಗಿರುವ ರಸ್ತೆಗಳನ್ನು ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ. ಬಳಿಕ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗುವುದು” ಎಂದು ಹೇಮ್ ಕುಮಾರ್ ತಿಳಿಸಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...