ವಿಷಾಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Date:

ವಿಷಪೂರಿತ ಆಹಾರ ಸೇವಿಸಿದ ನಂತರ 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ(ಎಎಂಯು) ನಡೆದಿದೆ.

- Advertisement -

ವಿವಿಯಲ್ಲಿ ಮಂಗಳವಾರ(ಅಕ್ಟೋಬರ್ 18) ರಾತ್ರಿ ಎಎಂಯು ಸಂಸ್ಥಾಪಕ ಸರ್ ಸೈಯದ್ ಅಹಮದ್‌ ಖಾನ್ ದಿನದ ಪ್ರಯುಕ್ತ ಬೇಗಂ ಅಝೀಝನ್ ನಿಸಾ ಹಾಲ್‌ನಲ್ಲಿ ವಿಶೇಷ ಭೋಜನವನ್ನು ಏರ್ಪಡಿಸಲಾಗಿತ್ತು. ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥರಾದರು. ವಿದ್ಯಾರ್ಥಿನಿಯರನ್ನು ಅಲಿಗಢ  ಜೆಎನ್ ವೈದ್ಯಕೀಯ ಕಾಲೇಜು ಮತ್ತು ಎಎಂಯು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ಕಾರಣವಾದ ಘಟನೆಯ ಬಗ್ಗೆ ತನಿಖೆ ನಡೆಸಲು ತ್ರಿಸದಸ್ಯ ಸಮಿತಿಗೆ ಸೂಚಿಸಲಾಗಿದೆ ಎಂದು ವಿವಿಯ ಅಧಿಕಾರಿ ಮೊಹಮ್ಮದ್ ವಾಸಿಂ ಅಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಕಲಿ ಜನನ ಪ್ರಮಾಣಪತ್ರ ಪ್ರಕರಣ: ಎಸ್ಪಿ ನಾಯಕ ಆಜಂ ಖಾನ್, ಪತ್ನಿ, ಪುತ್ರಗೆ 7 ವರ್ಷ ಜೈಲು

“ಎಎಂಯು ಸಂಸ್ಥಾಪಕರ ಜನ್ಮದಿನದ ಪ್ರಯುಕ್ತ ಮಂಗಳವಾರ ರಾತ್ರಿ ವಿವಿಯ ಬೇಗಂ ಅಝೀಝನ್ ನಿಸಾ ಕೊಠಡಿಯಲ್ಲಿ ತಂಗಿರುವ ಬಾಲಕಿಯರಿಗಾಗಿ ವಿಶೇಷ ಭೋಜನವನ್ನು ಆಯೋಜಿಸಲಾಗಿತ್ತು. ಈ ವಸತಿ ಕೊಠಡಿಯಲ್ಲಿ 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಹಾರ ಸೇವಿಸಿದ ನಂತರ ಹೊಟ್ಟೆನೋವು ಮತ್ತು ವಾಂತಿಯಾಗಿರುವ ಬಗ್ಗೆ ದೂರು ನೀಡಿದ್ದಾರೆ” ಎಂದು ಎಎಂಯು ಅಧಿಕಾರಿ ತಿಳಿಸಿದ್ದಾರೆ.

“ವಿದ್ಯಾರ್ಥಿನಿಯರನ್ನು ಅಲಿಘಢದ ಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ ವಿಪರೀತ ಅಸ್ವಸ್ಥರಾದವರನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಯಿತು” ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೇಗಂ ಅಝೀಝನ್ ನಿಸಾ ಹಾಲ್ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿ ನಿಲಯವಾಗಿದ್ದು, ಈ ವಿದ್ಯಾರ್ಥಿ ನಿಲಯದಲ್ಲಿ ಸುಮಾರು 1,500 ವಿದ್ಯಾರ್ಥಿಗಳಿಗೆ ವಾಸ್ತವ್ಯ ಕಲ್ಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...