30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ: ಕೇಂದ್ರ ಸರ್ಕಾರ

Date:

ದೇಶದಲ್ಲಿ ಸುಮಾರು 30,000ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಬುಧವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವೆ ಸಾವಿತ್ರಿ ಠಾಕೂರ್ ಈ ಮಾಹಿತಿ ನೀಡಿದ್ದಾರೆ.

- Advertisement -

ಮಕ್ಕಳ ದತ್ತು ಸಂಪನ್ಮೂಲ ಮಾಹಿತಿ ಮತ್ತು ಮಾರ್ಗದರ್ಶನ ವ್ಯವಸ್ಥೆ (CARINGS) ಪೋರ್ಟಲ್‌ನ ದತ್ತಾಂಶದ ಪ್ರಕಾರ, 32,856 ಭಾರತೀಯ ಪೋಷಕರು ಮತ್ತು 859 ವಿದೇಶಿ ಪೋಷಕರು ದತ್ತು ಸ್ವೀಕಾರಕ್ಕಾಗಿ ಕಾಯುತ್ತಿದ್ದಾರೆ ಎಂದು ಸಚಿವೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಗುಜರಾತ್‌ | ʻನನ್ನ ಪತ್ನಿ ಗರ್ಭಿಣಿʼ ಎಂದ ಅತ್ಯಾಚಾರ ಆರೋಪಿ; ಹೈಕೋರ್ಟ್‌ ಸಂಧಾನ ವಿಫಲ

ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳ ಸುರಕ್ಷತೆ, ಭದ್ರತೆ, ಘನತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ. ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ಅಡಿಯಲ್ಲಿ ಈ ದತ್ತು ಪ್ರಕ್ರಿಯೆ ನಡೆಯುತ್ತದೆ.

ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಜ್ಯ ದತ್ತು ಸ್ವೀಕಾರ ಸಂಪನ್ಮೂಲ ಸಂಸ್ಥೆಗಳು, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಂತಹ ಸಂಸ್ಥೆಗಳ ಮೂಲಕ ಈ ಪ್ರಕ್ರಿಯೆ ನಡೆಸುತ್ತಾರೆ.

ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ತಿದ್ದುಪಡಿ ನಿಯಮಗಳು, 2022 ದತ್ತು ಸಂಬಂಧಿತ ವಿಷಯಗಳಲ್ಲಿ ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿದೆ. ಪ್ರಸ್ತುತ ಪೋರ್ಟಲ್ ಪ್ರಕಾರ ದೇಶದಲ್ಲಿ ಕೇವಲ 22 ದತ್ತು ಆದೇಶಗಳು ಬಾಕಿ ಉಳಿದಿವೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉಗಾಂಡ ಮಗು ದತ್ತು | ಭಾರತೀಯ ದಂಪತಿಗೆ ಮಾನ್ಯತೆ ನೀಡಲು ಹೈಕೋರ್ಟ್‌ ಸೂಚನೆ

ದತ್ತು ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಯುತ್ತದೆ. ಎಲ್ಲಾ ಮಾಹಿತಿ ಪೋರ್ಟಲ್‌ನಲ್ಲಿ ಪಾರದರ್ಶಕವಾಗಿದೆ. ಪೋರ್ಟಲ್‌ನಲ್ಲಿ ಅಕ್ರಮ ದತ್ತು ನೋಂದಾವಣೆಗೆ ಯಾವುದೇ ಅವಕಾಶ ಇಲ್ಲ ಎಂದಿದ್ದಾರೆ.

2024-25ರ ಆರ್ಥಿಕ ವರ್ಷದಲ್ಲಿ 4,515 ದತ್ತು ದಾಖಲಾಗಿದೆ. ಭಾರತವು ಮಕ್ಕಳ ದತ್ತು ಸ್ವೀಕಾರದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಕಳೆದ 12 ವರ್ಷಗಳಲ್ಲಿ ಇದು ಅತ್ಯಧಿಕ ಅಂಕಿ ಅಂಶವಾಗಿದೆ. ಒಟ್ಟು ದತ್ತು ಸ್ವೀಕಾರಗಳಲ್ಲಿ 3,950 ದೇಶೀಯವಾಗಿದ್ದರೆ, 565 ಅಂತಾರಾಷ್ಟ್ರೀಯವಾಗಿವೆ ಎಂದು ಸಚಿವಾಲಯ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...