ಅಸ್ಸಾಂ| ಮನೆಯ ಬಾತ್‌ರೂಮ್‌ನಲ್ಲಿತ್ತು 35 ಹಾವುಗಳು; ವಿಡಿಯೋ ವೈರಲ್

Date:

ಅಸ್ಸಾಂನಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯೊಂದರ ಬಾತ್‌ರೂಮ್‌ನಲ್ಲಿ ಬರೋಬ್ಬರಿ 35 ಹಾವುಗಳು ಪತ್ತೆಯಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಈ ವಿಡಿಯೋವನ್ನು ಹಂಚಿಕೊಂಡಿದ್ದು, ದೊಡ್ಡ ಬಂಡೆಯಿಂದ ಹೊರಕ್ಕೆ ಹಲವಾರು ಹಾವುಗಳು ಬರುತ್ತಿರುವುದು ಕಂಡು ಬಂದಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಹಾವುಗಳನ್ನು ಬಕೆಟ್‌ನಲ್ಲಿ ಹಾಕಿಟ್ಟಿರುವುದು ಕಂಡು ಬಂದಿದೆ.

ಇದನ್ನು ಓದಿದ್ದೀರಾ?  ಹಾವುಗಳು ನುಗ್ಗುತ್ತಿವೆ ಎಚ್ಚರ; ಕೊಲ್ಲಬೇಡಿ ಕಾಲ್‌ ಮಾಡಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಸ್ಸಾಂನ ನಾಗಾಂವ್ ಜಿಲ್ಲೆಯ ಕಲಿಯಾಬೋರ್ ಪ್ರದೇಶದ ಮನೆಯೊಂದರಲ್ಲಿ ಸುಮಾರು 35 ಹಾವುಗಳು ಕಂಡುಬಂದಿದೆ. ಪ್ರಾಣಿ ಪ್ರೇಮಿ ಸಂಜಿಬ್ ದೇಕಾ ಅವರು ಹಾವುಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜಿಬ್ ದೇಕಾ, “ಮನೆಯ ಮಾಲೀಕರು ಹಾವು ಇರುವ ಬಗ್ಗೆ ನನಗೆ ಮಾಹಿತಿ ನೀಡಿದ್ದು ನಾನು ಸ್ಥಳಕ್ಕೆ ತಲುಪಿದೆ. ಸ್ಥಳದಲ್ಲಿ ಹಲವಾರು ಹಾವುಗಳು ಹರಿದಾಡುತ್ತಿರುವುದನ್ನು ನಾನು ನೋಡಿದೆ. ಹೊಸದಾಗಿ ನಿರ್ಮಿಸಿದ ಮನೆಯ ಶೌಚಾಲಯದಲ್ಲಿ ಸುಮಾರು 35 ಹಾವುಗಳು ತೆವಳುತ್ತಿದ್ದವು. ನಾನು ಅಲ್ಲಿಂದ ಹಾವುಗಳನ್ನು ರಕ್ಷಿಸಿ ಜೋಯಿಸಗರ್ ದಲಾನಿ ಪ್ರದೇಶದಲ್ಲಿ ಹಾವುಗಳನ್ನು ಬಿಡುಗಡೆ ಮಾಡಿದೆ” ಎಂದು ಮಾಹಿತಿ ನೀಡಿದರು.

ಎಕ್ಸ್‌ನಲ್ಲಿ ಎಎನ್‌ಐ ಪೋಸ್ಟ್ ಮಾಡಿದ ಈ ವಿಡಿಯೋಗೆ 108.4 ಸಾವಿರ ವೀಕ್ಷಣೆಗಳು ಕಂಡು ಬಂದಿದೆ. “ಇದು ಶೌಚಾಲಯ ನಿರ್ಮಾಣಕ್ಕೆ ಉತ್ತಮ ಸ್ಥಳವಲ್ಲ, ಮತ್ತೆ ಇದೇ ಸ್ಥಳಕ್ಕೆ ಹಾವುಗಳು ಬರಬಹುದು” ಎಂದು ಬಳಕೆದಾರರೊಬ್ಬರು ಅಭಿಪ್ರಾಯಿಸಿದ್ದಾರೆ. ಇನ್ನೋರ್ವ ನೆಟ್ಟಿಗರು “ನನ್ನ ಮನೆಯಲ್ಲಿ ಇಷ್ಟೊಂದು ಹಾವುಗಳನ್ನು ನೋಡಿದರೆ ನಾನು ಖಂಡಿತವಾಗಿಯೂ ಸತ್ತು ಹೋಗುತ್ತೇನಷ್ಟೆ” ಎಂದು ಮತ್ತೋರ್ವ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಮಳೆ ಆರಂಭವಾಗುತ್ತಿದ್ದಂತೆ ಬೆಂಗಳೂರಿನ ಜನ ವಸತಿ ಪ್ರದೇಶಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಬಿಬಿಎಂಪಿ ಜನರಿಗೆ ಮನವಿ ಮಾಡಿದೆ. ಯಲಹಂಕ, ಕಲ್ಯಾಣ ನಗರ, ಎಚ್.ಬಿ.ಆರ್. ಲೇಔಟ್, ಮಾರತ್ತಹಳ್ಳಿ, ನಾಗರಭಾವಿ, ಬನಶಂಕರಿ ಸೇರಿ ಕೆಲವು ಪ್ರದೇಶಗಳಲ್ಲಿ ವಿವಿಧ ಜಾತಿಯ ಹಾವುಗಳು ಪತ್ತೆ ಆಗಿದ್ದು, ಬಿಬಿಎಂಪಿ ಸಹಾಯವಾಣಿಗೆ ನಿತ್ಯವೂ ಹತ್ತಾರು ಕರೆಗಳು ಬರುತ್ತಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ತಡೆ: ‘ಸರ್ವಾಧಿಕಾರ’ ಹೆಚ್ಚುತ್ತಿದೆ ಎಂದ ಪತ್ನಿ ಸುನಿತಾ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ...

ನೀರಿನ ಬಿಕ್ಕಟ್ಟು| ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ದೆಹಲಿ ಸಚಿವೆ ಅತಿಶಿ

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟು ಉಂಟಾಗಿದ್ದು, ದೆಹಲಿ ಸರ್ಕಾರದ ಸಚಿವೆ, ಎಎಪಿ...

ಉತ್ತರ ಪ್ರದೇಶ | ಚಪ್ಪಲಿ ಹಾರ ಹಾಕಿ ದಲಿತ ವೃದ್ಧನ ಮೆರವಣಿಗೆ; ಐವರ ಬಂಧನ

ಉತ್ತರ ಪ್ರದೇಶದ ಕೌಶಾಂಬಿಯ ಬಿರ್ನರ್ ಗ್ರಾಮದಲ್ಲಿ ಪ್ರಬಲ ಜಾತಿಯ ದುರುಳರು 62...

ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್‌ಸಿಪಿಯನ್ನು ದೂಷಿಸಿದ ಶಿಂದೆ ಬಣದ ನಾಯಕ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ...