ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

Date:

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಿಜೆಪಿ, ಇಂಡಿಯಾ ಒಕ್ಕೂಟ, ಇತರೆ ವಿಪಕ್ಷಗಳು ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಅನುಮತಿ ನೀಡದ ದೆಹಲಿ ಪೊಲೀಸರು ಸುಮಾರು 500ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಈ ನಡುವೆ “ಗ್ಯಾನೇಶ್ ಕುಮಾರ್ ಬಂಧನವಾಗಲಿ” ಎಂದು ವಿಪಕ್ಷ ನಾಯಕರುಗಳು ಆಗ್ರಹಿಸಿದ್ದಾರೆ.

- Advertisement -

ಚುನಾವಣಾ ಆಯೋಗದ ವಿರುದ್ಧ ಜಂತರ್ ಮಂತರ್ ಬಳಿ ಸಿಪಿಐ(ಎಂ), ಎಸ್ಎಫ್‌ಐ ಮತ್ತು ಡಿವೈಎಫ್‌ಐ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಪಾಲ್ಗೊಂಡರು. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ವಿಚಾರದಲ್ಲಿ ಗ್ಯಾನೇಶ್ ಕುಮಾರ್ ಅವರ ಬಂಧನವಾಗಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇದನ್ನೂ ಓದಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಇನ್ನು ಆರ್‌ಜೆಡಿ ಸಂಸದ ಮನೋಜ್ ಝಾ, ತಾವು ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದು, ‘ಪ್ರತಿಭಟನೆಗೆ ಅನುಮತಿ ಬೇಕೇ?’ ಎಂದು ಪ್ರಶ್ನಿಸಿದ್ದಾರೆ. ಸಿಇಸಿ ಗ್ಯಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ತಪ್ಪುಗಳನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದರು.

ಇನ್ನು ಎನ್‌ಸಿಪಿ-ಎಸ್‌ಪಿ (NCP-SP) ಸಂಸದೆ ಸುಪ್ರಿಯಾ ಸುಳೆ ಮಾತನಾಡಿ, “ವಿವಿಧ ವಿಷಯಗಳಿಗಾಗಿ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಇರುವುದು ಅತ್ಯಂತ ದುರದೃಷ್ಟಕರ. ಮತ ಕಳ್ಳತನದ ಆರೋಪ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ವಿರೋಧ ಪಕ್ಷವು ತನ್ನ ಹೋರಾಟವನ್ನು ಮುಂದುವರಿಸಲಿದೆ” ಎಂದು ತಿಳಿಸಿದರು.

ಇನ್ನು ಪ್ರತಿಭಟನೆ ವೇಳೆ ಎಎಪಿ ನಾಯಕರಾದ ಸೌರಭ್ ಭಾರದ್ವಾಜ್, ಸಂಜೀವ್ ಝಾ, ಆತಿಶಿ ಮತ್ತು ಸಂಜಯ್ ಸಿಂಗ್, ಎಸ್‌ಎಫ್‌ಐ, ಎಐಎಸ್‌ಎ, ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಗಳ ನಾಯಕರು, ಸೇರಿದಂತೆ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...