ಮಣಿಪುರ ಹಿಂಸಾಚಾರ: 2023ರಿಂದ ಈವರೆಗೆ 58,800ಕ್ಕೂ ಅಧಿಕ ಮಂದಿ ಸ್ಥಳಾಂತರ

Date:

2023ರ ಮೇ ತಿಂಗಳಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದೆ. ಅಲ್ಲಿಂದ ಮಾರ್ಚ್ 30ರವರೆಗೆ ಮಣಿಪುರದಲ್ಲಿ ಒಟ್ಟು 58,821 ಮಂದಿ ಸ್ಥಳಾಂತರಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

- Advertisement -

ಈ ಸಂಬಂಧ ಮಣಿಪುರ ಕಾಂಗ್ರೆಸ್ ನಾಯಕ ಹರೇಶ್ವರ ಗೋಸ್ವಾಮಿ ಸಲ್ಲಿಸಿದ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಏಪ್ರಿಲ್ 20ರಂದು ಪ್ರತಿಕ್ರಿಯಿಸಿದ ಮಣಿಪುರ ಗೃಹ ಇಲಾಖೆ ಸಚಿವಾಲಯವು ಅಂಕಿಅಂಶಗಳನ್ನು ಒದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಮಣಿಪುರ | ಮಕ್ಕಳ ಹತ್ಯೆ ವಿರುದ್ಧ ಭುಗಿಲೆದ್ದ ಆಕ್ರೋಶ: ನಿಷೇಧಾಜ್ಞೆ ಧಿಕ್ಕರಿಸಿ ಬೀದಿಗಿಳಿದ ಜನ

2023ರ ಮೇ ತಿಂಗಳಿನಿಂದ ಜನಾಂಗೀಯ ಹಿಂಸಾಚಾರದಲ್ಲಿ ಸಾವುಗಳು ಮತ್ತು ಗಾಯಗೊಂಡವರ ಸಂಖ್ಯೆಯ ಕುರಿತು, ಇಲಾಖೆ ಮಾಹಿತಿ ನೀಡಿದೆ. ಸಂಬಂಧಿಕರಿಗೆ ನೀಡಿದ ಪರಿಹಾರದ ಪ್ರಕಾರ 217 ಜನರು ಮೃತಪಟ್ಟಿರುವುದಾಗಿ ತಿಳಿಸಿದೆ.

2026 ಮಾರ್ಚ್‌ 10ರ ಲೆಕ್ಕಾಚಾರದಂತೆ ನಿರಾಶ್ರಿತರ ಶಿಬಿರಗಳ ಸಂಖ್ಯೆ 174ರಷ್ಟಿದೆ. ಮಣಿಪುರ ಪೊಲೀಸ್ ವಸತಿ ನಿಗಮ ಲಿಮಿಟೆಡ್ 3,000 ಪೂರ್ವನಿರ್ಮಿತ ಮನೆಗಳನ್ನು ನಿರ್ಮಿಸಿದೆ ಎಂದು ಮಾಹಿತಿ ನೀಡಿದೆ. 7,894 ಮನೆಗಳು ಸಂಪೂರ್ಣವಾಗಿ ನಾಶವಾಗಿದೆ. 2,646 ಮನೆಗಳು ಭಾಗಶಃ ನಾಶವಾಗಿವೆ ಎಂದು ಇಲಾಖೆ ಹೇಳಿದೆ.

ಸ್ಥಳಾಂತರಗೊಂಡ ವ್ಯಕ್ತಿಗಳ ಮಾಹಿತಿಯನ್ನು ಪಡೆಯಲು ಗೋಸ್ವಾಮಿ ಅವರು ಏಳು ತಿಂಗಳು ಪ್ರಯತ್ನಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಣಿಪುರ ಜನಾಂಗೀಯ ಹಿಂಸಾಚಾರ

ಮಣಿಪುರದಲ್ಲಿ 2023ರ ಮೇ ತಿಂಗಳಿಂದ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂಗಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಸರ್ಕಾರ ಪರಿಹಾರ ನೀಡಿದ ಲೆಕ್ಕಾಚಾರದಲ್ಲಿ 217 ಮಂದಿ ಹಿಂಸಾಚಾರದಲ್ಲಿ ಮೃತಪಟ್ಟಿರುವುದಾಗಿ ಉಲ್ಲೇಖಿಸಲಾಗಿದೆ. ಆದರೆ 2024ರ ನವೆಂಬರ್‌ನಿಂದ ಈವರೆಗೆ 250ಕ್ಕೂ ಅಧಿಕ ಮಂದಿ ಹಿಂಸಾಚಾರದಲ್ಲಿ ಮೃತಪಟ್ಟಿರುವುದಾಗಿ ಹಲವು ಮಾಧ್ಯಮಗಳು ಹೇಳುತ್ತವೆ. 60,000ಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ.

ಈ ಹಿಂಸಾಚಾರವು ರಾಜಕೀಯ ಅಸ್ಥಿರತೆಗೂ ಕಾರಣವಾಗಿದೆ. ಹಿಂಸಾಚಾರವನ್ನು ನಿಯಂತ್ರಿಸಲಾಗದ ಈ ಹಿಂದಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ 2025ರ ಫೆಬ್ರವರಿ 9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅದೇ ವರ್ಷದ ಫೆಬ್ರವರಿ 13ರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಲಾಗಿತ್ತು.

ಸುಮಾರು ಒಂದು ವರ್ಷದ ರಾಷ್ಟ್ರಪತಿ ಆಳ್ವಿಕೆಯ ನಂತರ, 2026ರ ಫೆಬ್ರವರಿಯಲ್ಲಿ ಮಣಿಪುರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಯುಮನಾಮ್ ಖೇಮ್‌ಚಂದ್ ಸಿಂಗ್ (Yumnam Khemchand Singh) ಅವರು ಮಣಿಪುರದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಹೊಸ ಸರ್ಕಾರ ರಚನೆಯಾದ ನಂತರವೂ ರಾಜ್ಯದಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲಲ್ಲಿ ಹಿಂಸಾಚಾರ, ಗಲಭೆ ನಡೆಯುತ್ತಲೇ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...