2023ರ ಭಾರತದ ಪ್ರಾಕೃತಿಕ ವಿಕೋಪ, ಹಿಂಸಾಚಾರ: 5 ಲಕ್ಷ ಮಂದಿ ಸ್ಥಳಾಂತರ

Date:

ಭಾರತದಲ್ಲಿ 2013ರಲ್ಲಿ ಉಂಟಾದ ನೆರೆ, ಚಂಡಮಾರುತಗಳು, ಭೂಕಂಪ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪ ಗಳಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮೂಲ ನೆಲೆಯಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಜಿನಿವಾ ಮೂಲದ ಆಂತರಿಕ ಸ್ಥಳಾಂತರ ಮೇಲ್ವಿಚಾರಣೆ ಕೇಂದ್ರ(ಐಡಿಎಂಸಿ) ವರದಿ ನೀಡಿದೆ.

- Advertisement -

ಐಡಿಎಂಸಿಯ ವಾರ್ಷಿಕ ವರದಿ ‘ಆಂತರಿಕ ಸ್ಥಳಾಂತರದ ಮೇಲೆ ಜಾಗತಿಕ ವರದಿ’ಯು ಭಾರತದಲ್ಲಿ ಸ್ಥಳಾಂತರಗೊಂಡವರ ಸಂಖ್ಯೆ 2022ರಿಂದ 2023ರಕ್ಕೆ ಹೋಲಿಸಿದರೆ ತೀವ್ರ ಕುಸಿತಗೊಂಡಿದೆ. ಹವಾಮಾನ ಬದಲಾವಣೆ ಆಗಾಗ ಕೆಲವು ಅಪಾಯಗಳನ್ನು ತಂದೊಡ್ಡುತ್ತದೆ ಹಾಗೂ ಸಮುದಾಯಗಳನ್ನು ಹೆಚ್ಚು ದುರ್ಬಲಗೊಳಿಸುತ್ತದೆ ಎಂದು ವರದಿಯು ಒತ್ತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

2022ರಲ್ಲಿ ಪ್ರಾಕೃತಿಕ ವಿಕೋಪಗಳಿಂದ 25 ಲಕ್ಷ ಮಂದಿ ಸ್ಥಳಾಂತರಗೊಂಡಿದ್ದರು. 2023ರಲ್ಲಿ ಈ ಸಂಖ್ಯೆ 5,28,000ಕ್ಕೆ ಇಳಿದಿದೆ ಎಂದು ಐಡಿಎಂಸಿ ವರದಿ ತಿಳಿಸಿದೆ.

ಆದಾಗ್ಯೂ ಈಶಾನ್ಯ ರಾಜ್ಯ ಮಣಿಪುರಲ್ಲಿ 2023ರಲ್ಲಿ ನಡೆದ ಹಿಂಸಾಚಾರ ಹಾಗೂ ಘರ್ಷಣೆಯಲ್ಲಿ 67 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ಈ ಸಂಖ್ಯೆ ಈ ವರ್ಷ ಹೆಚ್ಚಿದ್ದು, ಕಳೆದ ವರ್ಷ 2022ರಲ್ಲಿ 1000 ಮಂದಿ ಮಾತ್ರ ಹಿಂಸಾಚಾರದಿಂದ ಸ್ಥಳಾಂತಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಪ್ರವಾಹ ಹಾಗೂ ಚಂಡಮಾರುತದಿಂದ ಜನರು ತಮ್ಮ ಮನೆಗಳನ್ನು ಬಿಟ್ಟು ತೆರಳಲು ಕಾರಣವಾಗಿದ್ದು, ಸಾಮಾನ್ಯವಾಗಿ ಪ್ರಾಕೃತಿಕ ವಿಕೋಪ ಉಂಟಾದ ಸ್ಥಳಗಳಲ್ಲಿಯೇ ಆಗಾಗ ಈ ಘಟನೆ ಹೆಚ್ಚು ಸಂಭವಿಸುತ್ತದೆ.

ಏಳು ವರ್ಷಗಳಲ್ಲಿ ಮೊದಲ ಬಾರಿ 2023ರ ಮಧ್ಯದಲ್ಲಿ ಉಂಟಾದ ಎಲ್‌ನಿನೊ ಪರಿಣಾಮ ಬದಲಾವಣೆಗೊಂಡಿರುವುದು ಕೂಡ ಸ್ಥಳಾಂತರಗೊಂಡವರ ಸಂಖ್ಯೆ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ. ಈ ಬಾರಿ ಭಾರತದಲ್ಲಿ ಮಳೆ ಕಡಿಮೆಯಾಗಿದ್ದು, ಅದರ ಪರಿಣಾಮ ಪ್ರವಾಹ ಸಂಬಂಧಿತ ವಿಕೋಪಗಳು ಕೂಡ ಇಳಿಕೆಯಾಗಿವೆ ಎಂದು ಐಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಎಲ್‌ನಿನೊ ಪರಿಣಾಮಗಳು ಬದಲಾವಣೆಯಿಂದ ಈ ಬಾರಿ ನೈರುತ್ಯ ಮುಂಗಾರಿನಲ್ಲಿ ಶೇ.5.6 ರಷ್ಟು ಕಡಿಮೆಯಾಗಿದೆ. ವರದಿ ಪ್ರಕಾರ 1,05,000 ಮಂದಿ ಗುಜರಾತ್‌ ಮತ್ತು ರಾಜಸ್ಥಾನದಿಂದ, 91 ಸಾವಿರ ಅಸ್ಸಾಂನಿಂದ ಹಾಗೂ 27 ಸಾವಿರ ದೆಹಲಿಯಿಂದ ಪ್ರವಾಹ ಮುಂತಾದ ಪರಿಸ್ಥಿತಿಯಿಂದಾಗಿ ಸ್ಥಳಾಂತರಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...