ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

Date:

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ, ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಬುಧವಾರ ಓವೈಸಿ ಪರ ವಕೀಲ ನಿಜಾಮುದ್ದೀನ್ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿಯನ್ನು ಉಲ್ಲೇಖಿಸಿ, ತುರ್ತು ವಿಚಾರಣೆಗೆ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ಇದನ್ನೂ ಓದಿ: ವಕ್ಫ್ ಕಾಯ್ದೆ ಬೆಂಬಲಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಬಿಜೆಪಿ ಆಡಳಿತವಿರುವ 6 ರಾಜ್ಯಗಳು

ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಥವಾ ದೊಡ್ಡ ಮಟ್ಟದಲ್ಲಿ ತೆಗೆದುಹಾಕಲಾಗುತ್ತಿದೆ. ಆಯೋಗವು ಎಸ್‌ಐಆರ್ ಪ್ರಕ್ರಿಯೆಯನ್ನು ಕೈಗೊಂಡಿರುವ ವಿಧಾನ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರವಾಗಿದೆ ಎಂದು ಓವೈಸಿ ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.

ಹಾಗೆಯೇ ಈಗಾಗಲೇ ಎಸ್‌ಐಆರ್ ವಿರುದ್ಧ ಸಲ್ಲಿಸಲಾಗಿರುವ ಇತರ ಅರ್ಜಿಗಳ ಜೊತೆಗೇ ತಮ್ಮ ಅರ್ಜಿಯನ್ನೂ ಸೇರಿಸಿ ವಿಚಾರಣೆ ನಡೆಸಬೇಕೆಂದು ಓವೈಸಿ ಪರ ವಕೀಲರು ಕೋರಿದ್ದಾರೆ.

ಅರ್ಜಿಯ ಉಲ್ಲೇಖವನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು, ವಿಷಯವನ್ನು ಪರಿಶೀಲಿಸಿ ಸಂಬಂಧಿಸಿದ ಇತರ ಅರ್ಜಿಗಳೊಂದಿಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ. ಇನ್ನೊಂದೆಡೆ ಈಗಾಗಲೇ ಇಂಡಿಯಾ ಒಕ್ಕೂಟದ ನಾಯಕರು ಎಸ್‌ಐಆರ್ ವಿರುದ್ಧ, ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅರ್ಜಿ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಪ್ರದೇಶ ಬಿಜೆಪಿಯಲ್ಲಿ ಒಡಕಿನ ಕಿಡಿ ಹೊತ್ತಿಸಿದ ಶಿವರಾಜ್ ಸಿಂಗ್ ಚೌಹಾಣ್ ಗುಡುಗು

ಮಧ್ಯಪ್ರದೇಶದಲ್ಲಿ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರದ ಮುಖವಾಡ ಕಳಚಿಬಿದ್ದಿದ್ದು, ಪಕ್ಷದೊಳಗಿನ ಅಧಿಕಾರದ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ಪ್ರತಿದಿನ 1.33 ಲಕ್ಷ ನೋಟಿಸ್‌ಗಳ ವಿಲೇವಾರಿ: ದೆಹಲಿಯಲ್ಲಿ SIR ಪ್ರಕ್ರಿಯೆ ಚುರುಕು

ಸೆಪ್ಟೆಂಬರ್ 30ರಿಂದ ಅಕ್ಟೋಬರ್ 12ರವರೆಗಿನ ಸುಮಾರು 12 ದಿನಗಳ ಅವಧಿಯಲ್ಲಿ ದೆಹಲಿಯ...

ಬಸವಕಲ್ಯಾಣ | ಸಹಬಾಳ್ವೆಯಿಂದ ಉತ್ತಮ ಸಮಾಜ ನಿರ್ಮಾಣ : ಬಾಬುರಾವ್ ಮೂಡುಬಿ

ಸಮಾಜದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಮನೋಭಾವದಿಂದ ಬದುಕಿದಾಗ...