ಕೋಲ್ಡ್ರಿಫ್ ಸಿರಪ್ ದುರಂತ: ಮಕ್ಕಳ ಸಾವುಗಳಿಗೆ ಕಾರಣವಾದ ಔಷಧ ಕಂಪನಿ ಮಾಲೀಕ ರಂಗನಾಥನ್ ಬಂಧನ

Date:

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕನಿಷ್ಠ 19 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್‌ರಿಫ್ ಕಫ್ ಸಿರಪ್ ತಯಾರಿಕಾ ಕಂಪನಿ ಶ್ರೀಸನ್ ಫಾರ್ಮಾಸ್ಯೂಟಿಕಲ್ಸ್‌ನ ಮಾಲೀಕ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಕಳೆದ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಸಿರಪ್‌ನಲ್ಲಿ ವಿಷಕಾರಿ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದೆ. ರಂಗನಾಥನ್ ಅವರನ್ನು ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ತೆಗೆದುಕೊಂಡ ಬಳಿಕ ಬಂಧನಕ್ಕೊಳಗಾಗಿದ್ದಾರೆ. ಅವರನ್ನು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಗೆ ಕರೆತರಲಾಗುವುದು, ಅಲ್ಲಿ ಹೆಚ್ಚಿನ ಸಾವುಗಳು ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯು ಬಿಡುಗಡೆ ಮಾಡಿದ 26 ಪುಟಗಳ ವರದಿಯಲ್ಲಿ, ಕಂಪನಿಯ ಕಾರ್ಖಾನೆಯಲ್ಲಿ ಅಸಹ್ಯಕರ ಪರಿಸ್ಥಿತಿಗಳಲ್ಲಿ ಸಿರಪ್ ತಯಾರಿಸಲಾಗುತ್ತಿದ್ದುದನ್ನು ಬಹಿರಂಗಪಡಿಸಿದೆ. 350ಕ್ಕೂ ಹೆಚ್ಚು ಉಲ್ಲಂಘನೆಗಳನ್ನು ವರದಿ ಮಾಡಲಾಗಿದ್ದು,ಫಾರ್ಮಾ ಗ್ರೇಡ್ ಅಲ್ಲದ ರಾಸಾಯನಿಕಗಳ ಬಳಕೆ, ಮತ್ತು ನೈಜ ಪ್ರಮಾಣಕ್ಕಿಂತ ಹೆಚ್ಚಾದ ವಿಷಕಾರಿ ಡೈಇಥಿಲಿನ್ ಗ್ಲೈಕಾಲ್ (ಶೇ 48) ಮಿಶ್ರಣ ಸೇರಿದಂತೆ ಹಲವು ಗಂಭೀರ ಅಕ್ರಮಗಳು ಪತ್ತೆಯಾಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಬಿಹಾರ ಗೆಲ್ಲಲು ಮೋದಿ ರಣತಂತ್ರ- ಹಣದ ಹೊಳೆ, ಆಶ್ವಾಸನೆಗಳ ಮಳೆ!

ಕಂಪನಿಗೆ ಉತ್ತಮ ತಯಾರಿಕಾ ಪ್ರಮಾಣಪತ್ರ (GMP) ಇರದಿದ್ದರೂ, ಅವರು ಔಷಧ ತಯಾರಿಕೆ ಮತ್ತು ಮಾರಾಟ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ನಿಯಂತ್ರಣ ಮಂಡಳಿ ಕಂಪನಿಯ ಪರವಾನಗಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಉತ್ಪಾದನೆ ನಿಲ್ಲಿಸಲು ಆದೇಶಿಸಿದೆ. ಈ ಬೆಳವಣಿಗೆಯ ನಂತರ, ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ (CDSCO) ಮತ್ತು ಆರೋಗ್ಯ ಸಚಿವಾಲಯ ಕಂಪನಿಯ ತಯಾರಿಕಾ ಪರವಾನಗಿ ರದ್ದುಪಡಿಸಲು ಶಿಫಾರಸು ಮಾಡಿವೆ.

ಆರೋಗ್ಯ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಔಷಧ ತಯಾರಿಕಾ ಘಟಕಗಳಲ್ಲಿ ನಿಯಮ ಪಾಲನೆ ಖಚಿತಪಡಿಸುವ ಜವಾಬ್ದಾರಿ ರಾಜ್ಯ ಔಷಧ ನಿಯಂತ್ರಕರದ್ದಾಗಿದೆ. ತಯಾರಿಕಾ ಪರವಾನಗಿ (Form 25) ನೀಡುವುದು ಮತ್ತು ರದ್ದುಪಡಿಸುವ ಅಂತಿಮ ನಿರ್ಧಾರವನ್ನು ರಾಜ್ಯ ಔಷಧ ನಿಯಂತ್ರಕವೇ ಕೈಗೊಳ್ಳಲಿದೆ .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...