ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

Date:

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ ಕಳವು ಮಾಡಿದ್ದಾರೆ. ಸ್ಮರಣಿಕೆಗಳನ್ನೂ ಕದ್ದಿದ್ದಾರೆ ಎಂದು ಮಾಜಿ ಈಜುಗಾರ್ತಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬುಲಾ ಚೌಧರಿ ಆರೋಪಿಸಿದ್ದಾರೆ.

- Advertisement -

ದಕ್ಷಿಣ ಏಷ್ಯಾ ಫೆಡರೇಶನ್ (SAF) ಕ್ರೀಡಾಕೂಟದಲ್ಲಿ ಆರು ಬಾರಿ ಚಿನ್ನದ ಪದಕ ವಿಜೇತೆ ಚೌಧರಿ, “ನಾನು ಜೀವನದಲ್ಲಿ ಪಡೆದ ಎಲ್ಲವನ್ನೂ ಕಳೆದುಕೊಂಡೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ಬಜರಂಗ್ ಪೂನಿಯ

“ನನ್ನ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಮೂಲಕ ನನ್ನ ಇಡೀ ಜೀವನದಲ್ಲಿ ಗಳಿಸಿದ ಎಲ್ಲವನ್ನೂ ಕಳ್ಳರು ಕದ್ದಿದ್ದಾರೆ. ಎಸ್‌ಎಎಫ್‌ ಕ್ರೀಡಾಕೂಟದಲ್ಲಿ ನಾನು ಗೆದ್ದ ಆರು ಚಿನ್ನದ ಪದಕಗಳು ಮತ್ತು ಪದ್ಮಶ್ರೀ ಪದಕ ಸೇರಿದಂತೆ ಎಲ್ಲಾ ಪದಕಗಳನ್ನು ಕದ್ದಿದ್ದಾರೆ” ಎಂದು ತಿಳಿಸಿದ್ದಾರೆ.

ಕಳ್ಳರು ಹಲವು ಸ್ಮರಣಿಕೆಗಳನ್ನು ಕದ್ದಿದ್ದಾರೆ ಆದರೆ ಅರ್ಜುನ ಪ್ರಶಸ್ತಿ ಮತ್ತು ಟೆನ್ಸಿಂಗ್ ನಾರ್ಗೆ ಪ್ರಶಸ್ತಿ ಪದಕಗಳನ್ನು ಬಿಟ್ಟು ಹೋಗಿದ್ದಾರೆ. ಅವು ಗಾತ್ರದಲ್ಲಿ ಚಿಕ್ಕದಾಗಿರುವುದರಿಂದ ಅದನ್ನು ನೋಡಿಲ್ಲ ಅನಿಸುತ್ತದೆ ಎಂದು ಚೌಧರಿ ಹೇಳಿದ್ದಾರೆ.

“ಅವರು ಪದಕಗಳನ್ನು ಏಕೆ ತೆಗೆದುಕೊಳ್ಳುತ್ತಾರೆ? ಅದರಿಂದ ಹಣ ಸಿಗುವುದಿಲ್ಲ. ಅವುಗಳು ನನ್ನ ಜೀವನದ ಸಂಪತ್ತು, ನನ್ನ ವೃತ್ತಿಜೀವನದ ಫಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನದಂದು ಚೌಧರಿಯವರು ತಮ್ಮ ಸಹೋದರ ಹಿಂದ್‌ಮೋಟರ್‌ನಲ್ಲಿರುವ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದಿನ ಗೇಟ್ ಮುರಿದು ಕೊಠಡಿಗೆ ನುಗ್ಗಿ ಲೂಟಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...