ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರ ಎನ್‌ಕೌಂಟರ್

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೇರಿದಂತೆ ಮೂವರನ್ನು ಶ್ರೀನಗರದಲ್ಲಿ ಆಪರೇಷನ್ ಮಹಾದೇವ್ ನಡೆಸಿ ಎನ್‌ಕೌಂಟರ್ ಮಾಡಲಾಗಿದೆ. ಮೂವರು ಪಾಕಿಸ್ತಾನಿ ಭಯೋತ್ಪಾದಕರು ಎಂದು ವರದಿಯಾಗಿದೆ.

- Advertisement -

ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಸುಲೇಮಾನ್ ಶಾ, ಮೂಸಾ ಫೌಜಿ ಎಂದೂ ಕರೆಯಲ್ಪಡುವ ಉಗ್ರನ ಹತ್ಯೆ ಮಾಡಲಾಗಿದ್ದು ಈತ 26 ಪ್ರವಾಸಿಗರನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ಪ್ರಮುಖ ಸಂಚುಕೋರ ಮತ್ತು ಕಾರ್ಯನಿರ್ವಾಹಕ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿಯ ನಂತರದ ಯುದ್ಧೋನ್ಮಾದ ಸರಿಯೇ?

ಪಾಕಿಸ್ತಾನ ಸೇನೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ಸುಲೇಮಾನ್‌ನ ಬಗ್ಗೆ ಸುಳಿವು ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದರು. ಇನ್ನುಳಿದಂತೆ ಅಬು ಹಮ್ಜಾ ಮತ್ತು ಯಾಸಿರ್ ಎಂಬವರ ಹತ್ಯೆಯಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ, “ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದ್ದಾರೆ. ಇನ್ನು ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ, ಭಯೋತ್ಪಾದಕರ ಅಡಗುತಾಣದಿಂದ 17 ಗ್ರೆನೇಡ್‌ಗಳು, ಒಂದು ಎಂಎ ಕಾರ್ಬೈನ್ ಮತ್ತು ಎರಡು ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...