ಪಹಲ್ಗಾಮ್ ದಾಳಿ | ಭಾರತ ದುಃಖದಲ್ಲಿದ್ದರೂ ಚುನಾವಣಾ ರಾಜ್ಯ ಬಿಹಾರಕ್ಕೆ ಹಾರಿದ ಪ್ರಧಾನಿ ಮೋದಿ

Date:

ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ ಹಾರಿದ್ದಾರೆ.

- Advertisement -

ಪಹಲ್ಗಾಮ್‌ ದಾಳಿಯಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಏಪ್ರಿಲ್ 24ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಗದಿಯಾಗಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ರದ್ದುಗೊಳಿಸಿದ್ದಾರೆ. ಆದರೂ, ಚುನಾವಣೆಗೆ ಸಜ್ಜಾಗಿರುವ ಬಿಹಾರಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಾನ್ಪುರದಲ್ಲಿ 20,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಬೇಕಿತ್ತು. ಆದರೆ, ಇತ್ತೀಚಿನ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಜನರ ದುಃಖತಪ್ತ ಮನಸ್ಥಿತಿ ಮತ್ತು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಕಾನ್ಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಆಲ್ ಇಂಡಿಯಾ ರೇಡಿಯೋ ವರದಿ ಮಾಡಿದೆ.

ಆದಾಗ್ಯೂ, ಮೋದಿ ಅವರು ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ ಗುರುವಾರ ಭೇಟಿ ನೀಡಿದ್ದಾರೆ. ಅವರು ಬಿಹಾರದ ಮಧುಬನಿಗೆ ಭೇಟಿ ನೀಡಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು 13,480 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಭಯೋತ್ಪಾದಕ ದಾಳಿಯ ಸುದ್ದಿ ಬಂದ ಬಳಿಕ, ಪ್ರಧಾನಿ ಮೋದಿ ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಬುಧವಾರ ಬೆಳಗ್ಗೆ ಭಾರತಕ್ಕೆ ಮರಳಿದರು. ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಸಭೆ ನಡೆಸಿದ್ದಾರೆಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...