ಗಡಿ ದಾಟಲು ಪ್ರಯತ್ನಿಸುತ್ತಿದ್ದ ಪಾಕ್ ಪ್ರಜೆ ಭಾರತೀಯ ಸೇನೆಯ ಗುಂಡಿಗೆ ಬಲಿ

Date:

ಪಂಜಾಬ್‌ನ ಗಡಿಯ ಬಳಿ ಗಡಿ ನುಸುಳಲು ಪ್ರಯತ್ನಿಸುತ್ತಿದ್ದ ಪಾಕ್‌ ಪ್ರಜೆಯೊಬ್ಬ ಗಡಿ ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾನೆ. ಸೇನೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಗಡಿ ದಾಟುತ್ತಿದ್ದಾಗ ಯೋಧರು ಗುಂಡು ಹಾರಿಸಿದ್ದಾರೆ.

- Advertisement -

ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ನಂತರ ಉಭಯ ದೇಶಗಳಲ್ಲಿ ಬಿಗುವಿನ ವಾತಾವರಣ ಮತ್ತಷ್ಟು ಹೆಚ್ಚಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5ನೇ ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಗುರುವಾರ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆಯು ಭಾರತದ ಅಡಿಯಲ್ಲಿರುವ ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಈ ಶೆಲ್ ದಾಳಿಯಿಂದ 15 ಮಂದಿ ನಾಗರಿಕರು ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಎಲ್‌ಒಸಿಯ ಪ್ರದೇಶವಾಗಿರುವ ಪೂಂಚ್ ಮತ್ತು ರಾಜೌರಿ, ತಂಗ್ದಾರ್ ಪ್ರದೇಶಗಳಲ್ಲಿನ ಜನವಸತಿಯ ಪ್ರದೇಶಗಳ ಹಲವೆಡೆ ಶೆಲ್ ದಾಳಿ ನಡೆಸಿರುವ ಪಾಕಿಸ್ತಾನವು, ನಾಗರಿಕರನ್ನು ಗುರಿಯಾಗಿಸಿರುವುದಾಗಿ ವರದಿಯಾಗಿದೆ.

ಬುಧವಾರ ತಡರಾತ್ರಿ ಆರಂಭವಾದ ಶೆಲ್ ದಾಳಿಯು ಭಾರತದ ಮುಂಚೂಣಿ ಠಾಣೆಗಳು ಮತ್ತು ಹತ್ತಿರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿದೆ. ಮೋರ್ಟರ್ ಗುಂಡುಗಳು ಮತ್ತು ಫಿರಂಗಿ ಗುಂಡಿನ ದಾಳಿಗಳು ಹಳ್ಳಿಗಳ ಬಳಿ ಅಪಾಯಕಾರಿಯಾಗಿ ಬಿದ್ದವು. ಭಾರತದ ಇತ್ತೀಚಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯವನ್ನು ಸ್ಪಷ್ಟ ಕದನ ವಿರಾಮ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಪ್ರಚೋದನೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...