ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.
ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ ಸುಮಾರು 26 ಭಾರತೀಯರನ್ನು ಕೊಲೆ ಮಾಡಿತ್ತು. ಇದಾದ ಬಳಿಕ ಸಿಂಧೂ ನದಿ ಒಪ್ಪಂದ ಸೇರಿದಂತೆ ಭಾರತ ಪಾಕಿಸ್ತಾನದೊಂದಿಗಿನ ಹಲವು ಒಪ್ಪಂದಗಳನ್ನು ಕೈಬಿಡಲಾಗಿದೆ. ಈ ನಡುವೆ ಏಪ್ರಿಲ್ 23ರಂದು ಬಿಎಸ್ಎಫ್ ಯೋಧನನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿತ್ತು.
ಇದನ್ನು ಓದಿದ್ದೀರಾ? ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್ಎಫ್ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ
ಇನ್ನು ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಸದ್ಯ ಕದನ ವಿರಾಮ ಒಪ್ಪಂದ ನಡೆದಿದೆ.
VIDEO | Punjab: Visuals from Attari Border.
— Press Trust of India (@PTI_News) May 14, 2025
Pakistan handed over BSF jawan Purnam Shaw, apprehended by Rangers on April 23, at Attari border, earlier today.#BSF #AttariBorder
(Full video available on PTI Videos – https://t.co/n147TvqRQz) pic.twitter.com/3nqs1BHjX5
ಇದಾದ ಬಳಿಕ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಬೆಳಿಗ್ಗೆ 10:30ಕ್ಕೆ ಪಾಕಿಸ್ತಾನ ರೇಂಜರ್ಸ್ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಹಸ್ತಾಂತರಿಸಿದೆ. ಹಸ್ತಾಂತರವನ್ನು ಶಾಂತಿಯುತವಾಗಿ ಮತ್ತು ಶಿಷ್ಟಾಚಾರಕ್ಕೆ ಅನುಗುಣವಾಗಿ ನಡೆಸಲಾಗಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.